Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

- Advertisement -
- Advertisement -

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 12 ರವರೆಗೆ ಇಲ್ಲಿನ ನ್ಯಾಯಾಲಯವು ಬುಧವಾರ ವಿಸ್ತರಿಸಿದೆ. ಮತ್ತಿಬ್ಬರು ಪ್ರಮುಖ ಆರೋಪಿಗಳಾದ ಮನೀಶ್ ಸಿಸೋಡಿಯಾ ಮತ್ತು ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಕೋರ್ಟ್‌ ಜುಲೈ 25 ರವರೆಗೆ ವಿಸ್ತರಿಸಿದೆ.

ಕೇಜ್ರಿವಾಲ್ ಅವರು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ನ್ಯಾಯಾಲಯದ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ಏಪ್ರಿಲ್ 22 ರಂದು ನ್ಯಾಯಾಲಯದ ಆದೇಶದ ಮೇರೆಗೆ ಏಮ್ಸ್‌ ರಚಿತವಾದ ವಿಶೇಷ ಮಂಡಳಿಯೊಂದಿಗೆ ವೈದ್ಯಕೀಯ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಕೇಜ್ರಿವಾಲ್ ಅವರು ತಮ್ಮ ಪತ್ನಿಯ ಉಪಸ್ಥಿತಿಯನ್ನು ಕೋರಿ ಸಲ್ಲಿಸಿದ ಅರ್ಜಿಯ ಕುರಿತು ನ್ಯಾಯಾಲಯವು ತನ್ನ ಆದೇಶಗಳನ್ನು ಕಾಯ್ದಿರಿಸಿದೆ. ನ್ಯಾಯಾಲಯವು ಜುಲೈ 6 ರಂದು ತನ್ನ ಆದೇಶಗಳನ್ನು ಪ್ರಕಟಿಸಲಿದೆ. .

ಜೂನ್ 26 ರಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕರನ್ನು ಬಂಧಿಸಿದ್ದ ಕೇಂದ್ರೀಯ ತನಿಖಾ ದಳದ (ಸಿಬಿಐ) ಮನವಿಯ ಮೇರೆಗೆ ಶನಿವಾರ ನಗರ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಇದಕ್ಕೂ ಮೊದಲು ಕೇಜ್ರಿವಾಲ್ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠದ ಮುಂದೆ ಕೇಜ್ರಿವಾಲ್ ಅವರ ವಕೀಲ ರಜತ್ ಭಾರದ್ವಾಜ್ ಅವರು ಜಾಮೀನು ಅರ್ಜಿಯನ್ನು ಪ್ರಸ್ತಾಪಿಸಿದರು.

ಸೆಕ್ಷನ್ 41 ಸಿಆರ್‌ಪಿಸಿಯನ್ನು ಅನುಸರಿಸದೆ ಸಿಎಂ ಅವರನ್ನು ಅಕ್ರಮ ಬಂಧನಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರು ಗುರುವಾರ ಸಲ್ಲಿಸಿರುವ ಮನವಿಯನ್ನು ಪಟ್ಟಿ ಮಾಡುವಂತೆ ಭಾರದ್ವಾಜ್ ನ್ಯಾಯಾಲಯವನ್ನು ಒತ್ತಾಯಿಸಿದರು.

“ಜಾಮೀನು ಅರ್ಜಿ ಸಲ್ಲಿಸಿದ್ದೇವೆ. ಸೆಕ್ಷನ್ 41 ಅನ್ನು ಅನುಸರಿಸದೆ ಅರ್ಜಿದಾರರನ್ನು ಅಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

ವಾದವನ್ನು ಪರಿಗಣಿಸಿದ ನ್ಯಾಯಾಲಯವು ಶುಕ್ರವಾರ ವಿಷಯವನ್ನು ಪಟ್ಟಿ ಮಾಡಲು ಒಪ್ಪಿಕೊಂಡಿತು. “ನಾವು ಅದನ್ನು ಮುಂದಿನ ದಿನದಲ್ಲಿ ಪಟ್ಟಿ ಮಾಡುತ್ತೇವೆ” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಹೇಳಿದರು.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರನ್ನು ಸಿಬಿಐ ಜೂನ್ 26 ರಂದು ತಿಹಾರ್ ಜೈಲಿನಿಂದ ಬಂಧಿಸಿದ್ದು, ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮಾರ್ಚ್ 21ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಜೂನ್ 20ರಂದು ಜಾಮೀನು ನೀಡಿತ್ತು. ಆದರೆ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.

ಸಿಸೋಡಿಯಾ-ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ಜುಲೈ 25 ರವರೆಗೆ ವಿಸ್ತರಿಸಿದ್ದು, ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಕಸ್ಟಡಿಯನ್ನು ವಿಸ್ತರಿಸಿದರು.

