Homeಮುಖಪುಟಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

ಸಂಸತ್ ಅಧಿವೇಶನ : ರಾಹುಲ್ ಗಾಂಧಿಯ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು (ಜುಲೈ 1) ಸಂಸತ್‌ನಲ್ಲಿ ಮಾಡಿದ ಭಾಷಣ ದೇಶದ ಗಮನ ಸೆಳೆದಿದೆ.

ಮಣಿಪುರ ಹಿಂಸಾಚಾರ, ರೈತರ ಹೋರಾಟದ ದಮನ, ನೀಟ್ ಹಗರಣ, ಚುನಾವಣಾ ಪ್ರಚಾರದ ವೇಳೆ ದ್ವೇಷ ಭಾಷಣ ಹೀಗೆ ಎಲ್ಲಾ ವಿಷಯಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾಷಣದಲ್ಲಿ ರಾಹುಲ್ ಗಾಂಧಿ “ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ನೀವು ಯಾವುದೇ ರೀತಿಯಲ್ಲೂ ಹಿಂದೂ ಅಲ್ಲ” ಎಂದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ಗುರಿಯಾಗಿಸಿ ಹೇಳಿದ್ದರು. ಈ ಹೇಳಿಕೆಯ ತುಣುಕನ್ನು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಹುಲ್ ಗಾಂಧಿಯ ಹೇಳಿಕೆಯ ಅರ್ಧ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ತನ್ನನ್ನು ತಾನು ಹಿಂದೂ ಎಂದು ಕರೆದುಕೊಳ್ಳುವ ಪ್ರತಿಯೊಬ್ಬರನ್ನು ‘ಹಿಂಸಾತ್ಮಕ’ ಎಂದು ಕರೆಯುವ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್‌ಗೆ ಹಿಂದೂಗಳ ಮೇಲಿರುವ ದ್ವೇಷ ಮತ್ತು ತಿರಸ್ಕಾರ ಭಾವನೆಯನ್ನು ತೋರಿಸಿದ್ದಾರೆ. ಇದು ಅವರ ಇಂಡಿಯಾ ಒಕ್ಕೂಟದ ಪಾಲುದಾರರ ಹಿಂದೂ ದ್ವೇಷವನ್ನೂ ತೋರಿಸಿದೆ. “ಮೊಹಬ್ಬತ್ ಕಿ ದುಕಾನ್” ಎಂದು ಹೇಳಿಕೊಳ್ಳುವವರ ಬೂಟಾಟಿಕೆ ಬಹಿರಂಗವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಾಲಿ ಆರೋಗ್ಯ ಸಚಿವರ ಜೆಪಿ ನಡ್ಡಾ “ರಾಹುಲ್ ಗಾಂಧಿ ಅವರು ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಕ್ಕಾಗಿ ತಕ್ಷಣವೇ ಎಲ್ಲಾ ಹಿಂದೂಗಳ ಕ್ಷಮೆಯಾಚಿಸಬೇಕು. ಹಿಂದೂಗಳು ಭಯೋತ್ಪಾದಕರು ಎಂದು ವಿದೇಶಿ ರಾಜತಾಂತ್ರಿಕರಿಗೆ ಹೇಳುತ್ತಿದ್ದವರು ಇವರೇ. ಹಿಂದೂಗಳ ಮೇಲಿನ ಈ ಆಂತರಿಕ ದ್ವೇಷ ನಿಲ್ಲಬೇಕು” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ರಾಹುಲ್ ಗಾಂಧಿ ಹೇಳಿಕೆಯ ಅರ್ಧ ವಿಡಿಯೋವನ್ನು ಹಂಚಿಕೊಂಡು ‘ರಾಹುಲ್ ಗಾಂಧಿ ಎಲ್ಲಾ ಹಿಂದೂಗಳನ್ನು ಹಿಂಸಾತ್ಮಕ ಎಂದಿದ್ದಾರೆ ಎಂಬಂತೆ’ ಬಿಂಬಿಸಿದ್ದಾರೆ.

ಅಸಲಿಗೆ ರಾಹುಲ್ ಗಾಂಧಿ ಎಲ್ಲಾ ಹಿಂದೂಗಳನ್ನು ಹಿಂಸಾತ್ಮಕ, ದ್ವೇಷ ಕಾರುವವರು ಎಂದು ಕರೆದಿಲ್ಲ. “ಹಿಂದೂ ಎಂದು ಹೇಳಿಕೊಂಡು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ದ್ವೇಷ, ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯ ಹೇಳಿಕೆಗೆ ಪ್ರಧಾನಿ ಮೋದಿ ಆಕ್ಷೇಪ ವ್ಯಕ್ತಪಡಿಸಿದಾಗ, ರಾಹುಲ್ ಗಾಂಧಿ ಪ್ರತಿಕ್ರಿಯೆ ಕೊಟ್ಟಿದ್ದು, “ನಿಮಗೆ… ಬಿಜೆಪಿಯವರಿಗೆ ನಾನು ಹೇಳಿದ್ದು. ಹಿಂದೂ ಅಂದ್ರೆ ನರೇಂದ್ರ ಮೋದಿಯಲ್ಲ. ಹಿಂದು ಅಂದ್ರೆ ಆರ್‌ಎಸ್‌ಎಸ್‌ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಪೂರ್ಣ ವಿಡಿಯೋದಲ್ಲಿ ಅದನ್ನು ಗಮನಿಸಬಹುದು.

ಇದನ್ನೂ ಓದಿ : ‘ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ..’; ಸದನದಲ್ಲಿ ಕಿಚ್ಚುಹಚ್ಚಿದ ರಾಹುಲ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...