Homeಮುಖಪುಟಮಣಿಪುರ| ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 24 ಗಂಟೆ ಭದ್ರತೆಗೆ ಬುಡಕಟ್ಟು ಸಮುದಾಯ ಆಗ್ರಹ

ಮಣಿಪುರ| ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 24 ಗಂಟೆ ಭದ್ರತೆಗೆ ಬುಡಕಟ್ಟು ಸಮುದಾಯ ಆಗ್ರಹ

- Advertisement -
- Advertisement -

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಹ್ಮಾರ್-ಕುಕಿ-ಝೋಮಿ ಬುಡಕಟ್ಟು ಜನಾಂಗದವರು ನಡೆಸುತ್ತಿದ್ದ ನಾಲ್ಕು ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ನಂತರ ಜಿರಿಬಾಮ್‌ನಲ್ಲಿ ಉದ್ವಿಗ್ನತೆ ಉಂಟಾಗಿದೆ.

ಬುಡಕಟ್ಟುಗಳ ನಾಗರಿಕ ಸಮಾಜದ ಗುಂಪು ಈ ಬಗ್ಗೆ ಹೇಳಿಕೆಯೊಂದನ್ನು ನೀಡಿದೆ. ಸ್ಥಳೀಯ ಬುಡಕಟ್ಟು ಅಡ್ವೊಕಸಿ ಕಮಿಟಿ (ಐಟಿಎಸಿ) ಹೇಳಿಕೆಯಲ್ಲಿ “ಅಧಿಕಾರಿಗಳು ತಕ್ಷಣವೇ ಅಪರಾಧಿಗಳನ್ನು ಬಂಧಿಸಿ ಮತ್ತು ಕಾನೂನಿನ ಪ್ರಕಾರ ಅವರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದೆ.

ಮೈತೇಯಿ ಸಶಸ್ತ್ರ ಗುಂಪು ಅರಂಬೈ ತೆಂಗೋಲ್ ಅಂಗಡಿಗಳಿಗೆ ಬೆಂಕಿ ಹಚ್ಚಿದೆ ಎಂದು ಐಟಿಎಸಿ ಆರೋಪಿಸಿದೆ. “ಮನೆಗಳು ಮತ್ತು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹ್ಮಾರ್ ವೆಂಗ್, ಕಾಲಿನಗರ, ಜಿರಿಬಾಮ್, ಮೈತಿ ಲೈಕೈ ಪ್ರದೇಶದಲ್ಲಿ ಅಂಗಡಿ ಮನೆಗಳು ಸುಟ್ಟು ಕರಕಲಾಗಿವೆ” ಎಂದು ಐಟಿಎಸಿ ಹೇಳಿಕೆಯಲ್ಲಿ ತಿಳಿಸಿದೆ.

ಕಾಳಿನಗರ, ಹ್ಮಾರ್ ವೆಂಗ್, ಐಬಿ ಲೈಕೈ, ಕರೋಂಗ್, ರಾನಿನ್ ವೆಂಗ್, ಮಿಷನ್ ಕಾಂಪೌಂಡ್, ವೆಂಗ್ನುಮ್, ಬಾಬುಪಾರ ವಾರ್ಡ್ ನಂ. 4 (ಬಜಾರ್) ಮತ್ತು ಉಚಾಥೋಲ್‌ನಲ್ಲಿ 24 ಗಂಟೆಗಳ ರಕ್ಷಣೆ ಅಗತ್ಯವಿದೆ ಎಂದು ಹೇಳಿದೆ.

“ಜಿರಿಬಾಮ್‌ನ ಸ್ಥಳೀಯ ಬುಡಕಟ್ಟು ಜನಾಂಗದ ಹ್ಮಾರ್, ಕುಕಿ ಮತ್ತು ಝೋಮಿ ವಾಸಿಸುವ ಪ್ರದೇಶಗಳಲ್ಲಿ ಮೈತೇಯಿ ದುಷ್ಕರ್ಮಿಗಳು ಆಸ್ತಿಗಳು ಮತ್ತು ವಸ್ತುಗಳನ್ನು ನಾಶಪಡಿಸುವುದನ್ನು, ಕದಿಯುವುದನ್ನು ತಡೆಯಲು ಕೇಂದ್ರ ಪಡೆಗಳಿಂದ 24 ಗಂಟೆಗಳ ರಕ್ಷಣೆ, ಗಸ್ತು ತಿರುಗುವಿಕೆ ತಕ್ಷಣವೇ ಆರಂಭಿಸಬೇಕು ಎಂದು ನಾವು ಅಧಿಕಾರಿಗಳಿಗೆ ಒತ್ತಾಯಿಸುತ್ತೇವೆ” ಎಂದು ಐಟಿಎಸಿ ತಿಳಿಸಿದೆ.

ಜಿರಿಬಾಮ್‌ನಲ್ಲಿ ಹ್ಮಾರ್-ಕುಕಿ-ಝೋಮಿ ಬುಡಕಟ್ಟು ಜನಾಂಗದವರ 45 ಮನೆಗಳನ್ನು ಸುಟ್ಟು ಹಾಕಲಾಗಿದೆ. ಕಳೆದ ಶನಿವಾರದಂದು ಮೈತೇಯಿ ಗುಂಪೊಂದು ಬೆಂಕಿ ಹಚ್ಚಿತ್ತು. ಆದರೆ, ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸುವ ಮುನ್ನ ಬೆಂಕಿ ನಂದಿಸಲಾಗಿದೆ ಎಂದು ಐಟಿಎಸಿ ಹೇಳಿದೆ.

40 ವರ್ಷದ ಎಲ್ ಲಾಲಿಯನ್‌ಮುವಾಂಗ್ ಎಂಬವರನ್ನು ಅವರ ಮನೆಯಿಂದ ಅರಂಬೈ ತೆಂಗೋಲ್ ಸದಸ್ಯರು ಅಪಹರಿಸಿದ್ದಾರೆ. ಈಗ ಲಾಲಿಯನ್‌ಮುವಾಂಗ್ ಕಾಣೆಯಾಗಿದ್ದಾರೆ ಎಂದು ಕೂಡ ಆರೋಪಿಸಿದೆ.

ಇದನ್ನೂ ಓದಿ : ಗ್ರಹಾಂ ಸ್ಟೇನ್ಸ್ ಮತ್ತು ಮಕ್ಕಳ ಮರ್ಡರ್‌ ಕೇಸ್‌: ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿ ವಿವಾದದಲ್ಲಿ ಒಡಿಶಾದ ನೂತನ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...