Homeಮುಖಪುಟಮೋದಿ ಸರ್ಕಾರ ಸೇರಿದ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ ಕೇರಳ ಜೆಡಿಎಸ್ ನಾಯಕರು

ಮೋದಿ ಸರ್ಕಾರ ಸೇರಿದ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ ಕೇರಳ ಜೆಡಿಎಸ್ ನಾಯಕರು

- Advertisement -
- Advertisement -

ಜೆಡಿ(ಎಸ್) ರಾಷ್ಟ್ರೀಯ ನಾಯಕರು ಬಿಜೆಪಿ ಜೊತೆ ಕೈ ಜೋಡಿಸಿರುವ ಹಿನ್ನೆಲೆ, ಪಕ್ಷದ ಕೇರಳ ರಾಜ್ಯ ಘಟಕದ ನಾಯಕರು ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ.

ಮಂಗಳವಾರ ತಿರುವನಂತಪುರದ ಪಕ್ಷದ ರಾಜ್ಯ ಕಚೇರಿಯಲ್ಲಿ ಸಭೆ ಸೇರಿದ ಕೇರಳ ಜೆಡಿಎಸ್ ನಾಯಕರು, ಹೊಸ ಹೆಸರು, ಚಿಹ್ನೆಯೊಂದಿಗೆ ಹೊಸ ಪಕ್ಷ ಕಟ್ಟುವ ನಿರ್ಧಾರ ಕೈಗೊಂಡಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನ ಜೆಡಿ (ಎಸ್‌) ನಾಯಕರು ಏಕಾಏಕಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಘೋಷಣೆ ಮಾಡಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪಕ್ಷದ ಕೇರಳ ಘಟಕ, “ನಾವು ಕೇರಳದಲ್ಲಿ ಆಡಳಿತರೂಢ ಎಡರಂಗದ ಜೊತೆಯೇ ಇರುತ್ತೇವೆ” ಎಂದು ಹೇಳಿದ್ದರು.

ಆರಂಭದಲ್ಲಿ ಕೇರಳದ ಜೆಡಿಎಸ್‌ ನಾಯಕರ ಮನವೊಲಿಸುವ ಪ್ರಯತ್ನ ನಡೆಸಿದ್ದ ದೇವೇಗೌಡರು ಮತ್ತು ಕುಮಾರಸ್ವಾಮಿ, ಅವರು ಒಪ್ಪದಿದ್ದಾಗ “ಕೇರಳ ಜೆಡಿಎಸ್ ಎಡರಂಗದ ಜೊತೆಯೇ ಮುಂದುವರಿಯಲಿದೆ” ಎಂದಿದ್ದರು. ಆದರೂ, ಕೇರಳದ ನಾಯಕರಿಗೆ ದೇವೇಗೌಡರು ಮತ್ತು ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಸಮಾಧಾನ ನೀಡಿರಲಿಲ್ಲ.

ಲೋಕಸಭೆಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವ ಕುಮಾರಸ್ವಾಮಿ, ಪ್ರಸ್ತುತ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಬೆಳವಣಿಗೆ ಕೇರಳ ಜೆಡಿಎಸ್‌ ನಾಯಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಹೊಸ ಪಕ್ಷದ ಕುರಿತು ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಕೇರಳ ಜೆಡಿಎಸ್ ನಾಯಕರು ಸಮಿತಿ ರಚಿಸಿದ್ದಾರೆ.

“ಹೊಸ ಪಕ್ಷದ ಹೆಸರು ಶೀಘ್ರದಲ್ಲೇ ನೋಂದಾಯಿಸಲಾಗುವುದು. ಕಾನೂನು ಸಾಧ್ಯತೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ರಾಷ್ಟ್ರೀಯ ನಾಯಕರು ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡರೆ ಕೇರಳ ಘಟಕ ಜೆಡಿಎಸ್ ಪಕ್ಷದ ಜೊತೆಯೇ ಇರಲಿದೆ” ಎಂದು ಪಕ್ಷದ ಶಾಸಕ ಮ್ಯಾಥ್ಯೂ ತೋಮಸ್ ತಿಳಿಸಿದ್ದಾರೆ.

