Homeಮುಖಪುಟಅಸ್ಸಾಂ| ಅರಣ್ಯ ಇಲಾಖೆ ಸಿಬ್ಬಂದಿಯಿಂದ ಇಬ್ಬರು ಮುಸ್ಲಿಂ ಸಹೋದರರ ಹತ್ಯೆ: ಸರ್ಕಾರದ ವಿರುದ್ದ ಭುಗಿಲೆದ್ದ ಆಕ್ರೋಶ

ಅಸ್ಸಾಂ| ಅರಣ್ಯ ಇಲಾಖೆ ಸಿಬ್ಬಂದಿಯಿಂದ ಇಬ್ಬರು ಮುಸ್ಲಿಂ ಸಹೋದರರ ಹತ್ಯೆ: ಸರ್ಕಾರದ ವಿರುದ್ದ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಕಳ್ಳ ಬೇಟೆಗಾರರೆಂದು ಶಂಕಿಸಿ ನಾಗಾನ್ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಂ ಸಹೋದರರನ್ನು ಅರಣ್ಯ ಇಲಾಖೆ ಗಾರ್ಡ್‌ಗಳು ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಅಧಿಕಾರಕ್ಕೇರಿದಾಗಿನಿಂದ ಸಿಎಂ ಶರ್ಮಾ ಮತ್ತು ಅವರ ಸರ್ಕಾರ ಮಾನವ ಹಕ್ಕುಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿರುವುದು ಮತ್ತು ಕೋಮುವಾದ ಮಾಡುತ್ತಿರುವುದು ಗೊತ್ತೇ ಇದೆ. ಈ ಹತ್ಯೆಯ ಬಳಿಕ ರಾಜ್ಯದ ಹೋರಾಟಗಾರರು, ರಾಜಕಾರಣಿಗಳು ಮತ್ತು ಪ್ರತಿಪಕ್ಷಗಳಲ್ಲಿ ಕಳವಳ ಹೆಚ್ಚಾಗಿದೆ.

ನಾಗಾನ್ ಜಿಲ್ಲೆ ಲಾಖೋವಾ ಬುರ್ಹಾಚಪೋರಿ ವನ್ಯಜೀವಿ ಅಭಯಾರಣ್ಯದ ಗೋರಾಜನ್ ಅರಣ್ಯ ಪ್ರದೇಶದ ರೌಮರಿ ಬೀಲ್ ಬಳಿ ಜೂನ್ 22ರಂದು ಇಬ್ಬರು ಸಹೋದರರಾದ ಸೋಮರ್ ಉದ್ದೀನ್ (36) ಮತ್ತು ಅಬ್ದುಲ್ ಜಲೀಲ್ (44) ಎಂಬವರು ಹತ್ಯೆ ಮಾಡಲಾಗಿದೆ. ಸ್ಥಳೀಯ ಧಿಂಗ್ಬೋರಿ ಚಪೋರಿ ಗ್ರಾಮದ ನಿವಾಸಿಗಳಾದ ಇವರನ್ನು ಕಳ್ಳ ಬೇಟೆಗಾರರು ಎಂದು ಭಾವಿಸಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಆಲ್-ಅಸ್ಸಾಂ ಮೈನಾರಿಟಿ ಸ್ಟೂಡೆಂಟ್ಸ್ ಯೂನಿಯನ್ (ಎಎಎಂಎಸ್‌ಯು) ಗುರುವಾರ (ಜೂನ್ 27) ಸಿಎಂ ಶರ್ಮಾ ಅವರಿಗೆ ಮನವಿ ಪತ್ರ ಕಳುಹಿಸಿದ್ದು, ಇಬ್ಬರು ಮೃತ ಸಹೋದರರಿಗೆ ನ್ಯಾಯ ಕೊಡಿಸಬೇಕು ಮತ್ತು ಅವರ ಕುಟುಂಬಸ್ಥರಿಗೆ ನಗದು ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

ಎಎಎಂಎಸ್‌ಯು ಈ ಸಂಬಂಧ ಜೂನ್ 24 ರಂದು ನಾಗಾನ್ ಜಿಲ್ಲೆಯ ಜುರಿಯಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿದೆ. ಎಫ್‌ಐಆರ್‌ನಲ್ಲಿ ಎಎಎಂಎಸ್‌ಯು ಅರಣ್ಯ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಹೆಸರಿಸಿದ್ದು, ಅವರು ಇಬ್ಬರು ಸಹೋದರರನ್ನು ‘ಸಾಮಾನ್ಯ ಉದ್ದೇಶದಿಂದ’ ಕೊಂದಿದ್ದಾರೆ ಎಂದು ಆರೋಪಿಸಿದೆ.

ಎಎಎಂಎಸ್‌ಯುನ ಸಲಹೆಗಾರ ಐನುದ್ದೀನ್ ಅಹ್ಮದ್, “ಇಬ್ಬರು ಸಹೋದರರು ನಿರಾಯುಧರಾಗಿದ್ದರು. ಅವರ ಎದೆಗೆ ಗುಂಡಿಕ್ಕಿದ್ದಾರೆ. ಮೃತರು ಹತ್ತಿರದ ಹಳ್ಳಿಯ ರೈತರು, ಕಳ್ಳ ಬೇಟೆಗಾರರಲ್ಲ. ಇದು ಬಡ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಹತ್ಯೆ. ಸಿಎಂ ಶರ್ಮಾ ಅವರು ಬಹಳಷ್ಟು ವಿಷಯಗಳಿಗೆ ಉತ್ತರಿಸಬೇಕಿದೆ” ಎಂದಿದ್ದಾರೆ.

“ಇಬ್ಬರು ಸಹೋದರರು ಮಧ್ಯರಾತ್ರಿ ಅಕ್ರಮವಾಗಿ ಮೀನು ಹಿಡಿಯಲು ಅರಣ್ಯ ಪ್ರದೇಶ ಪ್ರವೇಶಿಸಿದ್ದರು. ಅರಣ್ಯ ಸಿಬ್ಬಂದಿ ಅವರನ್ನು ಗುರುತಿಸಿದಾಗ, ಸ್ಥಳದಿಂದ ಪಲಾಯನ ಮಾಡಲು ಪ್ರಯತ್ನಿಸಿದ್ದರು. ಈ ವೇಳೆ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರ ಎರಡು ಅನಾಮಧೇಯ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಘಟನೆಯ ಕುರಿತು ತನಿಖೆ ನಡೆಸುವಂತೆ ಅಸ್ಸಾಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿರುವುದಾಗಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ನೀಟ್‌ ಮಾತ್ರವಲ್ಲ, ಯುಪಿ ಶಾಸಕ ಬೇಡಿ ರಾಮ್ ಮೇಲಿವೆ ಎಂಟು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...