Homeಮುಖಪುಟತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

ತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

- Advertisement -
- Advertisement -

ಹಣಕಾಸು ವಿಚಾರಕ್ಕೆ ಸಬಂಧಿಸಿದಂತೆ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ 26 ವರ್ಷದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ಥಳಿಸಿದ್ದು, ಆಕೆಯ ಕಣ್ಣುಗಳು ಮತ್ತು ಜನನಾಂಗಗಳಿಗೆ ಕಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಪ್ರಕರಣ ಒಂದು ವಾರದ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಮಹಿಳೆಯು ಮೂರು ಮಕ್ಕಳ ತಾಯಿ ಎಂದು ಗೊತ್ತಾಗಿದ್ದು, ಹಲ್ಲೆಯ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಗುಲಾಬಿ ಬಣ್ಣದ ಸೀರೆ ಧರಿಸಿರುವ ಮಹಿಳೆಯನ್ನು ಗ್ರಾಮಸ್ಥರು ಸುತ್ತುವರಿದಿದ್ದು, ಆಕೆ ನೆಲದ ಮೇಲೆ ನರಳಾಡುತ್ತಿರುವುದನ್ನು ಕಾಣಬಹುದಾಗಿದೆ.

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂಸೆಗೆ ಮುಂದಾಗಿದ್ದು, ಪರಿಸ್ಥಿತಿ ಭಯಾನಕ ತಿರುವು ಪಡೆಯುತ್ತದೆ; ಅವನು ಮಹಿಳೆಯನ್ನು ಕುತ್ತಿಗೆ ಹಿಡಿದು ಆಕೆಯನ್ನು ನೆಲಕ್ಕೆ ಬಲವಂತವಾಗಿ ತಳ್ಳಿ ಕಾಲಿನಿಂದ ತುಳಿದಿದ್ದಾನೆ. ಅವನನ್ನು ಇತರರು ದೂರ ತಳ್ಳುತ್ತಾರೆ ಮತ್ತು ಯುವತಿ ಎದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾಳೆ, ಎರಡನೆಯ ವ್ಯಕ್ತಿ ಮತ್ತೆ ನೆಲಕ್ಕೆ ತಳ್ಳಿದ್ದು, ಅವನು ಅವಳ ಸೀರೆಯನ್ನು ಹರಿದು ಹಾಕಲು ಪ್ರಯತ್ನಿಸಿದ್ದಾನೆ. ಕೆಲವು ಜನರು ಮರದ ಕೋಲಿನಿಂದ ಆಕೆಗೆ ಕೋಪೋದ್ರಿಕ್ತರಾಗಿ ಹೊಡೆದಿದ್ದಾರೆ.

ಮತ್ತೊಂದು ಆಘಾತಕಾರಿ ವಿಡಿಯೋದಲ್ಲಿ ಎರಡನೇ ಮಹಿಳೆಯು ಗುಲಾಬಿ ಸೀರೆಯುಟ್ಟ ಮಹಿಳೆಯ ಕೂದಲು ಹಿಡಿದು ನೆಲಕ್ಕೆ ಕುಸ್ತಿಯಾಡುತ್ತಾಳೆ ಮತ್ತು ಅವಳನ್ನು ಜೋರಾಗಿ ಒದ್ದು, ಪದೇಪದೆ ಹೊಡೆಯುತ್ತಾಳೆ.

ಇನ್ನೂ ಆಘಾತಕಾರಿ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಾಯಕ್ವಾಡ್ ವೈಭವ್ ರಘುನಾಥ್ ಅವರು ಪ್ರತಿಕ್ರಿಯಿಸಿದ್ದು, ಈ ವೀಡಿಯೊಗಳು ಕನಿಷ್ಠ ಎರಡು ದಿನಗಳ ಮೊದಲು ಮಹಿಳೆಯ ಮೇಲೆ ಹಲ್ಲೆ ಮತ್ತು ಎರಡನೇ ಬಾರಿಗೆ ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ನಂತರ ಉತ್ತಮ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು.

