Homeಮುಖಪುಟನೀಟ್‌ ಮಾತ್ರವಲ್ಲ, ಯುಪಿ ಶಾಸಕ ಬೇಡಿ ರಾಮ್ ಮೇಲಿವೆ ಎಂಟು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳು!

ನೀಟ್‌ ಮಾತ್ರವಲ್ಲ, ಯುಪಿ ಶಾಸಕ ಬೇಡಿ ರಾಮ್ ಮೇಲಿವೆ ಎಂಟು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳು!

- Advertisement -
- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಉತ್ತರ ಪ್ರದೇಶದ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಶಾಸಕ ಬೇಡಿ ರಾಮ್, ಹಲವಾರು ಇತರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಚುನಾವಣಾ ಅಫಿಡವಿಟ್ ಪ್ರಕಾರ, ಅವರ ವಿರುದ್ಧ ದಾಖಲಾಗಿರುವ ಒಂಬತ್ತು ಪ್ರಕರಣಗಳಲ್ಲಿ ಎಂಟು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಾಸಕ ಬೇಡಿ ರಾಮ್ ವಿರುದ್ಧ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಪೊಲೀಸ್ ಮತ್ತು ರೈಲ್ವೆ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದ ಆರೋಪಗಳ ಮೇಲೆ ಪ್ರಕರಣಗಳು ದಾಖಲಾಗಿವೆ.

2009 ರಲ್ಲಿ, ರಾಜಸ್ಥಾನದ ಜೈಪುರದ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ರೈಲ್ವೆ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬೇಡಿ ರಾಮ್ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು.

ಭೋಪಾಲ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮಧ್ಯಪ್ರದೇಶ ಲೋಕಸೇವಾ ಆಯೋಗದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬೇಡಿ ರಾಮ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ.

2006ರಲ್ಲಿ, ರೈಲ್ವೆ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಬೇಡಿ ರಾಮ್‌ ವಿರುದ್ದ ದರೋಡೆಕೋರ ಕಾಯ್ದೆ ಅನ್ವಯ ಮೊಕದ್ದಮೆ ದಾಖಲಿಸಲಾಗಿತ್ತು. ಎರಡು ವರ್ಷಗಳ ನಂತರ ಗೋಮತಿ ನಗರದಲ್ಲಿ ಮತ್ತೊಂದು ಪ್ರಕರಣ ಕೂಡ ದಾಖಲಾಗಿದೆ.

2010 ರಲ್ಲಿ, ಪೊಲೀಸ್ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಕ್ಕಾಗಿ ಜೌನ್‌ಪುರದ ಮಡಿಯಾಹುದಲ್ಲಿ ಬೇಡಿ ರಾಮ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. 2014ರಲ್ಲಿ ಮತ್ತೊಂದು ಪ್ರಕರಣ ದಾಖಲಾಗಿತ್ತು.

ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಾದ್ಯಂತ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಹಲವಾರು ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಎಸ್‌ಬಿಎಸ್‌ಪಿ ಶಾಸಕರ ಹೇಳಿಕೆಯನ್ನು ತೋರಿಸುವ ವೈರಲ್ ವಿಡಿಯೋ ಕಾಣಿಸಿಕೊಂಡ ನಂತರ, ಕಾಂಗ್ರೆಸ್ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಬೇಡಿ ರಾಮ್ ಶಾಸಕರಾಗುವ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು ಎಂದೂ ಕಾಂಗ್ರೆಸ್ ಹೇಳಿದೆ. ವೈರಲಾಗಿರುವ ವಿಡಿಯೋದಲ್ಲಿ ಬೇಡಿ ರಾಮ್ ಅವರು ಅಭ್ಯರ್ಥಿಯನ್ನು ಪಾಸ್ ಮಾಡಲು ಪ್ರತಿಯಾಗಿ ಹಣ ತೆಗೆದುಕೊಳ್ಳುತ್ತಾರೆ ಎಂದು ಹೇಳುವುದನ್ನು ಕೇಳಬಹುದು. ಮುಂದೆ ಪತ್ರಿಕೆ ರದ್ದಾದರೆ ತಾನು ಜವಾಬ್ದಾರನಲ್ಲ ಎನ್ನುತ್ತಾರೆ.

ವಿಡಿಯೋ ನಿಜವಾಗಿದ್ದರೆ, ಎಸ್‌ಬಿಎಸ್‌ಪಿ ಎನ್‌ಡಿಎ ಮಿತ್ರ ಪಕ್ಷವಾಗಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬಿಜೆಪಿ ಸರ್ಕಾರದ ಕೈವಾಡವನ್ನು ತಳ್ಳಿ ಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ : ತೆಲಂಗಾಣ: ಕೆಸಿಆರ್‌ಗೆ ಭಾರೀ ಹಿನ್ನಡೆ, ಕಾಂಗ್ರೆಸ್ ಸೇರಿದ ಆರನೇ ಬಿಆರ್‌ಎಸ್ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...