Homeಕರ್ನಾಟಕಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿ ಮತ್ತು ಸಂಘ ಪರಿವಾರದವರು ತೋರಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಅವರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದ ಬಗ್ಗೆ ಎಷ್ಟು ಅಸಹನೆ ಇದೆ ಎಂಬುವುದಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ ಎಂದಿದ್ದಾರೆ.

ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ಬೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು ಎಂದು ಹೇಳಿದ್ದಾರೆ.

ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್‌ ಬ್ರದರ್ಸ್‌ ಎಂಡ್‌ ಸಿಸ್ಟರ್ಸ್‌ ( ನನ್ನ ಪ್ರೀತಿಯ ಸಹೋದರ – ಸಹೋದರಿಯರೇ ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು. ಆದರೆ ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದಿದ್ದಾರೆ.

ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್‌ ದಾಸ್‌ ಅವರು ಮಾಡಿದ್ದಾರೆ ಎಂದ ಟೀಕಿಸಿದ್ದಾರೆ.

ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ತನಿಖೆಗೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...