Homeಮುಖಪುಟಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

- Advertisement -
- Advertisement -

ಹೊಸದಾಗಿ ಜಾರಿಗೊಳಿಸಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರಲ್ಲಿ ಪೊಲೀಸ್ ಕಸ್ಟಡಿ ಅವಧಿಯನ್ನು ಹೆಚ್ಚಿಸಿರುವ ಸೆಕ್ಷನ್‌ಗೆ ತಿದ್ದುಪಡಿ ತರಬೇಕು ಮತ್ತು ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್-1973ರ ಬದಲಿಗೆ ಜಾರಿಗೆ ಬಂದಿರುವ ನಾಗರಿಕ ಸುರಕ್ಷಾ ಸಂಹಿತೆ-2023 ಆರೋಪಿಗಳನ್ನು ಗರಿಷ್ಠ 15 ದಿನಗಳ ಬದಲಾಗಿ 60-90 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲು ಅನುಮತಿಸುತ್ತದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿಯಲ್ಲಿ ಪೊಲೀಸ್ ಕಸ್ಟಡಿಯ ಅವಧಿಯು 15 ದಿನಗಳೇ ಇರಲಿದೆ ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದು, ಗರಿಷ್ಠ ಎರಡು ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ, ಒಬ್ಬ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದ ವೇಳೆ ಆತ 15 ದಿನಗಳ ಕಾಲ ಆಸ್ಪತ್ರೆಗೆ ದಾಖಲಾದರೆ, ಆತನ ಕಸ್ಟಡಿ ಅವಧಿಯು ಮುಕ್ತಾಯವಾಗುತ್ತಿದ್ದರಿಂದ ಯಾವುದೇ ವಿಚಾರಣೆಗೆ ಅವಕಾಶ ಇರಲಿಲ್ಲ ಎಂದು ಹೇಳಿದ್ದಾರೆ. ಅಮಿತ್ ಶಾ ಅವರ ಈ ಸ್ಪಷ್ಟೀಕರಣವು ಸ್ವಾಗತಾರ್ಹವಾದರೂ, ಕಾನೂನಿನ ಬಲ ಹೊಂದಿಲ್ಲದ ಕಾರಣ ಇದು ಸಾಕಾಗುವುದಿಲ್ಲ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹೇಳಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 (3)ಗೆ ತಿದ್ದುಪಡಿ ತಂದು ತಕ್ಷಣ ಸ್ಪಷ್ಟೀಕರಣ ನೀಡಿದರೆ ನ್ಯಾಯಾಲಯಗಳು, ಪೋಲೀಸ್ ಮತ್ತು ಸಾರ್ವಜನಿಕ ಅಭಿಯೋಜಕರಲ್ಲಿ ಆಗುವ ಗೊಂದಲಗಳು ತಪ್ಪಲಿದೆ ಎಂದು ಗೃಹ ಸಚಿವ ಅಮಿತ್ ಶಾ ಮತ್ತು ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರಿಗೆ ಬರೆದ ಪತ್ರದಲ್ಲಿ ಪಿಯುಸಿಎಲ್‌ ಆಗ್ರಹಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 ರ ಪೊಲೀಸ್ ಕಸ್ಟಡಿಯ ವ್ಯಾಖ್ಯಾನವು ಸಿಆರ್‌ಪಿಸಿಯ ಸೆಕ್ಷನ್ 167ರ ಮೌಖಿಕ ಪ್ರತಿಯಾಗಿದೆ. ಆದರೆ, ಹೊಸ ಸೆಕ್ಷನ್‌ನಲ್ಲಿ ಎಂಟು ಪದಗಳನ್ನು ಬಿಟ್ಟು ಬಿಡಲಾಗಿದೆ. ಅವು ಪೊಲೀಸ್ ರಿಮಾಂಡ್‌ಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿಭಿನ್ನವಾದ ವ್ಯಾಖ್ಯಾನ ನೀಡುತ್ತದೆ ಎಂದು ಪಿಯುಸಿಎಲ್‌ ತಿಳಿಸಿದೆ.

