Homeಫ್ಯಾಕ್ಟ್‌ಚೆಕ್FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ...

FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿ, ಮತ್ಯಾರು ಅಲ್ಲ” ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಬಲಪಂಥೀಯ ಯೂಟ್ಯೂಬ್ ಚಾನೆಲ್‌ ಟಿವಿ ವಿಕ್ರಮ ವರದಿ ಮಾಡಿದೆ.

ಜುಲೈ 3, 2024ರಂದು “ಸೋನಿಯಾ ಗಾಂಧಿ ಕಾಲಿಗೆ ಅಡ್ಡಡ್ಡ ಬಿದ್ರು ಖರ್ಗೆ! ಛೀ ಎಂಥಾ ಗುಲಾಮಗಿರಿ ಇದು!” ಎಂಬ ಶೀರ್ಷಿಕೆಯಲ್ಲಿ ಯೂಟ್ಯೂಬ್‌ನಲ್ಲಿ ಟಿವಿ ವಿಕ್ರಮ ವಿಡಿಯೋ ಅಪ್ಲೋಡ್ ಮಾಡಿದೆ. ವಿಡಿಯೋದಲ್ಲಿ ‘ಮಿರ್ಚಿ ಮಂಡಕ್ಕಿ’ ಎಂಬ ವಿಶೇಷ ಕಾರ್ಯಕ್ರಮದ ನಿರೂಪಕಿ ಶ್ವೇತಾ ಅವರು ಈ ಕೆಳಗಿನಂತೆ ಹೇಳಿದ್ದಾರೆ.

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿಯವರು, ಮತ್ಯಾರು ಅಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನರನ್ನು ಮರೆತಿದ್ದಾರೆ.”

“ಖರ್ಗೆಯವರೇ ಕಲಬುರಗಿ ಜನರು ನಿಮಗೆ ಮತ ಹಾಕದಿದ್ದಿದ್ರೆ, ಆಶಿರ್ವಾದ ಮಾಡಿಲ್ಲದ್ದಿದ್ರೆ, ಸತತವಾಗಿ ಗೆಲ್ಲಿಸದಿದ್ದಿದ್ರೆ ಸೋನಿಯಾ ಗಾಂಧಿ ಬಿಡಿ, ಅವರ ಮನೆ ನಾಯಿ ಕೂಡ ನಿಮ್ಮನ್ನು ಮೂಸುತ್ತಿರಲಿಲ್ಲ. ಊರ ಮಂದಿಗೆ ಅವಮಾನ ಮಾಡಿ ಬಿಟ್ರಲ್ಲ ನೀವು. ಅದಕ್ಕೆ ಅನ್ಸುತ್ತೆ ನೀವು ಹೋದ ಸಲ ಎಲ್ಲಿ ಸೋತಿದ್ರೋ, ಅಲ್ಲಿ ಈ ಬಾರಿ ಎಲೆಕ್ಷನ್ ಸಹವಾಸಕ್ಕೆ ಬಂದಿಲ್ಲ. ಆದ್ರೂ ಕುಟುಂಬ ರಾಜಕಾರಣ ಬಿಡ್ಲಿಲ್ಲ ನೋಡ್ರಿ. ಅಳಿಯನಿಗೆ ಟಿಕೆಟ್ ಕೊಟ್ರಲ್ಲ. ಈ ಏರಿದ ಏಣಿ ಒದಿಯುವಂತಹ ಕೆಲಸ ಮಾಡಬಾರದು. ಮುಂದೆ ಒಂದು ದಿನ ಅದೇ ಅಪಾಯ ತರುತ್ತದೆ.”

ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ಸಭೆಯಲ್ಲಿ ಮಾತನಾಡುವಾಗ “ನನ್ನನ್ನು ಈ ಸ್ಥಾನಕ್ಕೆ ತಂದವರು ಇಲ್ಲಿ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು” ಎಂದು ಪಕ್ಕದಲ್ಲಿ ಕುಳಿತಿದ್ದ ಸೋನಿಯಾ ಗಾಂಧಿಯವರಿಗೆ ಕೈ ತೋರಿಸುವ ವಿಡಿಯೋ ತುಣುಕು ಕೂಡ ಟಿವಿ ವಿಕ್ರಮ ಪ್ರಸಾರ ಮಾಡಿದೆ.

ಫ್ಯಾಕ್ಟ್‌ಚೆಕ್ : ಟಿವಿ ವಿಕ್ರಮ ಹೇಳಿದಂತೆ ಮಲ್ಲಿಕಾರ್ಜುನ ಖರ್ಗೆಯವರು ತನ್ನನ್ನು ಉನ್ನತ ಸ್ಥಾನಕ್ಕೇರಿಸಿದ ಕಲಬುರಗಿಯ ಜನತೆಯನ್ನು ಮರೆತ್ರಾ? ತನ್ನ ಸಾಧನೆಯ ಎಲ್ಲಾ ಕ್ರೆಡಿಟ್ ಸೋನಿಯಾ ಗಾಂಧಿಯವರಿಗೆ ಮಾತ್ರ ಕೊಟ್ರಾ? ಎಂದು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುವಂತಹ ಸುದ್ದಿ ಪ್ರಸಾರ ಮಾಡಿರುವುದು ಗೊತ್ತಾಗಿದೆ.

