Homeಫ್ಯಾಕ್ಟ್‌ಚೆಕ್FACT CHECK : ಮಾಜಿ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು...

FACT CHECK : ಮಾಜಿ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝರುದ್ದೀನ್ ತನ್ನ ಪತ್ನಿ ಮಗನೊಂದಿಗೆ ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬ ಸಂದೇಶವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘दिल्ली के दिल में ( @deepakprotocol) ಎಂಬ ಎಕ್ಸ್ ಬಳಕೆದಾರ ಜುಲೈ 4, 2024ರಂದು ಫೋಟೋವೊಂದನ್ನು ಹಂಚಿಕೊಂಡಿದ್ದು, “ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝರುದ್ದೀನ್ ಕಾಶಿಯಲ್ಲಿ ಪತ್ನಿ ಮತ್ತು ಮಗನೊಂದಿಗೆ ಮುಸ್ಲಿಂ ಧರ್ಮವನ್ನು ತೊರೆದು ಸನಾತನಿಯಾದರು” ಎಂದು ಬರೆದುಕೊಂಡಿದ್ದಾರೆ.

Sunil sahu(@BJP4SunilSahu) ಎಂಬ ಮತ್ತೊಬ್ಬ ಎಕ್ಸ್ ಬಳಕೆದಾರ ಜುಲೈ 2, 2024ರಂದು ಮಾಜಿ ಕ್ರಿಕೆಟಿಗ ಅಝುರುದ್ದೀನ್ ಅವರ ಫೋಟೋ ಹಂಚಿಕೊಂಡು ” ಶ್ರೇಷ್ಠ ಕ್ರಿಕೆಟಿಗ ಅಝರುದ್ದೀನ್ ಅವರನ್ನು ಈಗ ಡಬ್ಲ್ಯೂ ಸಿಂಗ್ ಎಂದು ಕರೆಯಲಾಗುತ್ತದೆ. ಅವರ ಮಗನನ್ನು ರಾಜ್ ಸಿಂಗ್ ಮತ್ತು ಪತ್ನಿಯನ್ನು ಗುಡಿಯಾ ಸಿಂಗ್ ಎಂದು ಕರೆಯಲಾಗುತ್ತದೆ. ಮಾಜಿ ನಾಯಕ ಹಾಗೂ ಕ್ರಿಕೆಟಿಗ ಅಝರುದ್ದೀನ್ ಇಸ್ಲಾಂ ಧರ್ಮವನ್ನು ತೊರೆದು ಸನಾತನ ಧರ್ಮವನ್ನು ಸ್ವೀಕರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ವಾಟ್ಸಾಪ್‌ನಲ್ಲಿಯೂ ಅಝರುದ್ದೀನ್ ಫೋಟೋದೊಂದಿಗೆ ಇದೇ ರೀತಿಯ ಸಂದೇಶ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಚಂದೌಲಿ ನಿವಾಸಿ ಮೊಹಮ್ಮದ್ ಅಝರುದ್ದೀನ್ ಎಂಬವರು ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದು, ಅದನ್ನು ತಪ್ಪಾಗಿ ಕ್ರಿಕೆಟಿಗ ಅಝರುದ್ದೀನ್ ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂದು ಹಂಚಿಕೊಂಡಿರುವುದು ಗೊತ್ತಾಗಿದೆ.

ಈ ಕುರಿತು ಜುಲೈ 2, 2024ರಂದು ಅಮರ್ ಉಜಾಲಾ ಸುದ್ದಿ ಸಂಸ್ಥೆ ವಿಡಿಯೋ ಸಹಿತ ಸುದ್ದಿ ಪ್ರಕಟಿಸಿದೆ. ಸುದ್ದಿಯಲ್ಲಿ “ಚಂದೌಲಿಯ ಸದರ್ ಕೊತ್ವಾಲಿ ಪ್ರದೇಶದ ಬಿಚಿಯಾ ಗ್ರಾಮದ ನಿವಾಸಿ ಮೊಹಮ್ಮದ್ ಅಝರುದ್ದೀನ್ ಹಿಂದೂ ಧರ್ಮ ಸ್ವೀಕರಿಸಿದ್ದು, ಅವರ ಹೆಸರನ್ನು ಡಬ್ಲ್ಯೂ ಸಿಂಗ್ ಎಂದು ಬದಲಾಯಿಸಿದ್ದಾರೆ. ಅಝರುದ್ದೀನ್ ಜೊತೆ ಅವರ ಪತ್ನಿ ಮತ್ತು ಪುತ್ರ ಕೂಡ ಹಿಂದೂ ಧರ್ಮ ಸ್ವೀಕರಿಸಿದ್ದಾರೆ. ಅವರು ರಾಮಚರಿತ ಮಾನಸ ಮತ್ತು ಗೀತೆ ಪೂಜೆ ಪುನಸ್ಕಾರವನ್ನು ಕೂಡ ಪ್ರಾರಂಭಿಸಿದ್ದಾರೆ ಎಂದು ತಿಳಿಸಲಾಗಿದೆ.

ಅಮರ್ ಉಜಾಲದ ಸುದ್ದಿಯಲ್ಲಿರುವ ವಿಡಿಯೋ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಫೋಟೋ ಒಂದೇ ಎಂಬುವುದನ್ನು ನಾವಿಲ್ಲಿ ಗಮನಿಸಬಹುದು.

ಒಟ್ಟಿನಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಝುರುದ್ದೀನ್ ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂಬುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಆಗಿರುವುದು ಉತ್ತರ ಪ್ರದೇಶದ ಚಂದೌಲಿಯ ಜಿಲ್ಲೆಯ ನಿವಾಸಿ ಅಝರುದ್ದೀನ್ ಎಂಬವರದ್ದಾಗಿದೆ. ಮಾಜಿ ಕ್ರಿಕೆಟಿಗ ಅಝರುದ್ದೀನ್ ಹೈದರಾಬಾದ್‌ನಲ್ಲಿ ನೆಲೆಸಿದ್ದು, ಕಾಂಗ್ರೆಸ್ ನಾಯಕರೂ ಆಗಿದ್ದಾರೆ.

ಇದನ್ನೂ ಓದಿ : FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...