Homeಕರ್ನಾಟಕಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ನ್ಯಾಯಾಲಯದಿಂದ ಸಮನ್ಸ್‌

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ನ್ಯಾಯಾಲಯದಿಂದ ಸಮನ್ಸ್‌

- Advertisement -
- Advertisement -

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಸಮನ್ಸ್‌ ನೀಡಿದ್ದು, ಜುಲೈ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ ವಿರುದ್ಧದ ಜಾರ್ಜ್‌ಶೀಟ್ ಗಮನಿಸಿರುವ ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್‌.ಎಂ ರಮೇಶ್‌ ಸಮನ್ಸ್‌ ಜಾರಿಗೊಳಿಸಿದ್ದಾರೆ.

ಪೋಕ್ಸೋ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) 750 ಪುಟಗಳ ಚಾರ್ಜ್‌ಶೀಟ್‌ ಅನ್ನು ಕಳೆದ ವಾರ ನ್ಯಾಯಾಲಯಕ್ಕೆ ಸಲ್ಲಿಸಿದೆ. ಅದನ್ನು ಅವಲೋಕಿಸಿರುವ ನ್ಯಾಯಾಲಯ
ಯಡಿಯೂರಪ್ಪ, ವೈ.ಎಂ ಅರುಣ್, ಎಂ ರುದ್ರೇಶ್ ಹಾಗೂ ವೈ. ಮರಿಸ್ವಾಮಿ ಎಂಬವರಿಗೆ ಸಮನ್ಸ್ ನೀಡಿದೆ.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರ ಅಡಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರ ಮೂವರು ಸಹಚರರ ವಿರುದ್ಧ ಐಪಿಸಿ ಸೆಕ್ಷನ್‌ 204 ಮತ್ತು 214ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ, ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ.

ಪ್ರಕರಣದ ಹಿನ್ನೆಲೆ : ಫೆಬ್ರವರಿ 2, 2024ರಂದು ಬೆಂಗಳೂರಿನ ಸಂಜಯನಗರದ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14, 2024 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಯಡಿಯೂರಪ್ಪ ವಿರುದ್ಧದ ದೂರಿನ ಸಂಬಂಧ ಅಪ್ರಾಪ್ತ ಬಾಲಕಿಯ ತಾಯಿ ಮೇ 27, 2024 ರಂದು ವಕೀಲ ಬಾಲನ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಅವರು ಮೇ 26, 2024ರಂದು ಬೆಂಗಳೂರಿನ ನ್ಯಾನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಾವಿನ ಸುತ್ತವೂ ಹಲವು ಅನುಮಾನಗಳು ವ್ಯಕ್ತವಾಗಿದ್ದು, ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮೇ 27,2024ರಂದು ದೂರು ದಾಖಲಿಸಿದೆ.

ಇದನ್ನೂ ಓದಿ : ಬಿಜೆಪಿಗರ ಆಂತರ್ಯದೊಳಗೆ ಸ್ವಾಮಿ ವಿವೇಕಾನಂದರ ಬಗ್ಗೆ ಬಹಳ ಅಸಹನೆಯಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...