Homeಮುಖಪುಟಈ ವರ್ಷ 4,300 ಭಾರತೀಯ ಮಿಲಿಯನೇರ್‌ಗಳು ದೇಶ ತೊರೆಯುವ ಸಾಧ್ಯತೆ, ಹೆಚ್ಚಿನವರು ಯುಎಇಗೆ ತೆರಳಲಿದ್ದಾರೆ: ವರದಿ

ಈ ವರ್ಷ 4,300 ಭಾರತೀಯ ಮಿಲಿಯನೇರ್‌ಗಳು ದೇಶ ತೊರೆಯುವ ಸಾಧ್ಯತೆ, ಹೆಚ್ಚಿನವರು ಯುಎಇಗೆ ತೆರಳಲಿದ್ದಾರೆ: ವರದಿ

- Advertisement -
- Advertisement -

ಈ ವರ್ಷ ಸುಮಾರು 4,300 ಲಕ್ಷಾಧಿಪತಿಗಳು ಭಾರತದಿಂದ ವಲಸೆ ಹೋಗುವ ನಿರೀಕ್ಷೆಯಿದೆ. ಅವರಲ್ಲಿ ಹೆಚ್ಚಿನವರು ಯುಎಇಯಲ್ಲಿ ವಾಸಿಸಲು ನಿರ್ಧರಿಸಿದ್ದಾರೆ ಎಂದು ಅಂತಾರಾಷ್ಟ್ರೀಯ ಹೂಡಿಕೆ ವಲಸೆ ಸಲಹಾ ಸಂಸ್ಥೆಯಾದ ಹೆನ್ಲಿ ಮತ್ತು ಪಾರ್ಟ್‌ನರ್ಸ್‌ನ ಇತ್ತೀಚಿನ ವರದಿ ಹೇಳಿದೆ.

ಭಾರತವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು ಹೊಂದಿದ್ದರೂ, ಚೀನಾ ಮತ್ತು ಯುಕೆ ನಂತರ ಲಕ್ಷಾಧಿಪತಿಗಳ ವಲಸೆಯ ವಿಷಯದಲ್ಲಿ ಜಾಗತಿಕವಾಗಿ ಮೂರನೇ ಸ್ಥಾನದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಚೀನಾ ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿರುವ ಭಾರತ ಲಕ್ಷಾದಿಪತಿಗಳ ವಲಸೆಯ ವಿಷಯದಲ್ಲಿ ಚೀನಾಕ್ಕಿಂತ ಶೇಕಡಾ 30 ಶೇ. ಹಿಂದೆಯಿದೆ.

ಹೆನ್ಲಿ ಮತ್ತು ಪಾರ್ಟ್‌ನರ್ಸ್‌ನ ವರದಿಯು ಕಳೆದ ವರ್ಷ ಭಾರತದಿಂದ 5,100 ಲಕ್ಷಾದಿಪತಿಗಳು ವಿದೇಶಕ್ಕೆ ವಲಸೆ ಹೋಗಿರುವುದನ್ನು ಎತ್ತಿ ತೋರಿಸಿತ್ತು.

ಭಾರತವು ಪ್ರತಿ ವರ್ಷ ಸಾವಿರಾರು ಲಕ್ಷಾದಿಪತಿಗಳನ್ನು ಕಳೆದುಕೊಳ್ಳುತ್ತಿದೆ. ಅನೇಕರು ಯುಎಇಗೆ ವಲಸೆ ಹೋಗುತ್ತಿದ್ದಾರೆ. ಸಂಪತ್ತಿನ ಬೆಳವಣಿಗೆಯೊಂದಿಗೆ ಇದನ್ನು ತಗ್ಗಿಸಬಹುದು. ಹೊಸ ಲಕ್ಷಾದಿಪತಿಗಳನ್ನು ಸೃಷ್ಟಿಸುವುದಕ್ಕಿಂತ ಇರುವವರನ್ನು ಉಳಿಸಿಕೊಳ್ಳಬಹುದು ಎಂದು ವರದಿ ಹೇಳಿರುವುದಾಗಿ ಎನ್‌ಡಿವಿ ವರದಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ, ಭಾರತದ ಅಧಿಕ ನಿವ್ವಳ ಮೌಲ್ಯದ ವ್ಯಕ್ತಿಗಳ ನಿರಂತರ ವಲಸೆಯ ಹಿನ್ನೆಲೆ ಅನೇಕ ಭಾರತೀಯ ಖಾಸಗಿ ಬ್ಯಾಂಕ್‌ಗಳು ಯುಎಇಗೆ ವಿಸ್ತರಿಸುತ್ತಿವೆ. ಭಾರತೀಯ ಕುಟುಂಬಗಳಿಗೆ ಸಂಪತ್ತು ನಿರ್ವಹಣೆ ಸೇವೆಗಳನ್ನು ಒದಗಿಸುತ್ತಿರುವ ಕೆಲವು ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು 360 ಒನ್ ವೆಲ್ತ್ ಒಳಗೊಂಡಿವೆ ಎಂದು ವರದಿ ವಿವರಿಸಿದೆ.

ಲಕ್ಷಾದಿಪತಿಗಳ ವಲಸೆಯು ಒಂದು ದೇಶದ ವಿದೇಶಿ ವಿನಿಮಯದ ಮೇಲೆ ಗಮನಾರ್ಹ ಪರಿಣಾಮ ಬೀರುವ ವಿದ್ಯಮಾನವಾಗಿದೆ. ಹೆಚ್ಚಿನ ನಿವ್ವಳ ಮೌಲ್ಯದ ವ್ಯಕ್ತಿಗಳು ಮತ್ತೊಂದು ದೇಶಕ್ಕೆ ವಲಸೆ ಹೋಗುವಾಗ ಅವರ ಆಸ್ತಿಯ ಗಣನೀಯ ಭಾಗವು ಅವರ ಜೊತೆ ಹೋಗುತ್ತದೆ.

ಲಕ್ಷಾದಿಪತಿಗಳು ತಾಯ್ನಾಡು ತೊರೆದು ವಲಸೆ ಹೋಗಲು ಮುಖ್ಯ ಕಾರಣಗಳಲ್ಲಿ ತೆರಿಗೆ ಪ್ರಯೋಜನಗಳು, ಸುರಕ್ಷತೆ, ಆರ್ಥಿಕ ಪರಿಗಣನೆ, ನಿವೃತ್ತಿ ನಿರೀಕ್ಷೆ, ವ್ಯಾಪಾರ ಅವಕಾಶಗಳು ಮತ್ತು ಉತ್ತಮ ಜೀವನಶೈಲಿ ಸೇರಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

ಇದನ್ನೂ ಓದಿ : ಜಾತಿ ಸಮೀಕ್ಷೆಗೆ ಅನುಮೋದನೆ ನೀಡಿದ ಚಂಪೈ ಸೊರೇನ್ ನೇತೃತ್ವದ ಜಾರ್ಖಂಡ್ ಕ್ಯಾಬಿನೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...