ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೆವ್ರಿ-ನವ ಸೇವಾ ಅಟಲ್ ಸೇತು ಅಥವಾ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (ಹೆಚ್‌ಟಿಹೆಚ್‌ಎಲ್) ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
Delighted to inaugurate Atal Setu, a significant step forward in enhancing the ‘Ease of Living’ for our citizens. This bridge promises to reduce travel time and boost connectivity, making daily commutes smoother. pic.twitter.com/B77PSiGhMK
— Narendra Modi (@narendramodi) January 12, 2024
ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು, “ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಂಗಳುಗಳ ಹಿಂದೆಯಷ್ಟೇ ಉದ್ಘಾಟಿಸಿದ್ದ”ಅಟಲ್ ಸೇತುವೆಯ ರಸ್ತೆ ಬಿರುಕು ಬಿಟ್ಟಿರುವುದು ಅತ್ಯಂತ ಕಳವಳಕಾರಿಯಾಗಿದೆ. ಹೆಚ್ಚಿನ ಸಂಖ್ಯೆಯ ಬಿರುಕುಗಳು ಪ್ರಯಾಣಿಕರಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿವೆ” ಎಂದಿದ್ದಾರೆ.
प्रधानमंत्री श्री. नरेंद्र मोदी यांच्या हस्ते तीनच महिन्यांपूर्वी लोकार्पण झालेल्या "अटल सेतू" पुलास भेगा पडल्याची बाब अतिशय चिंताजनक आहे. मोठ्या प्रमाणात भेगा पडल्याने प्रवाश्यांमध्ये भीतीचे वातावरण निर्माण झाले आहे. बिहार मध्ये नवनिर्मित पुल कोसळल्याची घटना ताजी असतानाच… pic.twitter.com/NGUrLFinj6
— Nana Patole (@NANA_PATOLE) June 21, 2024
“ಬಿಹಾರದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದಿರುವ ಘಟನೆ ತಾಜಾ ಆಗಿರುವಾಗಲೇ ಮುಂಬೈನಲ್ಲೂ ಅಂತಹ ಆಘಾತಕಾರಿ ಘಟನೆ ಬೆಳಕಿಗೆ ಬಂದಿರುವುದರಿಂದ ಸರ್ಕಾರದ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಸರ್ಕಾರದ ಭ್ರಷ್ಟಾಚಾರಗಳನ್ನು ಬಹಿರಂಗಪಡಿಸುವ ಕಾಂಗ್ರೆಸ್ ಪಕ್ಷದ ಆಂದೋಲನದ ಭಾಗವಾಗಿ ನಾನು ಸಹೋದ್ಯೋಗಿಗಳೊಂದಿಗೆ ಸೇತುವೆ ಪರಿಶೀಲಿಸಿದೆ. ಈ ವಿಷಯವು ತುಂಬಾ ಗಂಭೀರವಾಗಿದೆ. ಮಾನ್ಯ ಹೈಕೋರ್ಟ್ ಈ ಬಗ್ಗೆ ತಕ್ಷಣ ಗಮನಹರಿಸಿ ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.
ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅಟಲ್ ಸೇತು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದ್ದು, 21.8 ಕಿಮೀ ಉದ್ದವಿದೆ. ಈ ಪೈಕಿ 16.5 ಕಿಮೀ ರಸ್ತೆ ಸಮುದ್ರದ ಮೇಲಿದೆ. ದಿ ಹಿಂದೂ ವರದಿಯ ಪ್ರಕಾರ, ಈ ಸೇತುವೆ ಮೇಲೆ ಪ್ರತಿದಿನ 70,000 ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ.
ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಸೇತುವೆಯೊಂದು ಕುಸಿದುಬಿದ್ದ ಬೆನ್ನಲ್ಲೇ, ಅಟಲ್ ಸೇತುವೆಯ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಚುನಾವಣೆಗೂ ಮುನ್ನ ನಟಿ ರಶ್ಮಿಕಾ ಮಂದಣ್ಣ ಇದೇ ಅಟಲ್ ಸೇತುವೆಯನ್ನು ತೋರಿಸಿ ಬಿಜೆಪಿಯ ಅಭಿವೃದ್ದಿಯನ್ನು ಕೊಂಡಾಡಿದ್ದರು.
ಸಂಚಾರಿ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ಗಲ್ಫ್‌ರೋಝ್ ಮುಜಾವರ್ ಅವರು “ನಾವು ರಸ್ತೆ ಬಿರುಕು ಬಿಟ್ಟಿರುವುದನ್ನು ಶುಕ್ರವಾರ ಬೆಳಿಗ್ಗೆ ಗಮನಿಸಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ದೆಹಲಿಯಲ್ಲಿ ಜಲಕ್ಷಾಮ: ಹರಿಯಾಣದಿಂದ ಹೆಚ್ಚುವರಿ ನೀರಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ


