Homeಮುಖಪುಟಕುವೈತ್‌ ಅಗ್ನಿ ದುರಂತದ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಕೇರಳದ ಸಚಿವೆ ವೀಣಾ ಜಾರ್ಜ್‌ಗೆ ಕೇಂದ್ರದಿಂದ ಅಡ್ಡಿ?

ಕುವೈತ್‌ ಅಗ್ನಿ ದುರಂತದ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಕೇರಳದ ಸಚಿವೆ ವೀಣಾ ಜಾರ್ಜ್‌ಗೆ ಕೇಂದ್ರದಿಂದ ಅಡ್ಡಿ?

- Advertisement -
- Advertisement -

ಕುವೈತ್‌ ರಾಷ್ಟ್ರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದ ಸಂತ್ರಸ್ತರಾಗಿರುವ ಕೇರಳ ರಾಜ್ಯದ ಜನರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಕುವೈತ್‌ಗೆ ತೆರಳಲು ನನಗೆ ಅನುಮತಿ ನೀಡದಿರುವುದು ದುರದೃಷ್ಟಕರ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ನನಗೆ ಕುವೈತ್‌ಗೆ ಪ್ರಯಾಣಿಸಲು ಕೇಂದ್ರ ಸರಕಾರ ಅವಕಾಶ ನೀಡದಿರುವುದು ತುಂಬಾ ದುರದೃಷ್ಟಕರ. ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಕೇರಳಿಗರು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಕೇರಳಿಗರು ಎಂದು ವೀಣಾ ಜಾರ್ಜ್ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.

ಕೇರಳ ರಾಜ್ಯ ಸರ್ಕಾರವು ಗುರುವಾರ ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದು, ಗಾಯಾಳುಗಳ ಚಿಕಿತ್ಸೆಗೆ ಸಂಬಂಧಿಸಿದ ಪ್ರಯತ್ನಗಳಿಗೆ ಮತ್ತು ಮೃತದೇಹವನ್ನು ಭಾರತಕ್ಕೆ ತರಲು ವ್ಯವಸ್ಥೆ ಮಾಡಲು ಆರೋಗ್ಯ ಸಚಿವರಾದ ವೀಣಾ ಜಾರ್ಜ್ ಕುವೈತ್‌ಗೆ ಪ್ರಯಾಣಿಸಲಿದ್ದಾರೆ ಎಂದು ಹೇಳಿತ್ತು.

ಕುವೈತ್‌ನ ಮಂಗಾಫ್ ನಗರದಲ್ಲಿ ಬುಧವಾರ ಆರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಜನರು ಸಾವನ್ನಪ್ಪಿದ್ದಾರೆ. ವಸತಿ ಕಟ್ಟಡದಲ್ಲಿದ್ದ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಮೃತರಲ್ಲಿ ಕೇರಳದ 23, ತಮಿಳುನಾಡಿನ 7, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದ ತಲಾ ಓರ್ವರು ಸೇರಿದ್ದಾರೆ.

ಗಂಭೀರವಾಗಿ ಗಾಯಗೊಂಡವರ ಸಂಖ್ಯೆಯ ಬಗ್ಗೆ ರಾಯಭಾರ ಕಚೇರಿ ನಮಗೆ ನಿಖರವಾದ ಡೇಟಾವನ್ನು ನೀಡಿಲ್ಲ. ನಾವು ಅಲ್ಲಿಂದ ಸಂಗ್ರಹಿಸಿದ ಮಾಹಿತಿಯೆಂದರೆ ಒಟ್ಟು 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ 4 ಜನರು ಕೇರಳದವರು, ಆದರೆ ನನ್ನ ಭೇಟಿ ಬಗ್ಗೆ ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ, ನಾನು ಗಾಯಾಳುಗಳೊಂದಿಗೆ ಇರಲು ಬಯಸುತ್ತೇನೆ ಮತ್ತು ಅವರ ಅಗತ್ಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬಯಸುತ್ತೇನೆ ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಕುವೈತ್‌ನಿಂದ ಟೇಕ್ ಆಫ್ ಆಗಿರುವ 45 ಭಾರತೀಯ ಸಂತ್ರಸ್ತರ ಅವಶೇಷಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನವು ಶುಕ್ರವಾರ ಬೆಳಿಗ್ಗೆ ಭಾರತಕ್ಕೆ ಬರಲಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ ಘಟನೆ ಬಗ್ಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ದುರಂತದಿಂದ ಹಾನಿಗೊಳಗಾದವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಗುರುವಾರ ಕುವೈತ್‌ಗೆ ತೆರಳಿದ್ದ ಭಾರತದ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್, ಮಂಗಾಫ್‌ ದುರಂತದ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಪ್ರಜೆಗಳೊಂದಿಗೆ ಸಂವಾದ ನಡೆಸಿದ್ದಾರೆ.

ಇದನ್ನು ಓದಿ: ‘ಮಹಾರಾಜ್’ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆ ನೀಡಿದ ಗುಜರಾತ್ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...