Homeಮುಖಪುಟ'ತುರ್ತು ಪರಿಸ್ಥಿತಿ ಉಲ್ಲೇಖವನ್ನು ತಪ್ಪಿಸಬಹುದಿತ್ತು..'; ಸ್ಪೀಕರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

‘ತುರ್ತು ಪರಿಸ್ಥಿತಿ ಉಲ್ಲೇಖವನ್ನು ತಪ್ಪಿಸಬಹುದಿತ್ತು..’; ಸ್ಪೀಕರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದು, ಸದನದಲ್ಲಿ ಅಧ್ಯಕ್ಷರು ತುರ್ತು ಪರಿಸ್ಥಿತಿಯ ಬಗ್ಗೆ ಪ್ರಸ್ತಾಪಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ‘ಇದು ಸ್ಪಷ್ಟ ರಾಜಕೀಯ ಮತ್ತು ಅದನ್ನು ತಪ್ಪಿಸಬಹುದಿತ್ತು’ ಎಂದು ಹೇಳಿದ್ದಾರೆ.

ಸಂಸತ್ ಭವನದಲ್ಲಿ ನಡೆದ ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸುದ್ದಿಗಾರರಿಗೆ ಮಾತನಾಡಿ, “ಇದು ಸೌಜನ್ಯದ ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಸ್ಪೀಕರ್ ಅವರು ತುರ್ತು ಪರಿಸ್ಥಿತಿಯನ್ನು ಸದನದಲ್ಲಿ ಪ್ರಸ್ತಾಪಿಸಿದ್ದಾರೆ” ಎಂದರು.

“ಇದು ಸೌಜನ್ಯದ ಭೇಟಿಯಾಗಿದೆ; ಸ್ಪೀಕರ್ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಘೋಷಿಸಿದರು ಮತ್ತು ನಂತರ ಅವರು ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಸ್ಪೀಕರ್ ಅವರನ್ನು ಭೇಟಿ ಮಾಡಿದರು” ಎಂದು ಹೇಳಿದರು.

ಸದನದಲ್ಲಿ ಎಮರ್ಜೆನ್ಸಿ ಕುರಿತು ಚರ್ಚೆ ನಡೆಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್, “ನಾವು ಸಂಸತ್ತಿನ ಕಾರ್ಯನಿರ್ವಹಣೆಯ ಬಗ್ಗೆ ಹಲವು ವಿಷಯಗಳನ್ನು ಚರ್ಚಿಸಿದ್ದೇವೆ. ಈ ವಿಷಯವೂ ಪ್ರಸ್ತಾಪವಾಯಿತು. ರಾಹುಲ್ ಅವರು, ವಿರೋಧ ಪಕ್ಷದ ನಾಯಕರಾಗಿ ಈ ವಿಷಯದ ಬಗ್ಗೆ ಸ್ಪೀಕರ್‌ಗೆ ಮಾಹಿತಿ ನೀಡಿದರು. ಸ್ಪೀಕರ್ ಅವರ ಉಲ್ಲೇಖದಿಂದ ಇದನ್ನು ತಪ್ಪಿಸಬಹುದಿತ್ತು ಎಂದು ಹೇಳಿದರು. ಅದು ಸ್ಪಷ್ಟವಾಗಿ ರಾಜಕೀಯ ಉಲ್ಲೇಖವಾಗಿದೆ, ಇದನ್ನು ತಪ್ಪಿಸಬಹುದಿತ್ತು” ಎಂದರು.

ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಕೂಡಲೇ, ಬಿರ್ಲಾ ಅವರು ಬುಧವಾರ ತುರ್ತು ಪರಿಸ್ಥಿತಿಯನ್ನು ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಸಂವಿಧಾನದ ಮೇಲಿನ ದಾಳಿ ಎಂದು ಖಂಡಿಸುವ ನಿರ್ಣಯವನ್ನು ಓದುವ ಮೂಲಕ ವಿವಾದ ಎಬ್ಬಿಸಿದ್ದರು, ಇದು ಸಂಸತ್ತಿನಲ್ಲಿ ಕಾಂಗ್ರೆಸ್ ಸದಸ್ಯರಿಂದ ತೀವ್ರ ಪ್ರತಿಭಟನೆಗೆ ಕಾರಣವಾಯಿತು.

ಜೂನ್ 26, 1975 ರಂದು ತುರ್ತು ಪರಿಸ್ಥಿತಿಯ ಕ್ರೂರ ವಾಸ್ತವಗಳಿಂದ ದೇಶವು ಎಚ್ಚೆತ್ತುಕೊಂಡಿತು ಎಂದು ಬಿರ್ಲಾ ನೆನಪಿಸಿಕೊಂಡರು, ಕಾಂಗ್ರೆಸ್ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಿದಾಗ, ಮಾಧ್ಯಮದ ಮೇಲೆ ಅನೇಕ ನಿರ್ಬಂಧಗಳನ್ನು ವಿಧಿಸಿತು ಮತ್ತು ನ್ಯಾಯಾಂಗದ ಸ್ವಾಯತ್ತತೆಗೆ ಕಡಿವಾಣ ಹಾಕಿತು.

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರ ಗಾಂಧಿಯವರು ಸ್ಪೀಕರ್ ಅವರನ್ನು ಭೇಟಿಯಾದ ಮೊದಲ ಸಭೆ ಇದಾಗಿದೆ.

ಅವರ ಜೊತೆಗೆ ಎಸ್‌ಪಿಯ ಧರ್ಮೇಂದ್ರ ಯಾದವ್, ಡಿಎಂಕೆಯ ಕನಿಮೋಳಿ, ಶಿವಸೇನೆಯ (ಎಸ್‌ಪಿ) ಸುಪ್ರಿಯಾ ಸುಳೆ ಮತ್ತು ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ, ಇನ್ನೂ ಕೆಲವರು ಇದ್ದರು.

ಇದನ್ನೂ ಓದಿ; ‘ಐತಿಹಾಸಿಕ ನಿರ್ಧಾರಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗುವುದು..’; ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...