ದೆಹಲಿಯಲ್ಲಿ ತೀವ್ರ ಜಲಕ್ಷಾಮದ ಹಿನ್ನೆಲೆ ಹರಿಯಾಣದಿಂದ ಹೆಚ್ಚುವರಿ ನೀರು ಹರಿಸುವಂತೆ ಆಗ್ರಹಿಸಿ ಸಚಿವೆ ಅತಿಶಿ ಇಂದಿನಿಂದ (ಜೂನ್ 21) ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ, ಎಎಪಿ ಸಂಸದ ಸಂಜಯ್ ಸಿಂಗ್ ಹಾಗೂ ಸಚಿವ ಸೌರಭ್ ಭಾರದ್ವಾಜ್ ಅವರು ಅತಿಶಿಗೆ ಸಾಥ್ ನೀಡಿದ್ದಾರೆ.
दिल्ली की जल मंत्री होने के नाते मैंने हरियाणा की BJP सरकार से दिल्ली के हक़ का पानी लेने के लिए हर संभव प्रयास कर लिए लेकिन हरियाणा सरकार ने दिल्ली को उसके हक़ का पानी नहीं दिया।
हरियाणा सरकार ने हिमाचल प्रदेश से आने वाला पानी भी दिल्ली नहीं आने दिया। Supreme Court के आदेश के… pic.twitter.com/kSldN5DwcJ
— AAP (@AamAadmiParty) June 21, 2024
ಉಪವಾಸ ಸತ್ಯಾಗ್ರಹ ಪ್ರಾರಂಭಿಸುವ ಮುನ್ನ ಅತಿಶಿ, ಸುನೀತಾ ಕೇಜ್ರಿವಾಲ್, ಸಂಜಯ್ ಸಿಂಗ್ ಮತ್ತು ಇತರರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿಯ ಸಮಾಧಿಗೆ ಗೌರವ ನಮನ ಸಲ್ಲಿಸಿದರು.
ಇಂದು ಮುಂಜಾನೆ, ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಅತಿಶಿ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕುಳಿತುಕೊಳ್ಳುವ ಮುನ್ನ ಕೇಜ್ರಿವಾಲ್ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ.

“ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಯ ಬಾಕಿ ನೀರನ್ನು ಬಿಡುಗಡೆ ಮಾಡುತ್ತಿಲ್ಲ. ಅನ್ಯಾಯದ ವಿರುದ್ಧ ಹೋರಾಡಬೇಕಾದರೆ ಸತ್ಯಾಗ್ರಹದ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಮಹಾತ್ಮ ಗಾಂಧೀಜಿ ಬೋಧಿಸಿದ್ದಾರೆ” ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಅತಿಶಿ ಹೇಳಿದ್ದಾರೆ.
दिल्ली में पानी की कमी बरकरार है। आज भी 28 लाख दिल्ली वालों को पानी नहीं मिल रहा। हर संभव प्रयास के बाद भी हरियाणा सरकार दिल्ली को पूरा पानी नहीं दे रही।
महात्मा गांधी ने सिखाया है कि अगर अन्याय के ख़िलाफ़ संघर्ष करना हो, तो सत्याग्रह का रास्ता अपनाना होगा। आज से ‘पानी…
— Atishi (@AtishiAAP) June 21, 2024
ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಅತಿಶಿ, ರಾಷ್ಟ್ರ ರಾಜಧಾನಿಯಲ್ಲಿ ಉಲ್ಬಣಗೊಂಡಿರುವ ನೀರಿನ ಬಿಕ್ಕಟ್ಟನ್ನು ಪರಿಹರಿಸಲು ಮಧ್ಯಪ್ರವೇಶಿಸಬೇಕೆಂದು ಕೋರಿದ್ದರು.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿರುವ ಅತಿಶಿ “ದೆಹಲಿಯ 28 ಲಕ್ಷ ಜನರು ನೀರಿನ ಕೊರತೆಯಿಂದ ಬಳಲುತ್ತಿದ್ದಾರೆ. ಪ್ರಧಾನಿ ಮೋದಿ ಹರಿಯಾಣ ಅಥವಾ ಬೇರೆ ಎಲ್ಲಿಂದಲಾದರೂ ದೆಹಲಿಯ ಜನತೆಗೆ ನೀರು ತರಬೇಕು” ಎಂದು ಆಗ್ರಹಿಸಿದ್ದಾರೆ.
“ನಿನ್ನೆ ಹರಿಯಾಣ ದೆಹಲಿಗೆ 613 ಎಂಜಿಡಿ ಬದಲು 513 ಎಂಜಿಡಿ ನೀರು ಬಿಡುಗಡೆ ಮಾಡಿದೆ. ಒಂದು ಎಂಜಿಡಿ ಅಂದರೆ ನೀರು 28,500 ಜನರಿಗೆ ಸಾಕಾಗುತ್ತದೆ. ಅಂದರೆ 28 ಲಕ್ಷಕ್ಕೂ ಹೆಚ್ಚು ಜನರ ನೀರನ್ನು ಹರಿಯಾಣ ಬಿಡುಗಡೆ ಮಾಡಲು ಬಾಕಿಯಿದೆ” ಎಂದಿದ್ದಾರೆ.
ಈ ನಡುವೆ, ಆಪಾದಿತ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರೂಸ್ ಅವೆನ್ಯೂ ಕೋರ್ಟ್ ಅರವಿಂದ್ ಕೇಜ್ರಿವಾಲ್‌ಗೆ ನೀಡಿದ್ದ ಜಾಮೀನನ್ನು ದೆಹಲಿ ಹೈಕೋರ್ಟ್ ಶುಕ್ರವಾರ (ಜೂನ್ 21) ತಡೆ ಹಿಡಿದಿದೆ.
“ಹೈಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಳ್ಳುವವರೆಗೆ ಜಾಮೀನಿಗೆ ತಡೆ ನೀಡಲಾಗಿದೆ. ಹೈಕೋರ್ಟ್ ಪ್ರಕರಣವನ್ನು ವಿಚಾರಣೆ ಮಾಡುವವರೆಗೆ ವಿಚಾರಣಾ ನ್ಯಾಯಾಲಯದ (ರೂಸ್ ಅವೆನ್ಯೂ) ಮುಂದೆ ಯಾವುದೇ ಪ್ರಕ್ರಿಯೆಗಳು ನಡೆಯುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ : ‘ಯುಜಿಸಿ-ನೆಟ್’ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಯಾವಾಗ? ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಸಿಬಿಐ


