Homeಮುಖಪುಟದೆಹಲಿ ಜಲ ಬಿಕ್ಕಟ್ಟು: ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ದೆಹಲಿ ಜಲ ಬಿಕ್ಕಟ್ಟು: ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಹರಿಯಾಣದಿಂದ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲ ಸಚಿವೆ ಅತಿಶಿ ಅವರ ಆರೋಗ್ಯ ಮಂಗಳವಾರ ನಸುಕಿನಲ್ಲಿ ಹದಗೆಟ್ಟಿದ್ದರಿಂದ ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ಕರೆತರಲಾಯಿತು.

ಸೋಮವಾರದ ಅನಿರ್ದಿಷ್ಟಾವಧಿ ಉಪವಾಸದ ನಾಲ್ಕನೇ ದಿನಕ್ಕೆ ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದರು. ಹರ್ಯಾಣವು “ದೆಹಲಿಯ ನೀರಿನ ಸರಿಯಾದ ಪಾಲನ್ನು” ಬಿಡುಗಡೆ ಮಾಡುವವರೆಗೂ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳ ಹೊರತಾಗಿಯೂ, ಅತಿಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ನಿರಾಕರಿಸಿದ್ದರು.

“ನನ್ನ ರಕ್ತದೊತ್ತಡ ಮತ್ತು ಸಕ್ಕರೆ ಮಟ್ಟವು ಕುಸಿಯುತ್ತಿದೆ ಮತ್ತು ನನ್ನ ತೂಕವು ಕಡಿಮೆಯಾಗಿದೆ. ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿರುತ್ತದೆ, ಇದು ದೀರ್ಘಾವಧಿಯಲ್ಲಿ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡುತ್ತದೆ. ನನ್ನ ದೇಹವು ಎಷ್ಟೇ ನರಳಿದರೂ ಹರಿಯಾಣ ನೀರು ಬಿಡುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೇನೆ” ಎಂದು ಅವರು ಜಂಗ್‌ಪುರದ ಭೋಗಲ್‌ನಲ್ಲಿ ಉಪವಾಸ ಸತ್ಯಾಗ್ರಹದ ಸ್ಥಳದಲ್ಲಿ ಹೇಳಿದರು.

New Delhi, Jun 23 (ANI): Delhi Water Minister Atishi gets her blood pressure check during the Aam Aadmi Party’s (AAP) indefinite hunger strike over the water crisis, which entered the third day, in New Delhi on Sunday. (ANI Photo/Sanjay Sharma)

ಮತ್ತೊಂದು ಹೇಳಿಕೆಯಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ಅತಿಶಿ ಅವರ ತೂಕ ಮತ್ತು ರಕ್ತದೊತ್ತಡವು ವೇಗವಾಗಿ ಕಡಿಮೆಯಾಗುತ್ತಿದೆ ಎಂದು ಹೇಳಿದೆ, ಇದು “ಅಪಾಯಕಾರಿ” ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

“ಜಲ ಸಚಿವೆ ಅತಿಶಿ ಅವರ ತೂಕ ಕೂಡ ಅನಿರೀಕ್ಷಿತವಾಗಿ ಕಡಿಮೆಯಾಗುತ್ತಿದೆ. ಜೂನ್ 21ರಂದು ಉಪವಾಸ ಸತ್ಯಾಗ್ರಹಕ್ಕೆ ಕುಳಿತುಕೊಳ್ಳುವ ಮುನ್ನ ಅವರ ತೂಕ 65. 8 ಕೆಜಿಯಷ್ಟಿತ್ತು, ಉಪವಾಸ ಸತ್ಯಾಗ್ರಹದ ನಾಲ್ಕನೇ ದಿನಕ್ಕೆ 63.6 ಕೆಜಿಗೆ ಇಳಿದಿದೆ. ಅಂದರೆ, ಅವರ ತೂಕವು ಕೇವಲ 4 ದಿನಗಳಲ್ಲಿ 2.2 ಕೆ.ಜಿ. ಕಡಿಮೆಯಾಗಿದೆ.

ಉಪವಾಸ ಸತ್ಯಾಗ್ರಹದ ಮೊದಲ ದಿನಕ್ಕೆ ಹೋಲಿಸಿದರೆ ನಾಲ್ಕನೇ ದಿನದಲ್ಲಿ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 28 ಯೂನಿಟ್‌ಗಳಷ್ಟು ಕಡಿಮೆಯಾಗಿದೆ ಎಂದು ಅದು ಹೇಳಿದೆ.

ಇದರೊಂದಿಗೆ ಆಕೆಯ ರಕ್ತದೊತ್ತಡದ ಮಟ್ಟವೂ ಕಡಿಮೆಯಾಗಿದೆ; ಅತಿಶಿ ಅವರ ರಕ್ತದ ಸಕ್ಕರೆ ಪ್ರಮಾಣ, ರಕ್ತದೊತ್ತಡ, ತೂಕ ಕಡಿಮೆಯಾದ ವೇಗವನ್ನು ವೈದ್ಯರು ಅಪಾಯಕಾರಿ ಎಂದು ಹೇಳಿದ್ದಾರೆ. ಇದರೊಂದಿಗೆ ಅವರ ಮೂತ್ರದ ಕೆಟೋನ್ ಮಟ್ಟವೂ ಹೆಚ್ಚುತ್ತಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಭಾನುವಾರ ಎಎಪಿ ನಾಯಕರ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ತಮ್ಮ ರಾಜ್ಯವು ನಗರಕ್ಕೆ ಹೆಚ್ಚುವರಿ ನೀರು ನೀಡಬಹುದೇ ಎಂದು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ; ಕೇಜ್ರಿವಾಲ್ ಜಾಮೀನಿಗೆ ತಡೆಯಾಜ್ಞೆ ಕೋರಿ ಇಡಿ ಅರ್ಜಿ; ಆದೇಶ ನಾಳೆಗೆ ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...