Homeಮುಖಪುಟಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

- Advertisement -
- Advertisement -

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದಲ್ಲದೆ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ಇನ್ನು ನಡೆಯಬೇಕಿದೆ.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು.

ಈ ಮೊದಲು ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಈಗ ಪೊಲೀಸರು ಬಂಧಿಸುವ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ದೂರಿನಲ್ಲಿ ಯಾವುದೇ ಅಪರಾಧದ ಅಂಶ ಕಂಡುಬರದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಗತ್ಯ ಬಿದ್ದರೆ ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ ಕಿಡಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...