Homeಮುಖಪುಟಎನ್‌ಡಿಎ ಸರ್ಕಾರದ ಪತನ ಸನ್ನಿಹಿತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಎನ್‌ಡಿಎ ಸರ್ಕಾರದ ಪತನ ಸನ್ನಿಹಿತವಾಗಿದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಎನ್‌ಡಿಎ ಸರ್ಕಾರ ಆಕಸ್ಮಿಕವಾಗಿ ರಚನೆಯಾಗಿದೆ ಮತ್ತು ಅದರ ಪತನ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಎನ್‌ಡಿಎ ಸರ್ಕಾರ ಆಕಸ್ಮಿಕವಾಗಿ ರಚನೆಯಾಗಿದೆ. ಮೋದಿಜಿಗೆ ಜನಾದೇಶವಿಲ್ಲ. ಇದು ಅಲ್ಪಸಂಖ್ಯಾತ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಪತನವಾಗಬಹುದು ಎಂದು ಹೇಳಿದ್ದಾರೆ. ಬಿಜೆಪಿ ತನ್ನ ಮೈತ್ರಿಗಳನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂಬ ಊಹಾಪೋಹಗಳ ಬೆನ್ನಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಈ ಹೇಳಿಕೆ ಹೊರ ಬಿದ್ದಿದೆ.

ನಾವು ಸರಕಾರವನ್ನು ಮುಂದುವರಿಸಲು ಬಯಸುತ್ತೇವೆ, ಇದರಿಂದ ದೇಶಕ್ಕೆ ಒಳ್ಳೆಯದಾಗಲಿ. ನಾವು ದೇಶವನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು, ಆದರೆ ನಮ್ಮ ಪ್ರಧಾನಿಯವರು ಏನನ್ನೂ ಚೆನ್ನಾಗಿ ಮುಂದುವರಿಸಲು ಬಿಡುವುದಿಲ್ಲ, ಆದರೆ ನಾವು ದೇಶವನ್ನು ಬಲಪಡಿಸಲು ಸಹಕರಿಸಲಿದ್ದೇವೆ ಎಂದು ಹೇಳಿದ್ದಾರೆ.

ಖರ್ಗೆ ಅವರ ಹೇಳಿಕೆಗೆ ಎನ್‌ಡಿಎ ಮಿತ್ರಪಕ್ಷಗಳು ತ್ವರಿತ ಪ್ರತಿಕ್ರಿಯೆ ನೀಡಿದೆ, ಅವರು ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ಪಿಎಂಗಳ ಅಂಕಪಟ್ಟಿಗಳನ್ನು ನೀಡುವಂತೆ ಕೇಳಿಕೊಂಡಿದೆ. ಜೆಡಿಯು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಗಳ ಇತಿಹಾಸವನ್ನು ಕೆದಕಿದೆ. ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್ ಮತ್ತು ಡಾ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯನ್ನು ಉಲ್ಲೇಖಿಸಿ ಖರ್ಗೆಯವರ ಟೀಕೆಗಳನ್ನು ಪ್ರಶ್ನಿಸಿದೆ. 1991ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 244 ಸ್ಥಾನಗಳನ್ನು ಗಳಿಸಿದರೆ, 2004ರ ಚುನಾವಣೆಯಲ್ಲಿ 114 ಸ್ಥಾನಗಳನ್ನು ಗಳಿಸಿತ್ತು ಎಂದು ಟೀಕಿಸಿದೆ.

ಎನ್‌ಡಿಎ ಸರ್ಕಾರದ ಬಗ್ಗೆ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಮದಾಸ್ ಅಠವಳೆ, ಎನ್‌ಡಿಎಗೆ ಸ್ಪಷ್ಟ ಬಹುಮತವಿದೆ. ನಾವು 292 ಲೋಕಸಭಾ ಸ್ಥಾನಗಳಲ್ಲಿ ಗೆಲುವು ಕಂಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷದ ಪಾತ್ರವನ್ನು ನಿರ್ವಹಿಸುವಂತೆ ನಾನು ಸಲಹೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗದ ಕಾರಣ ಎನ್‌ಡಿಎ ಮೈತ್ರಿಪಕ್ಷಗಳ ಸಹಕಾರದಿಂದ ಬಿಜೆಪಿ ಸರಕಾರವನ್ನು ರಚಿಸಿದೆ. 2014 ಮತ್ತು 2019ರಲ್ಲಿ ಬಿಜೆಪಿಗೆ ದೊರೆತಿದ್ದ ಬಹುಮತ ಸಿಗದ ಕಾರಣ ಬಿಜೆಪಿಗೆ ಕಳೆದ 10ವರ್ಷಗಳಲ್ಲಿ ಏಕಪಕ್ಷೀಯವಾಗಿ ಸರಕಾರ ರಚಿಸಿದಂತೆ ಈ ಬಾರಿ ಸುಲಭವಿಲ್ಲ. ಎನ್‌ಡಿಎಯ ಎಲ್ಲಾ ಮಿತ್ರ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...