Homeಮುಖಪುಟಮಧ್ಯ ಪ್ರದೇಶ : ಕಳೆದ ಮೂರು ವರ್ಷಗಳಲ್ಲಿ 31 ಸಾವಿರಕ್ಕೂ ಅಧಿಕ ಮಹಿಳೆಯರು ನಾಪತ್ತೆ!

ಮಧ್ಯ ಪ್ರದೇಶ : ಕಳೆದ ಮೂರು ವರ್ಷಗಳಲ್ಲಿ 31 ಸಾವಿರಕ್ಕೂ ಅಧಿಕ ಮಹಿಳೆಯರು ನಾಪತ್ತೆ!

- Advertisement -
- Advertisement -

ಕಳೆದ ಮೂರು ವರ್ಷಗಳಲ್ಲಿ ಮಧ್ಯ ಪ್ರದೇಶದಲ್ಲಿ 31,000 ಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಎನ್‌ಡಿವಿ ವರದಿ ಮಾಡಿದೆ.

ಅಧಿಕೃತ ಮಾಹಿತಿಯ ಪ್ರಕಾರ, 2021 ಮತ್ತು 2024ರ ನಡುವೆ ಮಧ್ಯ ಪ್ರದೇಶದಲ್ಲಿ 28,857 ಮಹಿಳೆಯರು ಮತ್ತು 2,944 ಹುಡುಗಿಯರು ಕಾಣೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಗೃಹ ಸಚಿವ ಬಾಲಾ ಬಚ್ಚನ್ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಈ ಅಂಕಿ ಅಂಶಗಳನ್ನು ನೀಡಿದೆ.

ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಪ್ರತಿ ದಿನ ಸರಾಸರಿ 28 ಮಹಿಳೆಯರು ಮತ್ತು ಮೂವರು ಹುಡುಗಿಯರು ಕಾಣೆಯಾಗುತ್ತಿದ್ದಾರೆ. ಈ ಆತಂಕಕಾರಿ ಸಂಖ್ಯೆಯ ಹೊರತಾಗಿಯೂ, ಕೇವಲ 724 ನಾಪತ್ತೆ ಪ್ರಕರಣಗಳು ಮಾತ್ರ ಅಧಿಕೃತವಾಗಿ ದಾಖಲಾಗಿವೆ.

ಉಜ್ಜಯಿನಿಯಲ್ಲಿ ಕಳೆದ 34 ತಿಂಗಳಿನಲ್ಲಿ 676 ಮಹಿಳೆಯರು ನಾಪತ್ತೆಯಾಗಿದ್ದಾರೆ. ಇನ್ನೂ ಒಂದೇ ಒಂದು ಪ್ರಕರಣ ದಾಖಲಾಗಿಲ್ಲ.

ಸಾಗರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಹೆಣ್ಣು ಮಕ್ಕಳು ಕಾಣೆಯಾಗಿದ್ದು, 245 ಪ್ರಕರಣಗಳು ದಾಖಲಾಗಿವೆ. ಇಂದೋರ್‌ನಲ್ಲಿ, 2,384 ಮಹಿಳೆಯರು ಕಾಣೆಯಾಗಿದ್ದಾರೆ. ಇದು ರಾಜ್ಯದ ಎಲ್ಲಾ ಜಿಲ್ಲೆಗಿಂತ ಅತಿ ಹೆಚ್ಚು. ಇಂದೋರ್‌ನಲ್ಲಿ ಒಂದು ತಿಂಗಳಿನಲ್ಲಿ 479 ಮಹಿಳೆಯರು ನಾಪತ್ತೆಯಾಗಿದ್ದಾರೆ. ಆದರೆ, 15 ಪ್ರಕರಣಗಳು ಮಾತ್ರ ದಾಖಲಾಗಿವೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ಮಣಿಪುರದಲ್ಲಿ 500ಕ್ಕೂ ಹೆಚ್ಚು ಜನರ ಬಂಧನ; 11,000 ಎಫ್‌ಐಆರ್‌ ದಾಖಲಿಸಲಾಗಿದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಅಳವಂಡಿ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...