Homeಮುಖಪುಟ'ಧಾರ್ಮಿಕ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಇರಲಿಲ್ಲ..'; ರಾಹುಲ್ ಗಾಂಧಿ

‘ಧಾರ್ಮಿಕ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಇರಲಿಲ್ಲ..’; ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಹತ್ರಾಸ್‌ಗೆ ಭೇಟಿ ನೀಡಿ, ಕಾಲ್ತುಳಿತದಿಂದ ಮೃತಪಟ್ಟ ಹಾಗೂ ಗಾಯಗೊಂಡ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು. “ಧಾರ್ಮಿಕ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿಲ್ಲ ಎಂದು ಮೃತರ ಸಂಬಂಧಿಕರು ಹೇಳಿದ್ದು, ಕಾಲ್ತುಳಿತಕ್ಕೆ ಕಾರಣವಾಯಿತು” ಎಂದು ಅವರು ಹೇಳಿದರು.

ಮಂಗಳವಾರ ಹತ್ರಾಸ್ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ್ದು, ಹೆಚ್ಚಾಗಿ ಮಹಿಳೆಯರು ಬಳಿಯಾಗಿದ್ದಾರೆ.

“ದುರಂತವನ್ನು ರಾಜಕೀಯಗೊಳಿಸಲು ಬಯಸುವುದಿಲ್ಲ; ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು” ಎಂದು ರಾಹುಲ್ ಗಾಂಧಿ ಒತ್ತಾಯಿಸಿದರು.

“ಇದೊಂದು ದುಃಖದ ಘಟನೆ; ಹಲವಾರು ಜನರು ಸಾವನ್ನಪ್ಪಿದ್ದಾರೆ. ನಾನು ಇದನ್ನು ರಾಜಕೀಯ ದೃಷ್ಟಿಕೋನದಿಂದ ಹೇಳಲು ಬಯಸುವುದಿಲ್ಲ. ಆದರೆ, ಆಡಳಿತದ ಕಡೆಯಿಂದ ಲೋಪಗಳಿವೆ, ಮುಖ್ಯ ವಿಷಯವೆಂದರೆ ಅವರು ಬಡವರಾಗಿರುವುದರಿಂದ ಗರಿಷ್ಠ ಪರಿಹಾರವನ್ನು ನೀಡಬೇಕು. ಪರಿಹಾರದಲ್ಲಿ ವಿಳಂಬವಾದರೆ, ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ನಾನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಕೇಳುತ್ತೇನೆ. ನಾನು ಸತ್ತವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದೇನೆ, ಅವರು ಆಘಾತಕ್ಕೊಳಗಾಗಿದ್ದಾರೆ ಮತ್ತು ನಾನು ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ” ಎಂದು ಅವರು ಭೇಟಿಯ ನಂತರ ಹೇಳಿದರು.

ರಾಹುಲ್ ಗಾಂಧಿಯವರ ಜೊತೆಗಿದ್ದ ಕಾಂಗ್ರೆಸ್ ನಾಯಕ ಡ್ಯಾನಿಶ್ ಅಲಿ, ಯುಪಿ ಸರ್ಕಾರವು ದುರಂತವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಹೇಳಿದರು.

“ಇದೊಂದು ದುರದೃಷ್ಟಕರ ಘಟನೆ. ನಾವು ಬೆಳಗ್ಗೆ 5 ಗಂಟೆಗೆ ರಾಹುಲ್ ಗಾಂಧಿ ಅವರೊಂದಿಗೆ ಹೊರಟೆವು. ಸಂತ್ರಸ್ತರ ಕಥೆಗಳು ಹೃದಯ ವಿದ್ರಾವಕವಾಗಿವೆ… ಆಡಳಿತದ ಯಾವುದೇ ಜವಾಬ್ದಾರಿಯನ್ನು ನಿಗದಿಪಡಿಸಲಾಗಿಲ್ಲ ಅಥವಾ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ” ಎಂದು ಅವರು ಹೇಳಿದರು.

ಭೋಲೆ ಬಾಬಾ ಅವರಿಗೆ ಅರ್ಪಿಸಿದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಘಟನೆಯ ಆರು ಸಂಘಟಕರನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ. ಆದರೆ, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಅಚ್ಚರಿ ಎಂದರೆ, ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರಿಲ್ಲ.

ಶುಕ್ರವಾರ ಬೆಳಗ್ಗೆ ರಾಹುಲ್ ಗಾಂಧಿ ಹತ್ರಾಸ್‌ಗೆ ತೆರಳಿದರು. ದಾರಿಯಲ್ಲಿ ಎರಡು ಅಲಿಗಢ್ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕಾಲ್ತುಳಿತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಭೇಟಿ ಮಾಡಿದರು.

ಇದನ್ನೂ ಓದಿ; ಅಲಿಘರ್‌ನ ಪಿಲಾಖ್ನಾ ಗ್ರಾಮದಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...