Homeಕರ್ನಾಟಕಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

ಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ನನ್ನ ಮೇಲೆ ಭರವಸೆಯಿಟ್ಟು ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ನನ್ನನ್ನು ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡಿರುವ ಸೋನಿಯಾ ಗಾಂಧಿಯವರನ್ನು ಇಂದು ದೆಹಲಿಯಲ್ಲಿ ಭೇಟಿಮಾಡಿ ಕೃತಜ್ಞತೆ ಸಲ್ಲಿಸಿದ್ದೇನೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮಾಡಬೇಕಾದ ಕೆಲಸಗಳ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ಅವರು ನೀಡಿದರು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಯಾರಾದರೂ ಬರಬಹುದು ಎಂದಿದ್ದೆ, ಅದನ್ನೇ ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ತೋರಿಸಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು, ಸರ್ಕಾರವನ್ನು ಬೀಳಿಸಿ ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನನ್ನ ನಿರ್ಧಾರ ಅಚಲ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಪಕ್ಷ ಸೇರಲು ಇಚ್ಛೆಯನ್ನು ವ್ಯಕ್ತಪಡಿಸಿದಲ್ಲಿ, ನಮ್ಮ ಕಾರ್ಯಕರ್ತರು ಒಪ್ಪಿದರೆ ಮಾತ್ರ ಅಂತಹವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ನಮಗೆ ನಮ್ಮ ಕಾರ್ಯಕರ್ತರ ಅಭಿಪ್ರಾಯವೇ ಮುಖ್ಯ ಎಂದಿದಾರೆ.

ಪ್ರವಾಹ ಪರಿಸ್ಥಿತಿ ಮತ್ತು ಬಜೆಟ್‌ನ ಬೇಡಿಕೆಗಳ ಮೇಲಿನ ಚರ್ಚೆಯನ್ನು ಮೊಟಕುಗೊಳಿಸಿ ಬಿಜೆಪಿ ನಾಯಕರು ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇದು ರಾಜ್ಯದ ಜನರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ಅಧಿಕಾರ ಮುಖ್ಯವೇ ಹೊರತು ಸಾರ್ವಜನಿಕ ಹಿತಾಸಕ್ತಿಯಲ್ಲ ಎಂಬುದನ್ನು ಜನತೆ ಈಗಲಾದರೂ ಅರ್ಥಮಾಡಿಕೊಳ್ಳಬೇಕು. ಕೆಲವರು ವರ್ಗಾವಣೆಯನ್ನೇ ದಂಧೆಯಾಗಿಸಿಕೊಂಡು ವ್ಯಾಪಾರಕ್ಕೆ ಕೂತಿದ್ದಾರೆ. ಈ ವಿಚಾರ ಸದನದಲ್ಲಿ ಮುಖ್ಯವಾಗಿ ಚರ್ಚೆಯಾಗಬೇಕಿತ್ತು. ಹಲವರ ಬಣ್ಣ ಬಯಲಾಗುತ್ತೆ ಎಂದೇ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಹೋಗುತ್ತೇವೆ ಎಂದು ಸುಳ್ಳು ಹೇಳಿ ಸದನವನ್ನು 3 ದಿನಕ್ಕೆ ಇಳಿಸಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು.

ಕನಿಷ್ಠ 6 ದಿನವಾದರೂ ಸದನ ನಡೆಯಲಿ ಎಂದು ಶಕ್ತಿಮೀರಿ ಪ್ರಯತ್ನಿಸಿದೆ.‌ ಆದರೆ ಮಾನ್ಯ ಸಭಾಧ್ಯಕ್ಷರು ನಮ್ಮ ಮಾತಿಗೆ ಮನ್ನಣೆ ನೀಡಲಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಅವರು ಕುಣಿಯುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ನಾನು ಸದನದಲ್ಲಿ ಕೂಗಾಡಿದೆ. ಆದರೂ ಪ್ರಯೋಜನವಾಗಲಿಲ್ಲ. ಸದನ ಶುರುವಾದ ದಿನದಿಂದ ಮುಗಿಯುವವರೆಗೂ ಸಭಾಧ್ಯಕ್ಷರು ನನಗೆ ಸಾಕು ನೀವು ಮಾತನಾಡಿದ್ದು, ಬೇಗ ನಿಮ್ಮ ಮಾತು ಮುಗಿಸಿ ಎಂದು ಹೇಳುತ್ತಲೇ ಬಂದಿದ್ದರು. ನಾನು ಸದನದಲ್ಲಿ ವೈಯಕ್ತಿಕ ಕಷ್ಟ ಹೇಳಿಕೊಳ್ಳುತ್ತಿರಲಿಲ್ಲ, ಜನರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸದ ಸರ್ಕಾರವಿದ್ದು ಏನು ಉಪಯೋಗ? ಎಂದು ಪ್ರಶ್ನಿಸಿದರು.

ಬಿಜೆಪಿಯವರದ್ದೇನು ಜನಮನ್ನಣೆ ಗಳಿಸಿದ ಸರ್ಕಾರವಲ್ಲ. ಆಪರೇಷನ್ ಕಮಲದ ಮೂಲಕ ಹಿಂಬಾಗಿಲ ರಾಜಕಾರಣ ಮಾಡಿ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಯಡಿಯೂರಪ್ಪ ಅವರು ಅನೈತಿಕ‌ ಸರ್ಕಾರದ ಮುಖ್ಯಮಂತ್ರಿ. ಆಪರೇಷನ್ ಕಮಲದ ಅನೈತಿಕ‌ ಕೂಸಾಗಿರುವ ಈ ಸರ್ಕಾರ ಬಹುಕಾಲ ನಡೆಯಲಾರದು ಎಂದು ಸಿದ್ದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...