Homeಮುಖಪುಟಪೋಕ್ಸೋ ಪ್ರಕರಣ: ವಾರೆಂಟ್ ಜಾರಿ; ಯಡಿಯೂರಪ್ಪ ಬಂಧನ ಸಾಧ್ಯತೆ

ಪೋಕ್ಸೋ ಪ್ರಕರಣ: ವಾರೆಂಟ್ ಜಾರಿ; ಯಡಿಯೂರಪ್ಪ ಬಂಧನ ಸಾಧ್ಯತೆ

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಂಧನ ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯ ಆದೇಶಿಸಿದ್ದು, ಯಡಿಯುರಪ್ಪ ಬಂಧನದ ಸಾಧ್ಯತೆ ಕೂಡ ಇದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ನೋಟಿಸ್ ಕೊಟ್ಟರೂ ಬಿಎಸ್‌ವೈ ವಿಚಾರಣೆಗೆ ಹಾಜರಾಗಲಿಲ್ಲ. ಆದ್ದರಿಂದ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಈ ಕುರಿತ ಮನವಿಯನ್ನು ಸ್ವೀಕರಿಸಿದ ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ.ರಮೇಶ್ ಅವರು ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದ್ದಾರೆ.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ 17 ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮೊದಲು ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಇಂದು ಪೊಲೀಸರು ಬಂಧಿಸುವ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ದೂರಿನಲ್ಲಿ ಯಾವುದೇ ಅಪರಾಧದ ಅಂಶ ಕಂಡುಬರದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ಇನ್ನು ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ಇನ್ನು ನಡೆಯಬೇಕಿದೆ.

ಇದನ್ನು ಓದಿ: ಪೋಕ್ಸೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...

ನೇಪಾಳ ಚುನಾವಣೆ : ಪ್ರಚಂಡ ಗೆಲುವಿನತ್ತ ಆರ್‌ಎಸ್‌ಪಿ; ಬೆಂಗಳೂರಿನಲ್ಲಿ ಪದವಿ ಪಡೆದಿದ್ದ ಬಲೇಂದ್ರ ಶಾಗೆ ಪ್ರಧಾನಿ ಪಟ್ಟ?

'ಜೆನ್‌ ಝೀ ದಂಗೆ'ಯ ಬಳಿಕ ನಡೆದ ನೇಪಾಳದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯುವ ನಾಯಕ ಬಲೇಂದ್ರ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷ (ಆರ್‌ಎಸ್‌ಪಿ) ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿದೆ.  ಕಠ್ಮಂಡುವಿನ ಮಾಜಿ ಮೇಯರ್ ಮತ್ತು ಮಾಜಿ...

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

'ಅಂತಾರಾಷ್ಟ್ರೀಯ ಸಂತಾಲ್' ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ. ಪಶ್ಚಿಮ...

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...