Homeಮುಖಪುಟಸಂಸತ್‌ನಲ್ಲಿ 'ಸುಳ್ಳು, ದಾರಿ ತಪ್ಪಿಸುವ' ಹೇಳಿಕೆ: ಪ್ರಧಾನಿ ಮೋದಿ,‌ ಅನುರಾಗ್ ಠಾಕೂರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ...

ಸಂಸತ್‌ನಲ್ಲಿ ‘ಸುಳ್ಳು, ದಾರಿ ತಪ್ಪಿಸುವ’ ಹೇಳಿಕೆ: ಪ್ರಧಾನಿ ಮೋದಿ,‌ ಅನುರಾಗ್ ಠಾಕೂರ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ ಕಾಂಗ್ರೆಸ್ ಸಂಸದ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಸಂಸತ್‌ನಲ್ಲಿ ‘ಸುಳ್ಳು ಮತ್ತು ದಾರಿ ತಪ್ಪಿಸುವ’ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಈ ವಿಷಯದಲ್ಲಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ನಿರ್ದೇಶನ 115(1)ರ ನಿಬಂಧನೆಗಳನ್ನು ಅನ್ವಯಿಸುವಂತೆ ಸ್ಪೀಕರ್‌ಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿರುವ ಮಾಣಿಕ್ಕಂ ಠಾಗೋರ್ ಅವರು, ಅಗತ್ಯ ಪ್ರಕ್ರಿಯೆಯನ್ನು ಆರಂಭಿಸುವಂತೆ ಆಗ್ರಹಿಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದಲ್ಲಿ ಪ್ರಧಾನಿ ಮೋದಿಯವರು “ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ತಿಂಗಳಿಗೆ 8,500 ರೂ.ಗಳ “ಸುಳ್ಳು ಭರವಸೆ” ನೀಡಿತ್ತು ಎಂದು ಹೇಳಿದ್ದಾರೆ. ಆದರೆ, ಅದು ಗೆಲುವು ಮತ್ತು ಸರ್ಕಾರ ರಚನೆಯನ್ನು ಆಧರಿಸಿ ನೀಡಿದ್ದ ಭರವಸೆಯಾಗಿತ್ತು ಎಂದು ಠಾಗೋರ್ ಪತ್ರದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ತಾನು ಏಕಾಂಗಿಯಾಗಿ ಸ್ಪರ್ಧಿಸಿದ್ದ 16 ರಾಜ್ಯಗಳಲ್ಲಿ ಅದರ ಮತಗಳಿಕೆ ಪ್ರಮಾಣ ಕಡಿಮೆಯಾಗಿತ್ತು ಎಂಬ ಮೋದಿಯವರ ಹೇಳಿಕೆಯು ಸತ್ಯಕ್ಕೆ ದೂರವಾಗಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ,‌ ಕರ್ನಾಟಕ, ತೆಲಂಗಾಣ ಇತ್ಯಾದಿ ರಾಜ್ಯಗಳಲ್ಲಿ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಅಧಿಕಾರವಧಿಯಲ್ಲಿ ಸೇನೆಗೆ ಯಾವುದೇ ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು ಒದಗಿಸಿರಲಿಲ್ಲ ಎಂಬ ಮೋದಿಯವರ ಟೀಕೆಗಳನ್ನು ‘ತೀರಾ ತಪ್ಪುದಾರಿಗೆಳೆಯುವಂತದ್ದು’ ಎಂದಿರುವ ಠಾಗೋರ್, “ಜಾಕೆಟ್‌ಗಳ ಕೊರತೆ ಇತ್ತು ನಿಜ. ಆದರೆ, ಜಾಕೆಟ್‌ಗಳೇ ಇರಲಿಲ್ಲ ಎಂಬುವುದು ಸುಳ್ಳು. ಮುಂಬೈ ದಾಳಿಯ ಸಮಯದಲ್ಲಿ ಪೊಲೀಸರು ಕೂಡ ಬುಲೆಟ್ ಪ್ರೂಫ್ ಜಾಕೆಟ್‌ಗಳನ್ನು ಧರಿಸಿದ್ದರು ಎಂದು ಠಾಗೋರ್ ಹೇಳಿದ್ದಾರೆ.

ಸೇನೆಗೆ ಫೈಟರ್ ಜೆಟ್‌ಗಳನ್ನು ಕಾಂಗ್ರೆಸ್ ನೀಡಿರಲಿಲ್ಲ ಎಂಬ ಪ್ರಧಾನಿಯ ಹೇಳಿಕೆಯನ್ನು ಠಾಗೋರ್ ಖಂಡಿಸಿದ್ದು, “ನಮ್ಮಲ್ಲಿ ಜಾಗ್ವಾರ್, ಮಿಗ್ 29, ಎಸ್‌ಯು-30, ಮಿರಾಜ್ 2000 ಫೈಟರ್‌ ಜೆಟ್‌ಗಳು ಇತ್ತು” ಎಂದು ಪತ್ರದಲ್ಲಿ ಬರೆದಿದ್ದಾರೆ.

ಲೋಕಸಭೆಯಲ್ಲಿ ಜುಲೈ 1 ರಂದು ಸಂಸದ ಅನುರಾಗ್ ಠಾಕೂರ್ ಮಾಡಿದ್ದ ಭಾಷಣದ ದೋಷಗಳನ್ನು ಠಾಗೋರ್ ಎತ್ತಿ ತೋರಿಸಿದ್ದು, “ಕಾಂಗ್ರೆಸ್ ಅವಧಿಯಲ್ಲಿ ಸೇನೆಗೆ ಶಸ್ತ್ರಾಸ್ತ್ರ ಮತ್ತು ಯುದ್ಧ ವಿಮಾನಗಳನ್ನು ನೀಡಿರಲಿಲ್ಲ ಎಂದು ಠಾಕೂರ್ ಹೇಳಿದ್ದಾರೆ. “ನಮ್ಮಲ್ಲಿ ಜಾಗ್ವಾರ್, ಮಿಗ್ 29, ಎಸ್‌ಯು-30, ಮಿರಾಜ್ 2000 ಫೈಟರ್ ಜೆಟ್‌ಗಳು, ಪರಮಾಣು ಬಾಂಬ್‌ಗಳು, ಅಗ್ನಿ, ಪೃಥ್ವಿ, ಆಕಾಶ್, ನಾಗ್, ತ್ರಿಶೂಲ್, ಬ್ರಹ್ಮೋಸ್‌ನಂತಹ ಕ್ಷಿಪಣಿಗಳು ಇದ್ದವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್‌ ಪನ್ಸಾರೆ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಮಹಿಳೆಯರಿಗಷ್ಟೇ ಏಕೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...