Homeಕರ್ನಾಟಕಪೋಕ್ಸೋ ಪ್ರಕರಣ: ಯಡಿಯೂರಪ್ಪ ಸೇರಿದಂತೆ ಮೂವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಸಿಐಡಿ

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಸೇರಿದಂತೆ ಮೂವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಸಿಐಡಿ

- Advertisement -
- Advertisement -

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದ್ದು, ರಾಜ್ಯ ಪೊಲೀಸ್ ಅಪರಾಧ ತನಿಖಾ ಇಲಾಖೆ (ಸಿಐಡಿ) ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಿಎಸ್‌ವೈ ಸೇರಿದಂತೆ ಇತರ ಮೂವರನ್ನು ಹೆಸರಿಸಿ ಆರೋಪಪಟ್ಟಿ ಸಲ್ಲಿಸಿದ್ದಾರೆ.

2015ರಲ್ಲಿ 17 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಹಾಯ ಪಡೆಯಲು ಆಕೆಯ ತಾಯಿ ಈ ವರ್ಷದ ಆರಂಭದಲ್ಲಿ ಯಡಿಯೂರಪ್ಪ ಮನೆಗೆ ತೆರಳಿದ್ದರು, ಮಾಜಿ ಸಿಎಂ ಭೇಟಿ ಸಂದರ್ಭದಲ್ಲಿ ಮಗಳನ್ನು ಅನುಚಿತವಾಗಿ ಸ್ಪರ್ಶಿಸಿದ ಆರೋಪ ಅವರ ಮೇಲಿದೆ. ಸಂತ್ರಸ್ತೆ ತಾಯಿ ಸಲ್ಲಿಸಿದ ದೂರಿನ ಆಧಾರದಲ್ಲಿ ಮಾರ್ಚ್‌ನಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಮೇ ತಿಂಗಳಲ್ಲಿ, ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸಂತ್ರಸ್ತ ಬಾಲಕಿಯ ತಾಯಿಯು, ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ನಂತರ, ಸಂತ್ರಸ್ತೆಯ ಸಹೋದರ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದರು ಮತ್ತು ತನಿಖೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂದು ದೂರಿದರು.

ಈ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ಸಹ ಹೈಕೋರ್ಟ್‌ಗೆ ಮೊರೆ ಹೋಗಿದ್ದರು, ಕೋರ್ಟ್ ವಿಚಾರಣೆ ನಡೆಸುವಣತೆ ಸಿಐಡಿಗೆ ಅವಕಾಶ ಮಾಡಿಕೊಟ್ಟಿತು. ಆದರೆ, ಬಂಧನದಿಂದ ಬಿಎಸ್‌ವೈಗೆ ರಕ್ಷಣೆ ನೀಡಿತು.

ಸಿಐಡಿ ಈ ತಿಂಗಳ ಆರಂಭದಲ್ಲಿ 81 ವರ್ಷದ ಬಿಜೆಪಿ ರಾಷ್ಟ್ರೀಯ ನಾಯಕನನ್ನು ವಿಚಾರಣೆಗೊಳಪಡಿಸಿತು. ಗುರುವಾರ ಬೆಂಗಳೂರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ದಾಖಲೆಯಲ್ಲಿ ಹೆಸರಿಸಲಾದ ಇತರ ಮೂವರ ಮೇಲೆ ಸಾಕ್ಷ್ಯ ನಾಶಪಡಿಸಿದ ಆರೋಪವಿದೆ. ಸಾಕ್ಷ್ಯವನ್ನು ಅಳಿಸಲು ತಾಯಿ ಮತ್ತು ಮಗಳನ್ನು ಮನವೊಲಿಸಲು ಅವರು ಪ್ರಯತ್ನಿಸಿದ್ದರು ಎಂದು ಆರೋಪಿಸಲಾಗಿದೆ.

ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ ಯಡಿಯೂರಪ್ಪ, “ನಾನು ಯಾರಿಗೂ ದೂರು ನೀಡುವುದಿಲ್ಲ, ಸಮಯ ಎಲ್ಲವನ್ನೂ ನಿರ್ಧರಿಸುತ್ತದೆ, ಸತ್ಯ ಏನು ಎಂದು ಜನರಿಗೆ ತಿಳಿದಿದೆ, ಕುತಂತ್ರದಲ್ಲಿ ತೊಡಗಿರುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ” ಎಂದು ಹೇಳಿದ್ದರು.

ಇದನ್ನೂ ಓದಿ; ಖ್ಯಾತ ಬರಹಗಾರ್ತಿ ಅರುಂಧತಿ ರಾಯ್ ಅವರಿಗೆ 2024 ನೇ ಸಾಲಿನ ‘ಪೆನ್ ಪಿಂಟರ್’ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...