Homeಮುಖಪುಟಭಾರತೀಯ ಪತ್ರಕರ್ತರ ಯೂಟ್ಯೂಬ್ ವಿಡಿಯೋಗಳಿಗೆ ಕಾಪಿರೈಟ್ ನೋಟಿಸ್ ಕಳುಹಿಸಿದ ದ. ಆಫ್ರಿಕಾದ ಕಂಪನಿ

ಭಾರತೀಯ ಪತ್ರಕರ್ತರ ಯೂಟ್ಯೂಬ್ ವಿಡಿಯೋಗಳಿಗೆ ಕಾಪಿರೈಟ್ ನೋಟಿಸ್ ಕಳುಹಿಸಿದ ದ. ಆಫ್ರಿಕಾದ ಕಂಪನಿ

- Advertisement -
- Advertisement -

ಹಲವು ಸ್ವತಂತ್ರ ಪತ್ರಕರ್ತರು ತಮ್ಮ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಸಾರ್ವತ್ರಿಕ ಚುನಾವಣಾ ಫಲಿತಾಂಶದ ಕುರಿತು ವಿಡಿಯೋ ಅಪ್ಲೋಡ್ ಮಾಡಿದ ಬಳಿಕ, ಅವರ ಹಲವಾರು ಹಳೆಯ ವಿಡಿಯೋಗಳು ಕಾಪಿರೈಟ್ ನೋಟಿಸ್ ಪಡೆದಿದ್ದು, ಆ ವಿಡಿಯೋಗಳು ಹಣ ಗಳಿಕೆಗೆ ಅನರ್ಹವಾಗಿವೆ ಎಂದು ತಿಳಿಸಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸ್ವತಂತ್ರ ಪತ್ರಕರ್ತರಾದ ರವೀಶ್ ಕುಮಾರ್, ಅಜಿತ್ ಅಂಜುಮ್, ಅಭಿಸರ್ ಶರ್ಮಾ ಮತ್ತು ಸಾಕ್ಷಿ ಜೋಷಿ ಹಾಗೆಯೇ ಬೋಲ್ಟಾ ಹಿಂದೂಸ್ತಾನ್, ಪ್ರೋಬ್, ದಸ್ತಕ್ ಲೈವ್ ನ್ಯೂಸ್ ಮತ್ತು ಮಿಸ್ಟರ್ ರಿಯಾಕ್ಷನ್ ವಾಲಾ ಅವರಂತಹ ಕಂಟೆಂಟ್ ರಚನೆಕಾರರು ಕಾಪಿರೈಟ್ ನೋಟಿಸ್ ಸ್ವೀಕರಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಸಂಗೀತ ಸಂಗ್ರಾಹಕ, ವಿತರಕ ಮತ್ತು ನಿರ್ಮಾಣ ಸಂಸ್ಥೆಯಾದ ಝಿಕಿ ಮೀಡಿಯಾ ಎಂಟರ್‌ಟೈನ್‌ಮೆಂಟ್ ಎಂಬ ಒಂದೇ ಕಂಪನಿಯಿಂದ ಯೂಟ್ಯೂಬ್ ಮೂಲಕ ಎಲ್ಲರಿಗೂ ನೋಟಿಸ್ ಕಳುಹಿಸಲಾಗಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಕಂಪನಿ ಭಾರತದಲ್ಲಿ ವಾರ್ನರ್ ಮ್ಯೂಸಿಕ್ ಜೊತೆ ಪಾಲುದಾರಿಕೆ ಮಾಡಿಕೊಂಡಿದೆ. ನೋಯ್ಡಾದಲ್ಲಿ ವಾರ್ನರ್ ಮ್ಯೂಸಿಕ್‌ನ ಕಚೇರಿಯಿದೆ. ಅರುಣ್ ನಗರ್, ಅಭಿನಂದನ್ ಭಾರದ್ವಾಜ್ ಮತ್ತು ನಿಶಾ ನಗರ್ ಎಂಬವರು ಅದರ ನಿರ್ದೇಶಕರಾಗಿದ್ದಾರೆ. ದಲೇರ್ ಮೆಹೆಂದಿ, ಜಾಸ್ಮಿನ್ ಸ್ಯಾಂಡ್ಲಾಸ್ ಮತ್ತು ಜೆ ಸ್ಟಾರ್‌ನಂತಹ ಕಲಾವಿದರು ಕಂಪನಿಯ ಭಾಗವಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಪ್ರಕಟಿಸಿದ ಆಡಿಯೋ ಮತ್ತು ವಿಡಿಯೋಗಳಿಗೆ ಸಂಬಂಧಿಸಿ ಝಿಕಿ ಮೀಡಿಯಾ ಕಾಪಿರೈಟ್ ನೋಟಿಸ್ ನೀಡಿದೆ. ಆದರೆ, ಪತ್ರಕರ್ತರ ವಿಡಿಯೋಗಳಲ್ಲಿ ಹೆಚ್ಚಿನವು ಪತ್ರಿಕಾಗೋಷ್ಠಿಗಳಂತಹ ಸಾರ್ವಜನಿಕ ಡೊಮೇನ್‌ನಿಂದ ಪಡೆದ ಕ್ಲಿಪ್‌ಗಳಾಗಿವೆ ಎಂದು ದಿ ನ್ಯೂಸ್ ಮಿನಿಟ್ ತಿಳಿಸಿದೆ.

ನಾವು ಝಿಕಿ ಮೀಡಿಯಾದ ಯಾವುದೇ ಮ್ಯೂಸಿಕ್, ಆಡಿಯೋ, ವಿಡಿಯೋಗಳನ್ನು ಬಳಸಿಕೊಂಡಿಲ್ಲ. ಆದರೂ, ಕಾಪಿರೈಟ್ ನೋಟಿಸ್ ಸ್ವೀಕರಿಸಿರುವುದು ಆಫಾತ ತಂದಿದೆ ಎಂದು ಪತ್ರಕರ್ತರು ಹೇಳಿಕೊಂಡಿದ್ದಾರೆ.

“ನಿಮ್ಮ ವಿಡಿಯೋಗಳಲ್ಲಿ ಕಾಪಿರೈಟ್ ಹೊಂದಿರುವ ಅಂಶಗಳಿವೆ. ಅವುಗಳ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ, ಇನ್ನು ಮುಂದೆ ತಮ್ಮ ಚಾನೆಲ್ ಹಣ ಗಳಿಸಲು ಸಾಧ್ಯವಿಲ್ಲ ಎಂದು ಯೂಟ್ಯೂಬ್‌ನಿಂದ ಈ-ಮೇಲ್ ಬಂದಿದೆ. ಕಾಪಿರೈಟ್ ಆರೋಪ ಮಾಡಿರುವುದು ಝಿಕಿ ಮೀಡಿಯಾ ಎಂಬುವುದಾಗಿ ಹೇಳಲಾಗಿದೆ” ಎಂದು ಪತ್ರಕರ್ತರು ತಿಳಿಸಿದ್ದಾರೆ. ಕೆಲ ಪತ್ರಕರ್ತರು ಈ ಸಮಸ್ಯೆಯನ್ನು ಪರಿಹರಿಸಿಕೊಂಡಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ಹೇಳಿದೆ.

ಇದನ್ನೂ ಓದಿ : ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಇಂಜಿನಿಯರ್ ರಶೀದ್, ಅಮೃತ್ ಪಾಲ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...