Homeಮುಖಪುಟಆರೋಪಿ ಕುಕಿ ಸಮುದಾಯದವನು ಎಂಬ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯದ ಮಣಿಪುರದ ಬಿಜೆಪಿ ಸರ್ಕಾರ: ಸುಪ್ರೀಂ ಕೋರ್ಟ್...

ಆರೋಪಿ ಕುಕಿ ಸಮುದಾಯದವನು ಎಂಬ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯದ ಮಣಿಪುರದ ಬಿಜೆಪಿ ಸರ್ಕಾರ: ಸುಪ್ರೀಂ ಕೋರ್ಟ್ ಗರಂ

- Advertisement -
- Advertisement -

ಮಣಿಪುರ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬ ಕುಕಿ ಸಮುದಾಯಕ್ಕೆ ಸೇರಿದವನೆಂಬ ಕಾರಣಕ್ಕೆ ಆತನನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಧೋರಣೆ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಆಘಾತ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ರಜಾಕಾಲೀನ ಪೀಠ, ಮಣಿಪುರದ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

“ಕ್ಷಮಿಸಿ ವಕೀಲರೇ, ನಾವು ಮಣಿಪುರ ಸರ್ಕಾರವನ್ನು ನಂಬುವುದಿಲ್ಲ. ನಮಗೆ ನಂಬಿಕೆ ಬರುತ್ತಿಲ್ಲ. ಕುಕಿ ಸಮುದಾಯದವರೆಂಬ ಕಾರಣಕ್ಕೆ ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಿಲ್ಲವೇ? ತುಂಬಾ ದುಃಖವಾಗುತ್ತಿದೆ. ಆತನ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಈಗ ನಿರ್ದೇಶಿಸುತ್ತಿದ್ದೇವೆ. ವೈದ್ಯಕೀಯ ವರದಿಯಲ್ಲಿ ಗಂಭೀರ ವಿಚಾರವೇನಾದರೂ ಕಂಡು ಬಂದರೆ ನಾವು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ, ಇದನ್ನು ನೆನಪಿಡಿ” ಎಂದು ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ವಿಚಾರಣಾಧೀನ ಕೈದಿಯ ವಿಚಾರಣೆ ಇನ್ನಷ್ಟೇ ಆರಂಭವಾಗಬೇಕಿದ್ದು. ಆತ ಪೈಲ್ಸ್‌, ಕ್ಷಯರೋಗ ಹಾಗೂ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿರುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದ. ಆರೋಪಿಯ ಸೊಂಟದ ಭಾಗದಲ್ಲಿ ಮೂಳೆ ಸವೆತ ಉಂಟಾಗಿರುವುದನ್ನು ಕಳೆದ ನವೆಂಬರ್‌ನಲ್ಲಿ ಗಮನಿಸಿದ್ದ ಜೈಲು ವೈದ್ಯಾಧಿಕಾರಿಗಳು ಎಕ್ಸ್‌ ರೇಗೆ ಶಿಫಾರಸು ಮಾಡಿದ್ದರು. ಆದರೆ ಈ ಸೌಲಭ್ಯ ಜೈಲಿನಲ್ಲಿರಲಿಲ್ಲ.

ಆರೋಪಿಗೆ ಹೈಕೋರ್ಟ್‌ ಜಾಮೀನು ನೀಡುವ ವೇಳೆ ಆತ ಕುಕಿ ಸಮುದಾಯಕ್ಕೆ ಸೇರಿದವನಾದ್ದರಿಂದ ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸುವುದು ಕಾನೂನು ಮತ್ತು ಸುವ್ಯವಸ್ಥೆಗೆ ಅಪಾಯಕಾರಿಯಾಗುತ್ತದೆ ಎಂಬ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿಲ್ಲ ಎಂದು ಸರ್ಕಾರ ತಿಳಿಸಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌, ಆತನ ವೈದ್ಯಕೀಯ ತಪಾಸಣೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಅಲ್ಲದೆ ಅದಕ್ಕೆ ತಗಲುವ ಎಲ್ಲಾ ವೆಚ್ಚವನ್ನೂ ಸರ್ಕಾರವೇ ಭರಿಸಬೇಕು. ವೈದ್ಯಕೀಯ ವರದಿಯನ್ನು ಜುಲೈ 15 ಅಥವಾ ಅದಕ್ಕಿಂತ ಮೊದಲು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.

ಗುವಾಹಟಿ ಮೆಡಿಕಲ್ ಕಾಲೇಜಿನಲ್ಲಿ ಟಿಬಿ, ಪೈಲ್ಸ್ ಸೇರಿದಂತೆ ಎಲ್ಲಾ ರೀತಿಯ ತಪಾಸಣೆಗಳನ್ನು ಆರೋಪಿಗೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ : ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ: ಹೇಮಂತ್ ಸೊರೇನ್ ಮತ್ತೆ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...