Homeಮುಖಪುಟಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

- Advertisement -
- Advertisement -

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರು ಆದೇಶವನ್ನು ಓದದೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನನ್ನು ರದ್ದುಗೊಳಿಸಿದ್ದ ರೀತಿಯ ಕುರಿತು ದೆಹಲಿ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳ 150 ವಕೀಲರ ನಿಯೋಗವು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರ ಬರೆದಿದೆ.

ದಿ ಹಿಂದೂ ವರದಿಯ ಪ್ರಕಾರ, ಜಾಮೀನು ಆದೇಶಕ್ಕೆ ತಡೆ ನೀಡಿರುವ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರ ಸಹೋದರ ಜಾರಿ ನಿರ್ದೇಶನಾಲಯದ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಕೀಲರು ಪತ್ರದಲ್ಲಿ ಹೇಳಿದ್ದಾರೆ.

ಇದು ಆಪಾದಿತ ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಖಲಿಸಿರುವ ಪ್ರಕರಣವಾಗಿದ್ದು, ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ಆರ್ಥಿಕ ಅಪರಾಧಗಳ ಸಂಸ್ಥೆಯಾದ ಇಡಿ ಕೇಜ್ರಿವಾಲ್ ಅವರನ್ನು ಈ ವರ್ಷದ ಮಾರ್ಚ್‌ನಲ್ಲಿ ಬಂಧಿಸಿತ್ತು. ಕಳೆದ ತಿಂಗಳ ಕೊನೆಯಲ್ಲಿ, ಕೇಜ್ರಿವಾಲ್‌ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜಾಮೀನು ನೀಡಿತ್ತು. ಈ ಬೆನ್ನಲ್ಲೇ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕೇಜ್ರಿವಾಲ್ ಅವರನ್ನು ಬಂಧಿಸಿದೆ.

ಜೂ.20ರಂದು ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದ್ದ ವಿಚಾರಣಾ ನ್ಯಾಯಾಲಯವು, ಇಡಿ ಕೇಜ್ರಿವಾಲ್ ವಿರುದ್ಧ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಹೇಳಿತ್ತು. ಇಡಿ ಮುಖ್ಯಮಂತ್ರಿಗಳ ಬಂಧನಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ ಎಂದು ನ್ಯಾ. ನ್ಯಾಯ ಬಿಂದು ಹೇಳಿದ್ದರು.

ವಕೀಲರ ಪತ್ರವು ಸ್ಪಷ್ಟ ‘ಹಿತಾಸಕ್ತಿ ಸಂಘರ್ಷ’ವನ್ನು ಎತ್ತಿ ತೋರಿಸಿದೆ. ನ್ಯಾ.ಜೈನ್ ಅವರ ಖಾಸಾ ಸೋದರ ಇಡಿ ವಕೀಲರಾಗಿರುವುದರಿಂದ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯಬೇಕಾಗಿತ್ತು. ಈ ಸ್ಪಷ್ಟ ಹಿತಾಸಕ್ತಿ ಸಂಘರ್ಷವನ್ನು ನ್ಯಾ.ಜೈನ್ ಎಂದಿಗೂ ಘೋಷಿಸಿರಲಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಅಪರೂಪದ ಬೆಳವಣಿಗೆಯಲ್ಲಿ” ಜಾಮೀನು ಆದೇಶವು ಅಧಿಕೃತವಾಗಿ ಅಪ್ಲೋಡ್ ಆಗುವ ಮುನ್ನವೇ ನ್ಯಾ.ಜೈನ್ ಅವರು ಕೇಜ್ರಿವಾಲ್‌ರ ಜಾಮೀನನ್ನು ಪ್ರಶ್ನಿಸಲು ಇಡಿ ವಕೀಲರಿಗೆ ಅನುಮತಿ ನೀಡಿದ್ದರು ಮತ್ತು ಜಾಮೀನು ಆದೇಶಕ್ಕೆ ತಡೆ ವಿಧಿಸಿದ್ದರು. ಈ ರೀತಿ ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿ ಹಿಂದೆಂದೂ ನಡೆದಿರಲಿಲ್ಲ ಎಂದು ವಕೀಲರು ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷದ ಮುಖ್ಯ ವಕೀಲ ಸಂಜೀವ ನಸಿಯಾರ್ ಅವರೂ ಭಾಗವಾಗಿರುವ ವಕೀಲರ ನಿಯೋಗವು, ಅಂತಿಮ ಆದೇಶಗಳನ್ನು ಹೊರಡಿಸದಂತೆ ಮತ್ತು ರಜೆಯ ಬಳಿಕ ನಿಯಮಿತ ನ್ಯಾಯಾಲಯಗಳಿಗೆ ನೋಟಿಸ್‌ಗಳನ್ನು ಮಾತ್ರ ನೀಡುವಂತೆ ರೋಸ್ ಅವೆನ್ಯೂ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಬೇಸಿಗೆ ವಿರಾಮದಲ್ಲಿ ಕಾರ್ಯ ನಿರ್ವಹಿಸುವ ರಜಾಕಾಲದ ನ್ಯಾಯಾಲಯಗಳಿಗೆ ಹೊರಡಿಸಿದ್ದ ಆಂತರಿಕ ಆಡಳಿತಾತ್ಮಕ ಆದೇಶವನ್ನೂ ಎತ್ತಿ ತೋರಿಸಿದೆ.

ಈ ಕ್ರಮವು ರಜಾಕಾಲದ ನ್ಯಾಯಾಲಯಗಳ ಉದ್ದೇಶವನ್ನು ಕಡೆಗಣಿಸಿದೆ ಮತ್ತು ಇಂತಹ ಆದೇಶದ ವಿರುದ್ಧ ಬಲವಾದ ಆಕ್ಷೇಪವನ್ನು ಸಲ್ಲಿಸಲು ಬಯಸಿದ್ದೇವೆ ಎಂದೂ ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಜಾಮೀನು ಅರ್ಜಿಗೆ ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...