ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಾಂಡ್ಲಾದಲ್ಲಿ 11 ವ್ಯಕ್ತಿಗಳು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿಕೊಂಡಿದ್ದ ಮೆನಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೈನ್‌ಪುರದ ಭೈನ್‌ವಾಹಿ ಪ್ರದೇಶದಲ್ಲಿ ಮಾಂಸಕ್ಕಾಗಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಸುಳಿವು ದೊರೆತ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
“ಪೊಲೀಸ್ ತಂಡ ಅಲ್ಲಿಗೆ ಧಾವಿಸಿತು, ಆರೋಪಿಗಳ ಹಿತ್ತಲಿನಲ್ಲಿ ಕಟ್ಟಿಹಾಕಲಾಗಿದ್ದ 150 ಹಸುಗಳನ್ನು ನಾವು ವಶಪಡಿಸಕೊಂಡಿದ್ದೇವೆ. ಎಲ್ಲ 11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಕೊಠಡಿಯಲ್ಲಿ ಪ್ರಾಣಿಗಳ ಕೊಬ್ಬು, ಜಾನುವಾರು ಚರ್ಮ ಮತ್ತು ಮೂಳೆಗಳನ್ನು ಕೂಡ ಪತ್ತೆ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.
ಸ್ಥಳೀಯ ಸರ್ಕಾರಿ ಪಶುವೈದ್ಯರು ವಶಪಡಿಸಿಕೊಂಡ ಮಾಂಸವು ದನದ ಮಾಂಸ ಎಂದು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್‌ಎ ವಿಶ್ಲೇಷಣೆಗಾಗಿ ನಾವು ಹೈದರಾಬಾದ್‌ಗೆ ಮಾದರಿಗಳನ್ನು ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿರುವುದರಿಂದ ಅವುಗಳನ್ನು ನೆಲಸಮ ಮಾಡಲಾಗಿದೆ ಎಂದು ಎಸ್‌ಪಿ ಹೇಳಿದರು.
ಶುಕ್ರವಾರ ರಾತ್ರಿ ಹಸುಗಳು ಮತ್ತು ದನದ ಮಾಂಸವನ್ನು ವಶಪಡಿಸಿಕೊಂಡ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದರು. ಉಳಿದ 10 ಮಂದಿಗಾಗಿ ಹುಡುಕಾಟ ನಡೆಸುತ್ತಿರುವಾಗ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಇಬ್ಬರು ಆರೋಪಿಗಳ ಕ್ರಿಮಿನಲ್ ಇತಿಹಾಸವನ್ನು ಸಂಗ್ರಹಿಸಲಾಗಿದ್ದು, ಉಳಿದ ವ್ಯಕ್ತಿಗಳ ಪೂರ್ವಾಪರಗಳನ್ನು ಕಂಡುಹಿಡಿಯಲು ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗಳೆಲ್ಲರೂ ಮುಸ್ಲಿಮರು ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರ ವರ್ತನೆಗೆ ಪ್ರಶಾಂತ್ ಭೂಷಣ್ ವಿರೋಧ:
ಗೋಮಾಂಸ ಪತ್ತೆಯಾಯಿತು ಎಂಬ ಕಾರಣಕ್ಕೆ ಮನೆಗಳನ್ನು ಧ್ವಂಸ ಮಾಡಿರುವ ಪ್ರಕರಣಕ್ಕೆ ಆಕ್ರೋಶ ಹೊರಹಾಕಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಇದು ಫಾರೆಸ್ಟ್ ಫ್ಯಾಸಿಸ್ಟ್ ಆಳ್ವಿಕೆ! ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.
This is fascist rule of the jungle!
Only in BJP ruled states https://t.co/P3fdUceORq— Prashant Bhushan (@pbhushan1) June 15, 2024
ಇದನ್ನೂ ಓದಿ; ‘ಇಂಡಿಯಾ ಬ್ಲಾಕ್’ನ ಐತಿಹಾಸಿಕ ಗೆಲುವು ಬಿಜೆಪಿಯನ್ನು 240 ಸ್ಥಾನಗಳಿಗೆ ಸೀಮಿತಗೊಳಿಸಿದೆ: ಎಂಕೆ ಸ್ಟಾಲಿನ್


