Homeಮುಖಪುಟಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

ಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ ಜಾರಿ ಸರ್ಕಾರದ ಕಾರ್ಯಸೂಚಿಯ ಭಾಗವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದು, ಎನ್‌ಡಿಎ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದರೂ ಹಿಂದಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪ್ರಸ್ತಾವಿತ ಕಾಯ್ದೆ ಜಾರಿಗೆ ನೂತನ ಸರಕಾರ ಕೂಡ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇಮಕಾತಿ, ಪದೋನ್ನತಿ  ಮತ್ತು ವರ್ಗಾವಣೆ ಕುರಿತ ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಸೂಕ್ತ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಸಚಿವಾಲಯದಲ್ಲಿನ ಪ್ರಮುಖ ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರ್ಜುನ್ ರಾಮ್ ಮೇಘವಾಲ್, ಸುಪ್ರೀಂಕೋರ್ಟ್, ಹೈಕೋರ್ಟ್ ಅಥವಾ ನಮ್ಮ ಸಚಿವಾಲಯ ಅಥವಾ ಅಧೀನ ನ್ಯಾಯಾಲಯಗಳಲ್ಲಿ ಎಲ್ಲೆಲ್ಲಿ ಹುದ್ದೆಗಳು ಖಾಲಿಯಿದ್ದರೂ, ನಾವು ಅವುಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಪ್ರಯತ್ನಿಸುತ್ತೇವೆ. ಏಕಕಾಲಕ್ಕೆ ಚುನಾವಣೆ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದರ ಬಗ್ಗೆ ನಾವು ನಂತರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಉನ್ನತ, ಕೆಳ ಮತ್ತು ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿ ಖಾಲಿ ಹುದ್ದೆಗಳ ಸಮಸ್ಯೆಗಳನ್ನು ಪರಿಹರಿಸುವುದು ಮೇಘವಾಲ್ ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಸರ್ಕಾರವು ಸಂಸತ್ತಿನೊಂದಿಗೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಐದು ಕೋಟಿಗೂ ಹೆಚ್ಚು ಪ್ರಕರಣಗಳು ನ್ಯಾಯಾಲಯಗಳಾದ್ಯಂತ ಬಾಕಿ ಉಳಿದಿವೆ. ಕೆಳ ನ್ಯಾಯಾಲಯಗಳು, 25 ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಒಟ್ಟು 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ.

ಪ್ರಕರಣಗಳು ವಿಲೇವಾರಿ ವಿಳಂಬಕ್ಕೆ ವಿವಿಧ ಕಾರಣಗಳಿವೆ, ಇವುಗಳಲ್ಲಿ ನ್ಯಾಯಾಂಗದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇರುವುದು ಕೂಡ ಒಂದು ಕಾರಣವಾಗಿದೆ.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...