ಸದ್ಯಕ್ಕೆ ಆರ್‌ಜೆಡಿ ಸೇರಿದಂತೆ ಯಾವುದೇ ಪಕ್ಷದೊಂದಿಗೆ ವಿಲೀನಗೊಳ್ಳದಿರಲು ಜೆಡಿಎಸ್‌ ನಿರ್ಧರಿಸಿದೆ. ಸಮಾಜವಾದಿ ಪಕ್ಷದೊಂದಿಗೆ ವಿಲೀನದ ಬಗ್ಗೆ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ಹೇಳಿವೆ.

“ಆರ್‌ಜೆಡಿ ಜೊತೆ ವಿಲೀನ ಮಾಡದಿರಲು ನಿರ್ಧರಿಸಲಾಗಿದೆ. ಆದರೆ, ಎಸ್ಪಿ ಜೊತೆ ವಿಲೀನದ ಆಯ್ಕೆಯನ್ನು ನಂತರ ನಿರ್ಧರಿಸಲಾಗುವುದು. ಇದು ಹೊಸ ಪಕ್ಷವಾಗಿರುವುದರಿಂದ ಶಾಸಕರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

“ಪಕ್ಷದ ಕೇರಳ ಘಟಕವು ಈಗಾಗಲೇ ರಾಷ್ಟ್ರೀಯ ನಾಯಕತ್ವದೊಂದಿಗಿನ ಸಂಬಂಧವನ್ನು ಕಡಿದುಕೊಂಡಿದೆ. ಹಾಗಾಗಿ, ಮತ್ತೊಮ್ಮೆ ರಾಷ್ಟ್ರೀಯ ನಾಯಕತ್ವಕ್ಕೆ ತಿಳಿಸುವ ಅಗತ್ಯವಿಲ್ಲ” ಎಂದಿದ್ದಾರೆ.

ಕೇರಳ ಜೆಡಿ (ಎಸ್) ರಾಷ್ಟ್ರೀಯ ನಾಯಕತ್ವದೊಂದಿಗಿನ ಸಂಬಂಧವನ್ನು ಕಡಿದುಕೊಂಡಿರುವುದಾಗಿ ಘೋಷಿಸಿದ್ದರೂ, ತಾಂತ್ರಿಕವಾಗಿ ಅದು ದೇವೇಗೌಡರ ನೇತೃತ್ವದ ಜೆಡಿ(ಎಸ್)ನ ಕೇರಳ ಘಟಕವಾಗಿಯೇ ಉಳಿದಿದೆ. ಸಿ ಕೆ ನಾಣು ಮತ್ತು ನೀಲಲೋಹಿತದಾಸ್ ಅವರಂತಹ ಕೆಲವು ಹಿರಿಯ ನಾಯಕರು ಪಕ್ಷದ ವರಿಷ್ಠರ ನಿರ್ಧಾರದಿಂದ ಅತೃಪ್ತರಾಗಿದ್ದಾರೆ.

ಅಧಿಕೃತ ಬಣದಿಂದ ದೂರ ಸರಿಯುವುದರಿಂದ ರಾಜ್ಯದಲ್ಲಿರುವ ಇಬ್ಬರು ಜೆಡಿಎಸ್ ಶಾಸಕರಾದ ಮ್ಯಾಥ್ಯೂ ಥಾಮಸ್ ಮತ್ತು ಕೆ ಕೃಷ್ಣನ್‌ಕುಟ್ಟಿ ಅವರನ್ನು ಅನರ್ಹಗೊಳಿಸಬಹುದು. ಈ ಹಿನ್ನೆಲೆಯಲ್ಲಿ ಮ್ಯಾಥ್ಯೂ ಥಾಮಸ್ ಅವರು ಹೊಸ ಪಕ್ಷ ಕಟ್ಟುವ ನಿರ್ಧಾರ ಪ್ರಕಟಿಸಿದ್ದಾರೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...