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ ಹಿಂದೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಗಿದಿರುವ ಕಾರಣ ಅವರ ನ್ಯಾಯಾಂಗ ಬಂಧನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಸ್ತರಿಸಿದರು. ಜುಲೈ 1 ರಂದು ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಎರಡು ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಕೆ ಕವಿತಾ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು.

ಇದಕ್ಕೂ ಮುನ್ನ ನ್ಯಾಯಾಲಯವು ಕವಿತಾ ಮತ್ತು ಮನೀಶ್ ಸಿಸೋಡಿಯಾ ಅವರೊಂದಿಗೆ ಆರೋಪಿಗಳಾಗಿದ್ದ ಇತರ ಮೂವರಿಗೆ ಜಾಮೀನು ನೀಡಿತ್ತು.

ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಫೆಬ್ರವರಿ 26, 2023 ರಂದು ಅಬಕಾರಿ ನೀತಿ ಪ್ರಕರಣದಲ್ಲಿ ಅವರ ಪಾತ್ರಕ್ಕಾಗಿ ಸಿಸೋಡಿಯಾ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಬಂಧಿಸಿತು ಮತ್ತು ನಂತರ ಮಾರ್ಚ್ 9 ರಂದು ಸಂಬಂಧಿತ ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಸುಪ್ರೀಂ ಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅವರ ಕ್ಯುರೇಟಿವ್ ಅರ್ಜಿಗಳು ಪ್ರಕರಣದಲ್ಲಿ ತಿರಸ್ಕರಿಸಲಾಗಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂನ್ 26 ರಂದು ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ ನಂತರ ಜುಲೈ 12 ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಎಪಿ ಸಂಚಾಲಕರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು.

ಇದನ್ನೂ ಓದಿ; ರಾಜ್ಯಸಭೆ: ಪ್ರಧಾನಿ ಮೋದಿಯವರ ಭಾಷಣದ ವೇಳೆ ಸಭಾತ್ಯಾಗ ಮಾಡಿದ ‘ಇಂಡಿಯಾ ಬ್ಲಾಕ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಿಳೇಕಹಳ್ಳಿ’ ಮೆಟ್ರೋ ನಿಲ್ದಾಣಕ್ಕೆ ಕೇವಲ ‘ಐಐಎಂಬಿ’ ಹೆಸರಿಟ್ಟಿರುವುದಕ್ಕೆ ಸ್ಥಳೀಯರಿಂದ ತೀವ್ರ ವಿರೋಧ : ಮರುನಾಮಕರಣಕ್ಕೆ ಆಗ್ರಹ

ಬೆಂಗಳೂರಿನ 'ನಮ್ಮ ಮೆಟ್ರೋ' ಗುಲಾಬಿ ಮಾರ್ಗದ (Pink Line) 'ಬಿಳೇಕಹಳ್ಳಿ' ನಿಲ್ದಾಣಕ್ಕೆ ಕೇವಲ ಐಐಎಂಬಿ (ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು) ಎಂದು ಹೆಸರಿಟ್ಟಿರುವುದಕ್ಕೆ ಊರಿನ ಜನರು ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತಪಡಿಸಿದ್ದು,...

ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಸೌದಿಯಲ್ಲಿ ಮರಣದಂಡನೆ: ವಿಶ್ವಸಂಸ್ಥೆ ತಜ್ಞರ ತೀವ್ರ ಖಂಡನೆ, ಇಬ್ಬರ ಜೀವ ಉಳಿಸಲು ಆಗ್ರಹ

ಸೌದಿ ಅರೇಬಿಯಾದಲ್ಲಿ ಬಾಲ್ಯದಲ್ಲಿ ಮಾಡಿದ ಕೃತ್ಯಗಳಿಗಾಗಿ ಮರಣದಂಡನೆಗೆ ಗುರಿಯಾಗಿದ್ದ ಹಸನ್ ಝಾಕಿ ಅಲ್-ಫರಾಜ್ ಅವರನ್ನು ಗಲ್ಲಿಗೇರಿಸಿರುವುದಕ್ಕೆ ವಿಶ್ವಸಂಸ್ಥೆಯ ತಜ್ಞರು ತೀವ್ರ ಆಘಾತ ಮತ್ತು ಖಂಡನೆ ವ್ಯಕ್ತಪಡಿಸಿದ್ದಾರೆ. ಇದೇ ಪ್ರಕರಣದ ಮಾದರಿಯಲ್ಲಿ ಮರಣದಂಡನೆ ಎದುರಿಸುತ್ತಿರುವ...

