Homeಮುಖಪುಟಸಂವಿಧಾನ ಪ್ರತಿಗಳನ್ನು ಹಿಡಿದು 'ಇಂಡಿಯಾ' ಬ್ಲಾಕ್ ನಾಯಕರಿಂದ ಸಂಸತ್ತಿನಲ್ಲಿ ಪ್ರತಿಭಟನೆ

ಸಂವಿಧಾನ ಪ್ರತಿಗಳನ್ನು ಹಿಡಿದು ‘ಇಂಡಿಯಾ’ ಬ್ಲಾಕ್ ನಾಯಕರಿಂದ ಸಂಸತ್ತಿನಲ್ಲಿ ಪ್ರತಿಭಟನೆ

- Advertisement -
- Advertisement -

18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದ ಮಧ್ಯೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಟಿಎಂಸಿ ಸಂಸದ ಸೌಗತ ರಾಯ್ ಸೇರಿದಂತೆ ವಿರೋಧ ಪಕ್ಷದ ಇಂಡಿಯಾ ಬಣದ ನಾಯಕರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ಸೋಮವಾರ ನಡೆಸಿದರು.

ಕೈಯಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು, ಬಿಜೆಪಿಯವರು ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸುತ್ತಲೇ ನಾಯಕರು ಅದನ್ನು ರಕ್ಷಿಸುವಂತೆ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮೋದಿಯವರು ಸಂವಿಧಾನವನ್ನು ಒಡೆಯಲು ಯತ್ನಿಸಿದ್ದಾರೆ, ಅದಕ್ಕಾಗಿಯೇ ಇಂದು ಎಲ್ಲ ಪಕ್ಷಗಳ ನಾಯಕರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಲ್ಲಿ ಗಾಂಧಿ ಪ್ರತಿಮೆ ಇತ್ತು, ಎಲ್ಲ ಪ್ರಜಾಪ್ರಭುತ್ವವನ್ನು ಒಡೆಯುತ್ತಿದ್ದಾರೆ. ಅದಕ್ಕಾಗಿಯೇ ಇಂದು ನಾವು ಮೋದಿ ಜೀ, ನೀವು ಸಂವಿಧಾನದ ಪ್ರಕಾರ ಮುಂದುವರಿಯಬೇಕು ಎಂದು ತೋರಿಸಲು ಬಯಸುತ್ತೇವೆ” ಎಂದರು.

ಗಮನಾರ್ಹವಾಗಿ, ತಮ್ಮ ಹೇಳಿಕೆಯಲ್ಲಿ, ತುರ್ತು ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿಯವರ ಟೀಕೆಗಳಿಗೆ ಖರ್ಗೆ ವಾಗ್ದಾಳಿ ನಡೆಸಿದರು. ಇದನ್ನೇ 100 ಸಲ ಹೇಳ್ತಾರೆ, ತುರ್ತು ಪರಿಸ್ಥಿತಿ ಘೋಷಣೆ ಮಾಡದೆ ಹೀಗೆ ಮಾಡುತ್ತಿದ್ದೀರಿ, ಈ ಬಗ್ಗೆ ಮಾತನಾಡುತ್ತಾ ಎಷ್ಟು ದಿನ ಆಡಳಿತ ನಡೆಸುತ್ತೀರಿ ಎಂದು ಕಿಡಿಕಾರಿದರು.

ಇದೇ ವೇಳೆ, ಪ್ರತಿಭಟನಾ ಸ್ಥಳದಿಂದ ಮಾಧ್ಯಮಗಳೊಂದಿಗೆ ಮಾತನಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, “ಹಂಗಾಮಿ ಸ್ಪೀಕರ್ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವುದು ಗಮನಾರ್ಹ. ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ, ನರೇಂದ್ರ ಮೋದಿ ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ, ಹಂಗಾಮಿ ಸ್ಪೀಕರ್ ನೇಮಕ ಮಾಡಿರುವುದು ಸಂವಿಧಾನದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದರು

ಪಕ್ಷದ ಮತ್ತೊಬ್ಬ ಸಂಸದ ಸೌಗತ ರಾಯ್ ಕೂಡ ಕೇಂದ್ರದ ಆಡಳಿತಾರೂಢ ಬಿಜೆಪಿಯನ್ನು ಗುರಿಯಾಗಿಸಿಕೊಂಡು, “ಸಂವಿಧಾನವನ್ನು ನಾಶಪಡಿಸುವ ಮತ್ತು ಗುರುತಿಸಲಾಗದಷ್ಟು ತಿದ್ದುಪಡಿ ಮಾಡುವ ಬಿಜೆಪಿಯ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ವಿರೋಧ ನಡುವೆಯೆ, ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರು ಇಂದು 18 ನೇ ಲೋಕಸಭೆಯ ಸದಸ್ಯರಾಗಿ ಪಿಎಂ ಮೋದಿ ಮತ್ತು ಇತರ ಚುನಾಯಿತ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು. ಗಮನಾರ್ಹವೆಂದರೆ, ಪಿಎಂ ಮೋದಿ ಸತತ ಮೂರನೇ ಅವಧಿಗೆ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ; ‘ನಿಮ್ಮ ಆಡಳಿತದಲ್ಲಿ ಬಿಹಾರ ಜಂಗಲ್ ರಾಜ್ ಆಗಿದೆ ನೋಡಿ..’; ಪ್ರಧಾನಿ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...