ಹಲ್ಲೆಗೆ ಸಂಬಂಧಿಸಿದಂತೆ ಬಂಡಿ ವೆಂಕಟೇಶ್ ಮತ್ತು ಅವರ ಪತ್ನಿ, ಹಾಗೂ ಸಂತ್ರಸ್ತೆಯ ಸಹೋದರಿ ಮತ್ತು ಪತಿ ಎಂದು ಗುರುತಿಸಲಾಗಿರುವ ನಾಲ್ವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆ ಬಂಡಿ ವೆಂಕಟೇಶ್ ಅವರಿಂದ ಸಾಲ ಪಡೆದ ಹಣಕ್ಕೆ ವಿವಾದ ಉಂಟಾಗಿದೆ.

ಪ್ರತಿಯಾಗಿ, ಆಕೆ ಹಣ ನೀಡಿದ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ, ಮಹಿಳೆ ತನ್ನ ಸಹೋದರಿಯೊಂದಿಗೆ ಜಗಳವಾಡಿದ ನಂತರ ಕೆಲವು ದಿನಗಳ ನಂತರ ಹೊರನಡೆದಳು. ಇದರಿಂದ ಕುಪಿತಗೊಂಡ ವೆಂಕಟೇಶ್ ಆಕೆಯನ್ನು ಹುಡುಕಿ ಕರೆತಂದು ತನ್ನ ಹೊಲಕ್ಕೆ ಎಳೆದೊಯ್ದಿದ್ದಾನೆ.

ಸೋಮವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಎಲ್ಲ ವಿಕಿತ್ಸಾ ವೆಚ್ಚ ಪಾವತಿಸಲಿದೆ ಎಂದು ಹೇಳಿದರು.

ಮಹಿಳೆಯು ಸ್ವಂತ ಮನೆಯನ್ನು ಹೊಂದಿಲ್ಲದಿದ್ದರೆ ರಾಜ್ಯ ಸರ್ಕಾರವು ನೀಡಲಿದೆ. ಅವರ ಮಕ್ಕಳಿಗೆ ಶಿಕ್ಷಣ ಮತ್ತು ಕೃಷಿ ಮಾಡಲು ಭೂಮಿಯನ್ನು ಒದಗಿಸುತ್ತದೆ ಎಂದು ವಿಕ್ರಮಾರ್ಕ ಹೇಳಿದರು. ಶನಿವಾರ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಮಹಿಳೆಯೊಂದಿಗೆ ಮಾತನಾಡಿ ₹2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸೋಮವಾರ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಆಕೆಯ ಸಹೋದರಿ ಸೇರಿದಂತೆ ಕೆಲವು ವ್ಯಕ್ತಿಗಳಿಂದ ಚಿತ್ರಹಿಂಸೆಗೊಳಗಾದ ಬುಡಕಟ್ಟು ಮಹಿಳೆಯನ್ನು ಭೇಟಿ ಮಾಡಿ, ಆಕೆಯ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ ಮತ್ತು ಇತರ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದರು.

27ರ ಹರೆಯದ ಮಹಿಳೆಯ ಮೇಲಿನ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ವಿಕ್ರಮಾರ್ಕ, ಅವರು ಚೇತರಿಸಿಕೊಳ್ಳುವವರೆಗೆ ಸರ್ಕಾರವು ಅವಳ ಚಿಕಿತ್ಸೆಯನ್ನು ನೋಡಿಕೊಳ್ಳುತ್ತದೆ. ಇಂದಿರಮ್ಮ ಬಡವರ ವಸತಿಯಡಿಯಲ್ಲಿ ಅವರಿಗೆ ಸ್ವಂತ ಮನೆ, ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಗುವಳಿ ಮಾಡಲು ಭೂಮಿ ಇಲ್ಲದಿದ್ದರೆ ಸರ್ಕಾರವು ಅವರಿಗೆ ಮನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಆರೋಪಿಗಳನ್ನು ಈಗಾಗಲೇ ಜೈಲಿಗೆ ಕಳುಹಿಸಿರುವುದನ್ನು ಗಮನಿಸಿದ ಉಪಮುಖ್ಯಮಂತ್ರಿ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದ ನಂತರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ; 4 ಹಂತದ ತನಿಖೆ, 1,000 ಫೋನ್ ಸಂಖ್ಯೆಗಳ ಪರಿಶೀಲನೆ; ಪೇಪರ್ ಸೋರಿಕೆ ಪ್ರಕರಣಗಳನ್ನು ಭೇದಿಸಲು ಸಿಬಿಐ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...