ತಮಿಳುನಾಡು| ಜಾತಿ ತಾರತಮ್ಯಕ್ಕೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಶಿಕ್ಷಕನ ಬಂಧನ; ಸಹಪಾಠಿಗಳ ವಿರುದ್ಧ ಕೇಸ್‌ ದಾಖಲು

ಕೊಯಮತ್ತೂರಿನ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, ಸಹಪಾಠಿಗಳಿಂದ ಜಾತಿ ಆಧಾರಿತ ಕಿರುಕುಳಕ್ಕೆ ಒಳಗಾದ ನಂತರ, ಅಕ್ಟೋಬರ್ 21, ಬುಧವಾರದಂದು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ...

ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಒಂಬತ್ತು ರಾಜಕೀಯ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಉತ್ತರ ಪ್ರದೇಶ: ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ವೀಕ್ಷಿಸುತ್ತಿದ್ದ ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; ಆರು ಜನರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯನ್ನು ವೀಕ್ಷಿಸುತ್ತಿದ್ದ ದಲಿತ ಸಮುದಾಯದ ಪುರುಷರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ನಾಲ್ವರು...

‘ಮತ್ತೊಂದು ಗಾಲ್ವಾನ್ ಸಂಭವಿಸುತ್ತಿದೆಯೇ?’: ಅರುಣಾಚಲದಲ್ಲಿ ಚೀನಾ ಸೇನೆ ಜೊತೆಗಿನ ಮುಖಾಮುಖಿ ವರದಿ ಬೆನ್ನಲ್ಲೇ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಮುಖಾಮುಖಿ ಮುಂದುವರಿದಿರುವ ವರದಿಗಳ ಕುರಿತು ಕೇಂದ್ರ ಸರ್ಕಾರ ಮೌನ ವಹಿಸಿದೆ ಎಂದು ಶುಕ್ರವಾರ (ಅ.23) ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಗಡಿ ಭದ್ರತೆ ಮತ್ತು...

ಎಸ್‌ಐಆರ್ ವಿರುದ್ಧ ಒಂದಾದ ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳು: ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರಾಷ್ಟ್ರಧ್ವಜದೊಂದಿಗೆ ಜಾಥಾ

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಬೆಂಗಳೂರಿನಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ, ಮಹಿಳಾ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ಒಗ್ಗಟ್ಟಿನ ಹೋರಾಟ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು, ಮುಖ್ಯ ಚುನಾವಣಾ...

ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ: ಚುನಾವಣಾ ಆಯೋಗದತ್ತ ಮೆರವಣಿಗೆ, ಹಲವರನ್ನು ವಶಕ್ಕೆ ಪಡೆದ ಪೊಲೀಸರು 

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಆರೋಪಿಸಿ, ದೆಹಲಿಯಲ್ಲಿ ಶುಕ್ರವಾರ ನಡೆದ ‘ಪೀಪಲ್ ಅಗೇನ್ಸ್ಟ್ ಎಸ್‌ಐಆರ್’ ಪ್ರತಿಭಟನಾ...

“ಭಿನ್ನಾಭಿಪ್ರಾಯ ಅಪರಾಧವಲ್ಲ”: ಬಾಬರಿ ಮಸೀದಿ ತೀರ್ಪಿನ ವಿರುದ್ಧ ಪೋಸ್ಟರ್ ಹಾಕಿದ್ದ 13 ಜನರ ಮೇಲಿನ ದೇಶದ್ರೋಹ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಮಂಗಳೂರು: ಸುಪ್ರೀಂ ಕೋರ್ಟ್‌ನ ಬಾಬರಿ ಮಸೀದಿ ತೀರ್ಪಿನ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಆರೋಪದ ಮೇಲೆ 13 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರದ ಅಥವಾ ನ್ಯಾಯಾಲಯದ...

ಯುಪಿ ಎಂಎಲ್‌ಸಿ ಚುನಾವಣೆ: ‘ಕಳ್ಳಮತದಾನ’ ಹಾಗೂ ‘ಬೂತ್ ಕ್ಯಾಪ್ಚರಿಂಗ್’ ರಂಪಾಟ; ಬಿಜೆಪಿ ನಾಯಕರು ಹಾಗೂ ಅಧಿಕಾರಿಗಳ ವಿರುದ್ಧ ಎಸ್‌ಪಿ ಗಂಭೀರ ಆರೋಪ!

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಎಂಎಲ್‌ಸಿ (ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ) ಚುನಾವಣೆಯ ಮತದಾನದ ವೇಳೆ ಆಡಳಿತಾರೂಢ ಬಿಜೆಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳು ಸಾಲು ಸಾಲು ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ...