Homeಮುಖಪುಟಅನಾಥಾಶ್ರಮದಲ್ಲಿ ಆಹಾರ ಸೇವನೆ; ಐವರು ಬಾಲಕರು ಸಾವು, 30ಕ್ಕೂ ಹೆಚ್ಚು ಮಂದಿ ಅಸ್ವಸ್ತ

ಅನಾಥಾಶ್ರಮದಲ್ಲಿ ಆಹಾರ ಸೇವನೆ; ಐವರು ಬಾಲಕರು ಸಾವು, 30ಕ್ಕೂ ಹೆಚ್ಚು ಮಂದಿ ಅಸ್ವಸ್ತ

- Advertisement -
- Advertisement -

ಇಂದೋರ್‌ನ ಯುಗ್ಪುರುಷ ಧಾಮ್ ಆಶ್ರಮದ ಅನಾಥಾಶ್ರಮದಲ್ಲಿ 5 ರಿಂದ 15 ವರ್ಷ ವಯಸ್ಸಿನ ಐದು ವಿಶೇಷ ಸಾಮರ್ಥ್ಯದ ಬಾಲಕರು ಭಾನುವಾರದಿಂದ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಭಾನುವಾರ ಮಕ್ಕಳು ಸೇವಿಸಿದ ಊಟದಲ್ಲಿ ವಿಷ ಸೇವಿಸಿ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

30 ಮಂದಿಯಲ್ಲಿ ನಾಲ್ವರಿಂದ ಐವರು ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಈ ಘಟನೆಯು ವ್ಯಾಪಕ ಕಳವಳವನ್ನು ಹುಟ್ಟುಹಾಕಿದ್ದು, ಅನಾಥಾಶ್ರಮದ ಆಹಾರ ಸುರಕ್ಷತಾ ಅಭ್ಯಾಸಗಳು ಮತ್ತು ಒಟ್ಟಾರೆ ನಿರ್ವಹಣೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ.

ಘಟನೆಯ ನಂತರ, ಸ್ಥಳೀಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಓಂ ನಾರಾಯಣ್ ಬದ್ಕುಲ್ ಅವರು ಅನಾಥಾಶ್ರಮದ ಮುಖ್ಯಸ್ಥೆ ಅನಿತಾ ಶರ್ಮಾ ಅವರೊಂದಿಗೆ ನಗುತ್ತಿರುವ ವಿಡಿಯೊ ಎಲ್ಲೆಡೆ ವೈರಲ್ ಆಗಿದ್ದು, ಪಕ್ಕದಲ್ಲಿ ಸತ್ತ ಬಾಲಕನ ದೇಹವು ಹತ್ತಿರದಲ್ಲಿರುವುದು ವಿವಾದಕ್ಕೆ ಕಾರಣವಾಗಿದೆ.

ವೀಡಿಯೋ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.

“ಇಲ್ಲಿನ ಶ್ರೀ ಯುಗ್ಪುರುಷ ಧಾಮ್ ಆಶ್ರಮದಲ್ಲಿ ಮಂಗಳವಾರ ಬೆಳಿಗ್ಗೆ, ಕೆಲವು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ ಎಂದು ನಮಗೆ ಮಾಹಿತಿ ಬಂದಿತು. ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ವೈದ್ಯರ ತಂಡ, ಮುನ್ಸಿಪಲ್ ಕಾರ್ಪೊರೇಶನ್‌ಗಳ ತಂಡದೊಂದಿಗೆ ಆಹಾರ ಸುರಕ್ಷತೆಯನ್ನು ತನಿಖೆಗೆ ಕಳುಹಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯು ಸ್ಥಳದಿಂದ ಮಾದರಿಗಳನ್ನು ತೆಗೆದುಕೊಂಡು ಅದರ ಪರೀಕ್ಷೆಯ ನಂತರ, ಘಟನೆಗೆ ಕಾರಣವನ್ನು ತಿಳಿಯಬಹುದು” ಎಂದು ಅವರು ಹೇಳಿದರು.

ಸಾವಿಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಲು ಇಂದೋರ್‌ನ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ನೇತೃತ್ವದ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಅನಾಥಾಶ್ರಮದ ಅಡುಗೆಮನೆಯಿಂದ ಆಹಾರದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಮತ್ತು ಶಂಕಿತ ಆಹಾರ ವಿಷದ ಕಾರಣವನ್ನು ನಿರ್ಧರಿಸಲು ವಿಶ್ಲೇಷಿಸಲಾಗುತ್ತದೆ.

ಇದನ್ನೂ ಓದಿ; ‘ಖರ್ಗೆ ಬದಲಿಗೆ ಜೈರಾಮ್ ನಾಯಕರಾಗಲಿ’ ಎಂದ ಧನಖರ್; ‘ನಿಮ್ಮ ತಲೆಯಿಂದ ವರ್ಣ ವ್ಯವಸ್ಥೆ ಹೋಗಿಲ್ಲ’ ಎಂದು ಕಿಡಿಕಾರಿದ ಕಾಂಗ್ರೆಸ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...