Homeಫ್ಯಾಕ್ಟ್‌ಚೆಕ್FACT CHECK : ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ...

FACT CHECK : ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪ ಹೊತ್ತಿರುವ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಜೂನ್ 4ರಂದು ಹೊರಬಿದ್ದ ಫಲಿತಾಂಶದಲ್ಲಿ ಜಯಗಳಿಸಿದ್ದರು. ಈ ಬೆನ್ನಲ್ಲೇ ಜೂನ್ 6ರಂದು ಕಂಗನಾ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

“ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ್ದ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ವರ್ಗಾಯಿಸಲಾಗಿದೆ. ಅವರ ಅಮಾನತನ್ನು ಹಿಂತೆಗೆದುಕೊಳ್ಳಲಾಗಿದೆ, ಪುನಃ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ” ಎಂದು ಹಲವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಫಸ್ಟ್‌ಪೋಸ್ಟ್‌ಇಂಡಿಯನ್ ಎಕ್ಸ್‌ಪ್ರೆಸ್‌ ಮತ್ತು ವಾರ್ತಾಭಾರತಿ ಸೇರಿದಂತೆ ಕೆಲ ಮಾಧ್ಯಮಗಳು ಇದೇ ಸುದ್ದಿಯನ್ನು ವರದಿ ಮಾಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿ ಸುಳ್ಳು ಎಂದು ಸಿಎಸ್ಐಎಫ್ ಸ್ಪಷ್ಟನೆ ನೀಡಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ತಿಳಿಸಿದೆ.

“ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಇನ್ನೂ ಅಮಾನತಿನಲ್ಲಿರಿಸಲಾಗಿದೆ. ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ” ಎಂದು ಸಿಎಸ್ಐಎಫ್ ಹೇಳಿರುವುದಾಗಿ ಎಎನ್ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಮತ್ತು ಬೆಂಗಳೂರಿನಲ್ಲಿ ನಿಯೋಜಿಸಲಾಗಿದೆ ಎಂದು ಪತ್ರಕರ್ತ ಗಗನ್‌ದೀಪ್ ಸಿಂಗ್ ಸುಳ್ಳು ಸುದ್ದಿ ಹಂಚಿಕೊಂಡಿದ್ದಾರೆ” ಎಂದು ಓನ್ಲಿ ಫ್ಯಾಕ್ಟ್‌ ಇಂಡಿಯಾ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ.

ಟೈಮ್ಸ್ ಆಫ್ ಇಂಡಿಯಾ, ಫ್ರೀ ಪ್ರೆಸ್ ಜರ್ನಲ್ ಸೇರಿದಂತೆ ಪ್ರಮುಖ ಮಾಧ್ಯಮಗಳು ಕೂಡ “ಕಾನ್‌ಸ್ಟೇಬಲ್ ಕುಲ್ವಿಂದರ್ ಕೌರ್ ಇನ್ನೂ ಅಮಾನತಿನಲ್ಲಿದ್ದಾರೆ. ಅವರನ್ನು ಬೆಂಗಳೂರಿಗೆ ವರ್ಗಾಯಿಸಿಲ್ಲ” ಎಂದು ವರದಿ ಮಾಡಿವೆ.

ಕೆಲ ಮಾಧ್ಯಮಗಳು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ಆಧಾರವಾಗಿಟ್ಟುಕೊಂಡು ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರು ವಿಮಾನ ನಿಲ್ಧಾಣಕ್ಕೆ ವರ್ಗಾಯಿಸಲಾಗಿದೆ ಎಂದು ತಪ್ಪಾದ ಸುದ್ದಿ ಪ್ರಕಟಿಸಿರುವುದು ನಮ್ಮ ಪರಿಶೀಲನೆಯಲ್ಲಿ ಕಂಡು ಬಂದಿದೆ.

ಇದನ್ನೂ ಓದಿ : FACT CHECK : ಬುರ್ಖಾಧಾರಿ ಮಹಿಳೆಯರಿಗೆ ಸರಪಳಿ ಬಿಗಿದು ಕರೆದೊಯ್ಯುತ್ತಿರುವ ಫೋಟೋ ಎಡಿಟೆಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...