ಮಣಿಪುರ ಹಿಂಸಾಚಾರವನ್ನು ಕಾಂಗ್ರೆಸ್ ನಾಯಕರು ರಾಜಕೀಯಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯಲ್ಲಿ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಣಿಪುರದ ಜ್ವಲಂತ ಸಮಸ್ಯೆಯ ಬಗ್ಗೆ ಸಂವೇದನಾಶೀಲ ಮತ್ತು ಸಹಾನುಭೂತಿಯ ಕೊರತೆಯಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ ಎಂದು ಹೇಳಿದರು.
ಮಣಿಪುರದ ಹಿಂಸಾಚಾರದ ಇತ್ತೀಚಿನ ಬೆಳವಣಿಗೆಯಲ್ಲಿ ಜೂನ್ ಕೊನೆಯ ವಾರದಲ್ಲಿ ಎರಡು ಸಮುದಾಯಗಳಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳ ನಡುವೆ ಹೊಸ ಘರ್ಷಣೆಗಳು ಪ್ರಾರಂಭವಾದವು. ಇದಕ್ಕೂ ಮೊದಲು ಜೂನ್ 7 ರಂದು, ಸೋಬಾಮ್ ಶರತ್‌ಕುಮಾರ್ ಸಿಂಗ್ (59) ಅವರ ನಿರ್ಜೀವ ದೇಹವನ್ನು ವಶಪಡಿಸಿಕೊಂಡ ನಂತರ ಹೆಚ್ಚಾಗಿ ಶಾಂತಿಯುತ ಜಿರಿಬಾಮ್‌ನಲ್ಲಿ ಹಿಂಸಾಚಾರ ಸ್ಫೋಟಗೊಂಡಿತು. ಆತನನ್ನು ಉಗ್ರರು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಕೆರಳಿದ ಸ್ಥಳೀಯರು ಕೆಲವು ಕಟ್ಟಡಗಳಿಗೆ ಬೆಂಕಿ ಹಚ್ಚಿದರು, ನಂತರ ಆ ಪ್ರದೇಶದಲ್ಲಿ ಕರ್ಫ್ಯೂ ಹೇರಲಾಯಿತು.
ಕಳೆದ ವರ್ಷ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಆರಂಭವಾಗಿತ್ತು. ಅಲ್ಲಿಂದೀಚೆಗೆ, ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಬೆಟ್ಟಗಳ ಮೂಲದ ಕುಕಿಗಳ ನಡುವೆ 200 ಕ್ಕೂ ಹೆಚ್ಚು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ಈ ವಿಷಯವನ್ನು ಪ್ರಸ್ತಾಪಿಸಿದ ಪ್ರಧಾನಿ, “ಮಣಿಪುರದಲ್ಲಿ ಶಾಂತಿಯನ್ನು ತರಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ, ಎಲ್ಲರೂ ಸಹಕರಿಸುವಂತೆ ಕೇಳಿಕೊಳ್ಳುತ್ತೇವೆ. ಮಣಿಪುರ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ, ಮುಂದೊಂದು ದಿನ ಮಣಿಪುರ ನಿಮ್ಮನ್ನು ತಿರಸ್ಕರಿಸುತ್ತದೆ” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
“500 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ, ಮಣಿಪುರದಲ್ಲಿ 11,000 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ… ಹೆಚ್ಚಿನ ಭಾಗಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಸಹಜ ಸ್ಥಿತಿಗೆ ತರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.. ಹಿಂಸಾಚಾರದ ಘಟನೆಗಳು ಇಳಿಮುಖವಾಗಿವೆ” ಎಂದು ಅವರು ಹೇಳಿದರು.
ಮಣಿಪುರ ಪ್ರವಾಹದ ಕುರಿತು ಪ್ರಧಾನಿ ಹೇಳಿದರು, “ಮಣಿಪುರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕೇಂದ್ರವು ರಾಜ್ಯಕ್ಕೆ ಸಹಾಯ ಮಾಡುತ್ತಿದೆ, 2 ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸಿದೆ” ಎಂದರು.
ಇದನ್ನೂ ಓದಿ; ರಾಜ್ಯಸಭೆ: ಪ್ರಧಾನಿ ಮೋದಿಯವರ ಭಾಷಣದ ವೇಳೆ ಸಭಾತ್ಯಾಗ ಮಾಡಿದ ‘ಇಂಡಿಯಾ ಬ್ಲಾಕ್’


