Homeಮುಖಪುಟಇಂಜಿನಿಯರ್ ರಶೀದ್‌ಗೆ 2 ಗಂಟೆಗಳ ಪೆರೋಲ್; ಜುಲೈ 5 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

ಇಂಜಿನಿಯರ್ ರಶೀದ್‌ಗೆ 2 ಗಂಟೆಗಳ ಪೆರೋಲ್; ಜುಲೈ 5 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಜೈಲಿನಲ್ಲಿರುವ ಬರಾಮುಲ್ಲಾ ಲೋಕಸಭಾ ಕ್ಷೇತ್ರದ ಸಂಸದ ಇಂಜಿನಿಯರ್ ಶೇಖ್ ಅಬ್ದುಲ್ ರಶೀದ್ ಅವರಿಗೆ ಜುಲೈ 5 ರಂದು ಲೋಕಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಂಗಳವಾರ (ಜುಲೈ 2) ಎರಡು ಗಂಟೆಗಳ ಕಸ್ಟಡಿ ಪೆರೋಲ್ ನೀಡಿದೆ. ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಅವರು ಮಧ್ಯಂತರ ಜಾಮೀನು ಅಥವಾ ಕಸ್ಟಡಿ ಪೆರೋಲ್ ಕೋರಿದ್ದರು.

ಇಂಜಿನಿಯರ್ ರಶೀದ್ ಎಂದು ಕರೆಯಲ್ಪಡುವ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ತನ್ನ ಒಪ್ಪಿಗೆ ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಗೆದ್ದಿರುವ ರಶೀದ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಲಾಗಿತ್ತು.

2017ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಹಣ ನೀಡಿದ ಪ್ರಕರಣದಲ್ಲಿ ಬಂಧಿತರಾಗಿರುವ ರಶೀದ್ ಜೈಲಿನಲ್ಲಿ ಇದ್ದಕೊಂಡೇ ಭಾರೀ ಅಂತದಿಂದ ಗೆಲುವು ಸಾಧಿಸಿದ್ದರು; ಪ್ರಮಾಣ ವಚನ ಸ್ವೀಕರಿಸಲು ಮತ್ತು ಸಂಸತ್ತಿನ ಕಾರ್ಯಗಳನ್ನು ನಿರ್ವಹಿಸಲು ಮಧ್ಯಂತರ ಜಾಮೀನು ಅಥವಾ ಕಸ್ಟಡಿ ಪೆರೋಲ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಜೂನ್ 22 ರಂದು ವಿಶೇಷ ನ್ಯಾಯಾಲಯವು ಪ್ರಕರಣವನ್ನು ಮುಂದೂಡಿತು. ಪ್ರತಿಕ್ರಿಯೆ ನೀಡುವಂತೆ ಎನ್‌ಐಎಗೆ ಕೇಳಿತ್ತು. ಈ ಪೆರೋಲ್ ಮಾಧ್ಯಮಗಳೊಂದಿಗೆ ಸಂವಹನ ನಡೆಸದಿರುವುದು ಸೇರಿದಂತೆ ಕೆಲವು ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂದು ಎನ್ಐಎ ವಕೀಲರು ಹೇಳಿದರು.

ಇಂಜಿನಿಯರ್ ರಶೀದ್ ಯಾರು?

ರಶೀದ್ ಅವರು ಬಾರಾಮುಲ್ಲಾದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಜೆ-ಕೆ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದರು. ಜಮ್ಮು ಮತ್ತು ಕಾಶ್ಮೀರ ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಶೀದ್‌ನನ್ನು ಬಂಧಿಸಲಾಗಿತ್ತು. ಅವರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ಪ್ರಸ್ತುತ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಭಯೋತ್ಪಾದಕ ಗುಂಪುಗಳು ಮತ್ತು ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಹಣಕಾಸು ಒದಗಿಸುವ ಹೊಣೆಗಾರಿಕೆಯಲ್ಲಿ ಎನ್‌ಐಎಯಿಂದ ಬಂಧಿಸಲ್ಪಟ್ಟ ಕಾಶ್ಮೀರಿ ಉದ್ಯಮಿ ಜಹೂರ್ ವಾತಾಲಿ ಅವರ ತನಿಖೆಯ ಸಮಯದಲ್ಲಿ ರಶೀದ್‌ ಅವರ ಈ ಪ್ರಕರಣವು ಮುನ್ನೆಲೆಗೆ ಬಂದಿತು. ಎನ್‌ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ಯಾಸಿನ್ ಮಲಿಕ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಸೇರಿದಂತೆ ಹೆಸರುಗಳನ್ನು ಸೇರಿಸಿದೆ.

ರಶೀದ್ ವಿರುದ್ಧ ‘ಭಯೋತ್ಪಾದನೆ ನಿಧಿ’ ಪ್ರಕರಣ

ಇಂಜಿನಿಯರ್ ರಶೀದ್ ಎಂದು ಜನಪ್ರಿಯರಾಗಿರುವ ಶೇಖ್ ಅಬ್ದುಲ್ ರಶೀದ್ 2016 ರಲ್ಲಿ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಬಂಧಿತರಾಗಿದ್ದರು. ಅವರನ್ನು ಯುಎಪಿಎ ಕಾನೂನಿನಡಿ ಬಂಧಿಸಲಾಗಿತ್ತು. ಅಂದಿನಿಂದ ಅವರು ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಶೀದ್ ಅವರು ಅಬ್ದುಲ್ಲಾ ಅವರನ್ನು 2,04,142 ಮತಗಳ ಅಂತರದಿಂದ ಸೋಲಿಸಿದರು. ರಶೀದ್ 4,72,481 ಮತಗಳನ್ನು ಪಡೆದರೆ, ಅಬ್ದುಲ್ಲಾ 2,68,339 ಮತಗಳನ್ನು ಪಡೆದರು. ಸಜ್ಜದ್ ಗನಿ ಲೋನ್ 1,73,239 ಒಟ್ಟು ಮತಗಳನ್ನು ಪಡೆದು ಎರಡನೇ ರನ್ನರ್ ಅಪ್ ಆಗಿ ಕೊನೆಗೊಂಡರು.

ಇದನ್ನೂ ಓದಿ; ಅಯೋಧ್ಯೆ ಲೋಕಸಭೆ ಗೆಲುವು; ‘ಶಾಯರಿ’ ಮೂಲಕ ಆದಿತ್ಯನಾಥ್ ಕಾಲೆಳೆದ ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...