Homeಮುಖಪುಟದೆಹಲಿ: ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಕಾರ್ಯಕರ್ತರು

ದೆಹಲಿ: ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ ದೆಹಲಿ ಜಲ ಮಂಡಳಿ (ಡಿಜೆಬಿ) ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ.

ನೀರಿನ ಸಮಸ್ಯೆ ಸಂಬಂಧ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ, ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾದಾಗ ದೆಹಲಿ ಜಲ ಮಂಡಳಿ ಕೋಟ್ಯಾಂತರ ರೂಪಾಯಿ ಲಾಭದಲ್ಲಿತ್ತು ಎಂದು ಹೇಳಿದ್ದಾರೆ.

“ಕೇಜ್ರಿವಾಲ್ ಅವರಿಗೆ ಒಂದು ವರ್ಷಕ್ಕೂ ಹೆಚ್ಚು ಕಾಲ ಡಿಜೆಬಿ ಅಧ್ಯಕ್ಷರಾಗಿ ಅಧಿಕಾರ ನೀಡಲಾಗಿದೆ. ಒಂದು ವರ್ಷಕ್ಕೂ ಹೆಚ್ಚಿನ ಆಡಿಟ್ ವರದಿ ಕಾಣೆಯಾಗಿದೆ. ಡಿಜೆಬಿ ಭಾರೀ ಸಾಲದಲ್ಲಿದೆ ಎಂಬುವುದು ವಿಚಿತ್ರ. ಎಎಪಿಯ ಎಲ್ಲಾ ಸಚಿವರು ದೆಹಲಿಯಲ್ಲಿ ನೀರು ಕದಿಯುತ್ತಿದ್ದಾರೆ, ಟ್ಯಾಂಕರ್ ಮಾಫಿಯಾ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ದಾಂಧಲೆ ಬೆನ್ನಲ್ಲೇ ನೀರಿನ ಪೈಪ್‌ಲೈನ್‌ಗಳನ್ನು ಕಾಪಾಡುವಂತೆ ಸಚಿವೆ ಅತಿಶಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಜಲ ಸಚಿವೆ ಅತಿಶಿ ಭಾನುವಾರ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರಿಗೆ ಪತ್ರ ಬರೆದಿದ್ದು, ಮುಂದಿನ 15 ದಿನಗಳವರೆಗೆ ಪ್ರಮುಖ ಪೈಪ್‌ಲೈನ್‌ಗಳಲ್ಲಿ ಗಸ್ತು ತಿರುಗುವಂತೆ, ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ವಿನಂತಿಸಿದ್ದಾರೆ.

“ಯಮುನಾ ನದಿಯಲ್ಲಿ ನೀರಿನ ಕೊರತೆಯಿಂದಾಗಿ, ನೀರಿನ ಉತ್ಪಾದನೆಯು ಸುಮಾರು 70 ಎಂಜಿಡಿಯಷ್ಟು ಕುಸಿದಿದೆ. ದೆಹಲಿಯ ಅನೇಕ ಭಾಗಗಳು ನೀರಿನ ಕೊರತೆಯನ್ನು ಅನುಭವಿಸುತ್ತಿವೆ. ಈ ಪರಿಸ್ಥಿತಿಯಲ್ಲಿ, ಪ್ರತಿ ಹನಿ ನೀರು ಅಮೂಲ್ಯವಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಮೇದಕ್ ಹಿಂಸಾಚಾರ: ಬಿಜೆಪಿ ಜಿಲ್ಲಾಧ್ಯಕ್ಷ ಸೇರಿ 9 ಮಂದಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...