HomeಮುಖಪುಟNCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್...

NCERT ಪರಿಷ್ಕೃತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ಕೈ ಬಿಡಲು ಆಗ್ರಹಿಸಿದ ಯೋಗೇಂದ್ರ ಯಾದವ್, ಸುಹಾಸ್ ಪಾಲ್ಶಿಕರ್

- Advertisement -
- Advertisement -

ಪರಿಷ್ಕತ ಪಠ್ಯ ಪುಸ್ತಕದಿಂದ ತಮ್ಮ ಹೆಸರು ತೆಗೆಯುವಂತೆ ರಾಜಕೀಯ ಚಿಂತಕರಾದ ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ಅವರು ಸೋಮವಾರ ಎನ್‌ಸಿಇಆರ್‌ಟಿಗೆ ಪತ್ರ ಬರೆದಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಯಿಂದ ತಮ್ಮನ್ನು ಹೊರಗಿಟ್ಟ ಬಳಿಕವೂ, ಪರಿಷ್ಕೃತ ಪುಸ್ತಕದ ಲೇಖಕರ ಪಟ್ಟಿಯಲ್ಲಿ ಹೆಸರು ಇರುವುದಕ್ಕೆ ಇಬ್ಬರೂ ಆಕ್ಷೇಪ ವ್ಯಕ್ತಪಡಿಸಿದ್ದು, ಹೆಸರು ಕೈ ಬಿಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

“ರಾಜಕೀಯವಾಗಿ ಪಕ್ಷಪಾತದ ನಿಲುವು ಹೊಂದಿರುವ, ಶೈಕ್ಷಣಿಕವಾಗಿ ಅಸಮರ್ಥನೀಯ ಹಾಗೂ ಶಿಕ್ಷಣಶಾಸ್ತ್ರೀಯವಾಗಿ ನಿಷ್ಕ್ರಿಯವಾಗಿರುವ ರಾಜಕೀಯ ವಿಜ್ಞಾನದ ಪಠ್ಯಗಳನ್ನು ಸಮರ್ಥಿಸಿಕೊಳ್ಳುವ ಉದ್ದೇಶದಿಂದ ತಮ್ಮ ಹೆಸರನ್ನು ಎನ್‌ಸಿಇಆರ್‌ಟಿ ಬಳಸಿಕೊಳ್ಳುವುದು ಬೇಕಿಲ್ಲ” ಎಂದು ಯೋಗೇಂದ್ರ ಯಾದವ್ ಮತ್ತು ಸುಹಾಸ್ ಪಾಲ್ಶಿಕರ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ರಾಜ್ಯಶಾಸ್ತ್ರ ಪಠ್ಯಪುಸ್ತಕಗಳ ಮಾಜಿ ಮುಖ್ಯ ಸಲಹೆಗಾರರಾದ ಪಾಲ್ಶಿಕರ್ ಮತ್ತು ಯಾದವ್ ಅವರು ಕಳೆದ ವರ್ಷ ಪುಸ್ತಕಗಳಿಂದ ತಮ್ಮ ಹೆಸರು ಕಿತ್ತು ಹಾಕುವಂತೆ ಕೋರಿದ್ದರು. ಒಮ್ಮೆ ಹೆಮ್ಮೆಯ ಪ್ರತೀಕವಾಗಿದ್ದ ಪಠ್ಯಪುಸ್ತಕಗಳು ಇಂದು ಮುಜುಗರಕ್ಕೆ ಮೂಲವಾಗುತ್ತಿವೆ. ನಮ್ಮ ಆಕ್ಷೇಪಗಳ ಹೊರತಾಗಿಯೂ, ಪರಿಷ್ಕೃತ ಪಠ್ಯಗಳಲ್ಲಿ ನಮ್ಮ ಹೆಸರನ್ನು ಮುಖ್ಯ ಸಲಹೆಗಾರರು ಎಂದು ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ಪಠ್ಯಪುಸ್ತಕಗಳ ಪರಿಷ್ಕೃತ ಆವೃತ್ತಿಯಲ್ಲೂ ಯಾದವ್ ಮತ್ತು ಪಾಲ್ಶಿಕರ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ಉಲ್ಲೇಖಿಸಲಾಗಿದೆ.

ಎನ್‌ಸಿಆರ್‌ಟಿಯ 12 ತರಗತಿಯ ರಾಜ್ಯಶಾಸ್ತ್ರ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಬಾಬ್ರಿ ಮಸೀದಿ ಎನ್ನದೆ, ‘ಮೂರು ಗುಮ್ಮಟಗಳ ರಚನೆ’ ಎಂದು ಉಲ್ಲೇಖಿಸಿದೆ. ಇದು ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದೆ.

ಪರಿಷ್ಕೃತ ಪುಸ್ತಕದಲ್ಲಿ ಗುಜರಾತ್‌ನ ಸೋಮನಾಥದಿಂದ ಅಯೋಧ್ಯೆಯವರೆಗೆ ಬಿಜೆಪಿ ನಡೆಸಿದ ರಥಯಾತ್ರೆ, ಬಾಬ್ರಿ ಮಸೀದಿ ಧ್ವಂಸ, ಕರ ಸೇವಕರ ಪಾತ್ರ, ಮಸೀದಿ ಧ್ವಂಸದ ನಂತರದ ಕೋಮುಗಲಭೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಮತ್ತು ಅಯೋಧ್ಯೆಯಲ್ಲಿ ನಡೆದ ಘಟನೆಗಳ ಪಠ್ಯಗಳನ್ನು ಕೈ ಬಿಡಲಾಗಿದೆ.

ಇದನ್ನೂ ಓದಿ : ವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...