ಹಳೆಯ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನಲ್ಲಿ ಆರೋಪಿಯನ್ನು 15 ದಿನಗಳ ಬಳಿಕ ಪೊಲೀಸ್ ಕಸ್ಟಡಿಯಲ್ಲಿ ಅಥವಾ ಇತರ ರೀತಿಯಲ್ಲಿ ಬಂಧಿಸಲು ಮ್ಯಾಜಿಸ್ಟ್ರೇಟ್‌ಗೆ ಅವಕಾಶ ಇದೆ ಎನ್ನಲಾಗಿತ್ತು. ಹೊಸ ಕಾನೂನಿನಲ್ಲಿ ‘ಇತರ ರೀತಿಯಲ್ಲಿ’ ಎಂಬ ಪದವಿಲ್ಲ. ಇದು ಪೊಲೀಸರು ಆರೋಪಿಯನ್ನು 60-90 ದಿನಗಳವರೆಗೆ ಕಸ್ಟಡಿಗೆ ಪಡೆಯಲು ಅವಕಾಶ ನೀಡುತ್ತದೆ ಎಂದು ಪಿಯುಸಿಎಲ್ ಹೇಳಿದೆ.

ಪೊಲೀಸ್ ಕಸ್ಟಡಿ ಅವಧಿಯನ್ನು 15 ದಿನಗಳಿಗಿಂತ ಹೆಚ್ಚು ವಿಸ್ತರಿಸುವುದು ಕಾನೂನಿನ ನಿಯಮ ಮತ್ತು ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಗಂಭೀರ ಆಕ್ರಮಣವಾಗಿದೆ. ಆರೋಪಿಯನ್ನು ನೇರವಾಗಿ ಪೋಲೀಸರ ವಶದಲ್ಲಿ ಇಡುವ ಈ ಅವಧಿಯು ಪೊಲೀಸರಿಂದ ಗರಿಷ್ಠ ಒತ್ತಡವನ್ನು ಉಂಟು ಮಾಡುವ ಸಮಯವಾಗಿದೆ. ಇದು ಪೊಲೀಸರು ಆರೋಪಿಗೆ ದೈಹಿಕ ಚಿತ್ರಹಿಂಸೆ, ಭಾವನಾತ್ಮಕ ಒತ್ತಡಗಳು ಮತ್ತು ಇತರ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಬಳಸಲು ಅವಕಾಶ ನೀಡುತ್ತದೆ ಎಂದಿದೆ.

ಗೃಹ ಸಚಿವರು ಪೊಲೀಸ್ ಕಸ್ಟಡಿ ಅವದಿ 15 ದಿನಗಳು ಮಾತ್ರ ಎಂದಿದ್ದಾರೆ. ಆದರೆ, ಹೊಸ ಕಾನೂನಿನಲ್ಲಿ 15 ದಿನಗಳ ಕಸ್ಟಡಿ ಅವಧಿಯ ಬಳಿಕ ಮ್ಯಾಜಿಸ್ಟ್ರೇಟ್ ಪೊಲೀಸ್ ಕಸ್ಟಡಿ ಅಲ್ಲದೆ ಇತರ ರೀತಿಯಲ್ಲಿ ಬಂಧಿಸಲು ಅನುಮತಿ ನೀಡುವ ಅವಕಾಶವಿಲ್ಲ. ನ್ಯಾಯಾಲದಲ್ಲಿ ಕಾನೂನಿನಲ್ಲಿ ಹೇಳಿರುವುದು ಮಾತ್ರ ಪರಿಗಣನೆಗೆ ಬರುತ್ತದೆ. ಹಾಗಾಗಿ, ಕೇಂದ್ರ ಸರ್ಕಾರ ಹೊಸ ಕಾನೂನಿಗೆ ತಿದ್ದುಪಡಿ ತಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ 15 ದಿನಗಳು ಮಾತ್ರ ಎಂದು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ಪಿಯುಸಿಎಲ್ ಆಗ್ರಹಿಸಿದೆ.

ಇದನ್ನೂ ಓದಿ : ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...