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಗಮನಿಸಲು ನಾವು ಮೊದಲು ಅವರ ಭಾಷಣದ ಪೂರ್ಣ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಜುಲೈ 2ರಂದು ಇಂಡಿಯಾ ಟುಡೇ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ “Sonia Gandhi Made Me: Mallikarjun Kharge’s Fiery Reply To Jagdeep Dhankhar In Rajya Sabha” ಎಂಬ ಶೀರ್ಷಕೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಈ ವಿಡಿಯೋದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸ್ಪೀಕರ್‌ ಜಗದೀಪ್‌ ಧನ್ಕರ್‌ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ನಡೆದ ವಾಗ್ವಾದವನ್ನು ನೋಡಬಹುದಾಗಿದೆ.

“ನನ್ನನ್ನು ಈ ಸ್ಥಾನಕ್ಕೆ ಬರುವಂತೆ ಮಾಡಿದವರು ಇಲ್ಲೇ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು. ಇದಕ್ಕೆ ಜೈರಾಮ್‌ ರಮೇಶ್‌ ಅಥವಾ ನೀವು (ಸ್ಪೀಕರ್‌) ಕಾರಣವಲ್ಲ, ನನ್ನನ್ನು ಜನ ಈ ಸ್ಥಾನಕ್ಕೆ ತಂದಿದ್ದಾರೆ” ಎಂಬ ಅರ್ಥದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಹೇಳಿಕೆ ನೀಡಿದ್ದಾರೆ. ಆದರೆ, ಇದರಲ್ಲಿ “ಜನರು ನನ್ನನ್ನು ಇಲ್ಲಿಗೆ ತಂದಿದ್ದಾರೆ” ಎಂಬ ಕ್ಲಿಪ್‌ ಅನ್ನು ಕಟ್‌ ಮಾಡಿ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಹಂಚಿಕೊಂಡಿದೆ.

ಆದರೆ, ಇದರ ಅಸಲಿ ವಿಡಿಯೋವನ್ನು ಕಾಂಗ್ರೆಸ್‌ ಬೆಂಬಲಿಗರು ಸೇರಿದಂತೆ ಹಲವರು ತಮ್ಮ ಎಕ್ಸ್‌ ಖಾತೆಯಲ್ಲಿ ಎಡಿಟೆಡ್‌ ವಿಡಿಯೋ ಮತ್ತು ನಿಜವಾದ ವಿಡಿಯೋ ಯಾವುದು ಎಂದು ಹಂಚಿಕೊಂಡಿದ್ದಾರೆ.

ಅರ್ಧಂಬರ್ಧ ವಿಡಿಯೋವನ್ನು ಟಿವಿ ವಿಕ್ರಮ ಮಾತ್ರವಲ್ಲದೆ ಸದಾ ಸುಳ್ಳು ಸುದ್ದಿಗಳನ್ನು ಹರಡುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಹಂಚಿಕೊಂಡು ” ಇದು ಕಾಂಗ್ರೆಸ್‌ನ ಮೆಚ್ಚುಗೆಯ ಬ್ರ್ಯಾಂಡ್‌ನಂತೆ ತೋರುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆಯವರು “ನನ್ನನ್ನು ಈ ಸ್ಥಾನಕ್ಕೆ ತಂದಿರುವುದು ಸೋನಿಯಾ ಗಾಂಧಿಯವರು ಮತ್ತು ಜನರು” ಎಂದು ಹೇಳಿದ್ದಾರೆ. ಆದರೆ, ಟಿವಿ ವಿಕ್ರಮ ‘ಸೋನಿಯಾ ಗಾಂಧಿಯವರು’ ಎಂದು ಹೇಳುವ ಅರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದೆ.

ಮಹೇಶ್ ವಿಕ್ರಮ್ ಹೆಗ್ಡೆ ನೇತೃತ್ವದ ಟಿವಿ ವಿಕ್ರಮ ಮತ್ತು ಪೋಸ್ಟ್ ಕಾರ್ಡ್‌ ಈ ಹಿಂದೆಯೂ ಹಲವು ಬಾರಿ ಸುಳ್ಳು ಮತ್ತು ದಾರಿ ತಪ್ಪಿಸುವಂತಹ ಸುದ್ದಿಗಳನ್ನು ಪ್ರಸಾರ ಮಾಡಿತ್ತು. ಈ ಕುರಿತು ನಾನುಗೌರಿ ನಡೆಸಿರುವ ಕೆಲವು ಫ್ಯಾಕ್ಟ್‌ಚೆಕ್ ಸುದ್ದಿಗಳ ಲಿಂಕ್‌ಗಳು ಕೆಳಗಿದೆ.

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...