Homeಮುಖಪುಟತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌...

ತನ್ನ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕಿದ ಕ್ರಮ ಪ್ರಶ್ನಿಸಿ ಸ್ಪೀಕರ್‌ಗೆ ಪತ್ರ ಬರೆದ ರಾಹುಲ್‌ ಗಾಂಧಿ

- Advertisement -
- Advertisement -

ಸಂಸತ್‌ನಲ್ಲಿ ತಾನು ಮಾಡಿದ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕುವ ಸ್ಪೀಕರ್ ಓಂ ಬಿರ್ಲಾ ಅವರ ಕ್ರಮ ಪ್ರಶ್ನಿಸಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಸ್ಪೀಕರ್‌ ಅವರ ಕ್ರಮ ಸಂಸದೀಯ ಪ್ರಜಾಪ್ರಭುತ್ವದ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ರಾಹುಲ್‌ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಜುಲೈ 1ರಂದು ನಾನು ಮಾಡಿದ ಭಾಷಣದ ಭಾಗಗಳನ್ನು ಕಡತದಿಂದ ತೆಗೆದು ಹಾಕುವ ಸ್ಪೀಕರ್ ಅವರ ನಿರ್ಧಾರಕ್ಕೆ ಸಂಬಂಧಪಟ್ಟಂತೆ ನಾನು ಪತ್ರ ಬರೆಯುತ್ತಿದ್ದೇನೆ. ಲೋಕಸಭೆಯ ವ್ಯವಹಾರಗಳ ನಿಯಮ 380ರ ಅಡಿ ವಿರೋಧಿಸಲಾದ ಪದಗಳನ್ನು ಕಡತದಿಂದ ತೆಗೆದು ಹಾಕುವ ಅಧಿಕಾರ ಅಧ್ಯಕ್ಷರಿಗಿದೆ. ಆದರೆ, ನಾನು ಅಂತಹ ಪದಗಳನ್ನು ಬಳಸಿಲ್ಲ” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ.

“ನನ್ನ ಭಾಷಣದ ಹಲವು ಭಾಗಗಳನ್ನು ಕಡತದಿಂದ ತೆಗೆದು ಹಾಕುವ ನಿರ್ಧಾರದಿಂದ ನಾನು ಆಘಾತಗೊಂಡಿದ್ದೇನೆ. ನಾನು ಸದನದಲ್ಲಿ ತಿಳಿಸಿದ್ದು ನೆಲದ ವಾಸ್ತವಿಕತೆಯನ್ನಾಗಿದೆ. ಭಾರತದ ಸಂವಿಧಾನದ 105(1)ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಿರುವಂತೆ ತನ್ನ ಮತ್ತ ತಾನು ಪ್ರತಿನಿಧಿಸುವ ಜನರ ಸಾಮೂಹಿಕ ಧ್ವನಿಯನ್ನು ವ್ಯಕ್ತಪಡಿಸುವ ಹಕ್ಕು ಸದನದ ಪ್ರತಿಯೊಬ್ಬ ಸದಸ್ಯರಿಗೂ ಇದೆ. ಸದನದಲ್ಲಿ ಜನಪರ ಕಾಳಜಿ ವ್ಯಕ್ತಪಡಿಸುವುದು ಪ್ರತಿಯೊಬ್ಬ ಸದಸ್ಯರ ಹಕ್ಕು” ಎಂದಿದ್ದಾರೆ.

ಬಿಜೆಪಿ ಸಂಸದ ಅನುರಾಗ್‌ ಠಾಕುರ್‌ ಅವರ ಭಾಷಣದಲ್ಲಿ ತುಂಬಾ ಆರೋಪಗಳಿದ್ದರೂ, ಅಚ್ಚರಿಯೆಂಬಂತೆ ಕೇವಲ ಒಂದು ಪದವನ್ನು ಕಡತದಿಂದ ತೆಗೆದು ಹಾಕಲಾಗಿದೆ ಎಂದು ರಾಹುಲ್‌ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಭಾಷಣದ ರಾಹುಲ್ ಗಾಂಧಿ “ಪ್ರವಾದಿ ಮುಹಮ್ಮದ್ ಅವರನ್ನು ಉಲ್ಲೇಖಿಸಿ ಖುರಾನ್‌ನಲ್ಲಿ ತಿಳಿಸಲಾದ ನಿರ್ಭಯತೆಯ ಬಗ್ಗೆ ಮಾತನಾಡಿದ್ದರು. ಭಗವಾನ್ ಶಿವ, ಗುರುನಾನಕ್ ಮತ್ತು ಏಸು ಕ್ರೈಸ್ತನ ಫೋಟೋಗಳನ್ನು ಪ್ರದರ್ಶಿಸಿ ಹಿಂದೂ, ಇಸ್ಲಾಂ, ಸಿಖ್, ಕ್ರೈಸ್ತ, ಬೌದ್ಧ ಮತ್ತು ಜೈನ ಧರ್ಮಗಳಲ್ಲಿ ಉಲ್ಲೇಖಿಸಲಾದ ನಿರ್ಭಯತೆಯ ಮಹತ್ವವನ್ನು ಒತ್ತಿ ಹೇಳಿದ್ದರು. ಭಗವಾನ್ ಶಿವನ ಗುಣ ಲಕ್ಷಣಗಳನ್ನು ಮತ್ತು ಗುರುನಾನಕ್, ಏಸು ಕ್ರಿಸ್ತ, ಬುದ್ಧ ಮತ್ತು ಮಹಾವೀರರ ಬೋಧನೆಗಳನ್ನು ಉಲ್ಲೇಖಿಸಿ, ದೇಶದ ಎಲ್ಲಾ ಧರ್ಮಗಳು ಮತ್ತು ಮಹಾನ್ ವ್ಯಕ್ತಿಗಳು “ಹೆದರಬೇಡಿ, ಇತರರನ್ನು ಹೆದರಿಸಬೇಡಿ” ಎಂದು ಹೇಳಿದ್ದಾರೆ. ಶಿವಾಜಿ ಕೂಡ ಅಹಿಂಸೆಯ ಬಗ್ಗೆ ಮಾತನಾಡಿದ್ದಾರೆ ಎಂದಿದ್ದರು.

ಇದನ್ನೂ ಓದಿ : ಇಂಜಿನಿಯರ್ ರಶೀದ್‌ಗೆ 2 ಗಂಟೆಗಳ ಪೆರೋಲ್; ಜುಲೈ 5 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...