Homeಮುಖಪುಟರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಶುಕ್ರವಾರ ಭೇಟಿಯಾದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದಾರೆ.

ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ದೇಶದ ವಿವಿಧ ಭಾಗಗಳ ಸುಮಾರು 50 ಲೋಕೋ ಪೈಲಟ್‌ಗಳನ್ನು ರಾಹುಲ್ ಗಾಂಧಿ ಭೇಟಿಯಾಗಿದ್ದು, ಲೋಕೋ ಪೈಲಟ್‌ಗಳನ್ನು ತಮ್ಮ ಸಮಸ್ಯೆಗಳನ್ನು ವಿವರಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

ಬಹಳ ದೂರದ ಪ್ರದೇಶಗಳಿಗೆ ರೈಲು ಗಾಡಿಗಳನ್ನು ಓಡಿಸುವ ಲೋಕೋ ಪೈಲಟ್‌ಗಳಿಗೆ ಸರಿಯಾಗಿ ವಿಶ್ರಾಂತಿ ಸಿಗುತ್ತಿಲ್ಲ. ಇದರಿಂದ ಅವರು ಹೆಚ್ಚಿನ ಒತ್ತಡ ಮತ್ತು ಏಕಾಗ್ರತೆಯ ಕೊರತೆಯನ್ನು ಎದುರಿಸುತ್ತಿದ್ದಾರೆ. ಇದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ ಎಂದು ವರದಿಗಳು ತಿಳಿಸಿವೆ.

ವಿಶಾಖಪಟ್ಟಣದಲ್ಲಿ ನಡೆದ ರೈಲು ಅಪಘಾತದ ಸೇರಿದಂತೆ ಇತರ ಹಲವು ರೈಲು ಅಪಘಾತಗಳ ಪ್ರಕರಣಗಳಲ್ಲಿ ರೈಲ್ವೆ ಇಲಾಖೆ ಈ ವಿಚಾರವನ್ನು ಒಪ್ಪಿಕೊಂಡಿದೆ. ಲೋಕೋ ಪೈಲಟ್‌ಗಳು ಸಾಪ್ತಾಹಿಕ 46 ಗಂಟೆಗಳ ವಿಶ್ರಾಂತಿಯನ್ನು ಕೋರಿದ್ದಾರೆ. ಅಂದರೆ, ಶುಕ್ರವಾರ ಮಧ್ಯಾಹ್ನ ಮನೆಗೆ ಹಿಂದಿರುಗುವ ರೈಲು ಚಾಲಕ, ಭಾನುವಾರ ಬೆಳಿಗ್ಗೆಯ ನಂತರ ಕರ್ತವ್ಯಕ್ಕೆ ವಾಪಾಸಾಗಬೇಕು ಎಂಬುವುದು ಅವರ ಬೇಡಿಕೆಯಾಗಿದೆ.

ರೈಲ್ವೆ ಕಾಯ್ದೆ-1989 ಮತ್ತು ಇತರ ನಿಯಮಗಳು ಲೋಕೋ ಪೈಲಟ್‌ಗಳಿಗೆ ವಾರಕ್ಕೆ 30+16 ಗಂಟೆಗಳ ವಿಶ್ರಾಂತಿ ನೀಡುವಂತೆ ಹೇಳುತ್ತದೆ. ಆದರೆ, ಅದನ್ನು ಕಾರ್ಯಗತಗೊಳಿಸುತ್ತಿಲ್ಲ ಎಂಬ ಆರೋಪಗಳಿಗೆ. ವಿಮಾನದ ಪೈಲಟ್‌ಗಳು ಸಹ ಸಾಮಾನ್ಯವಾಗಿ ಇಷ್ಟು ವಿಶ್ರಾಂತಿ ಪಡೆಯುತ್ತಾರೆ.

ಸತತ ಎರಡು ರಾತ್ರಿ ಕರ್ತವ್ಯದ ನಂತರ ಒಂದು ರಾತ್ರಿ ವಿಶ್ರಾಂತಿ ನೀಡಬೇಕು. ರೈಲುಗಳಲ್ಲಿ ಚಾಲಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಲೋಕೋ ಪೈಲಟ್‌ಗಳು ಒತ್ತಾಯಿಸಿದ್ದಾರೆ.

ಲೋಕೋ ಪೈಲಟ್‌ಗಳ ನೇಮಕಾತಿಯನ್ನು ಸರ್ಕಾರ ಸ್ಥಗಿತಗೊಳಿಸಿರುವುದರಿಂದ ಸಿಬ್ಬಂದಿ ಕೊರತೆಯಿಂದಾಗಿ ವಿಶ್ರಾಂತಿ ಕೊರತೆ ಉಂಟಾಗಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.

“ಕಳೆದ ನಾಲ್ಕು ವರ್ಷಗಳಲ್ಲಿ ರೈಲ್ವೆ ನೇಮಕಾತಿ ಮಂಡಳಿಯು ಹತ್ತು ಸಾವಿರ ಖಾಲಿ ಹುದ್ದೆಗಳಿದ್ದರೂ ಒಬ್ಬರೇ ಒಬ್ಬರು ಲೋಕೋ ಪೈಲಟ್ ಅನ್ನು ನೇಮಕ ಮಾಡಿಲ್ಲ. ಈ ಉದ್ದೇಶಪೂರ್ವಕ ಕ್ರಮವು ರೈಲ್ವೆಯನ್ನು ಖಾಸಗೀಕರಣಗೊಳಿಸುವ ಮೋದಿ ಸರ್ಕಾರದ ಹುನ್ನಾರವಾಗಿದೆ ಎಂದು ಪೈಲಟ್‌ಗಳು ತಮ್ಮ ಭಯವನ್ನು ವ್ಯಕ್ತಪಡಿಸಿದ್ದಾರೆ” ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

“ರೈಲ್ವೆಯ ಖಾಸಗೀಕರಣ ಮತ್ತು ನೇಮಕಾತಿ ಸ್ಥಗಿತ’ದ ವಿಷಯವನ್ನು ಲೋಕಸಭೆಯಲ್ಲಿ ಈಗಾಗಲೇ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಮತ್ತೊಮ್ಮೆ ಈ ವಿಷಯದಲ್ಲಿ ಧ್ವನಿ ಎತ್ತಲಾಗುವುದು. ನಿಯಮದ ಪ್ರಕಾರ ವಿಶ್ರಾಂತಿ ಸಿಗಬೇಕು ಎಂಬ ನಿಮ್ಮ ಬೇಡಿಕೆಯನ್ನು ಬೆಂಬಲಿಸುತ್ತೇನೆ” ಎಂದು ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ದೆಹಲಿಯಲ್ಲಿ ಗಾರೆ ಕಾರ್ಮಿಕರನ್ನು ಭೇಟಿಯಾಗಿ, ಅವರ ಜೊತೆ ಕೆಲಸ ಮಾಡಿ ರಾಹುಲ್ ಗಾಂಧಿ ಸಮಸ್ಯೆ ಆಲಿಸಿದ್ದರು.

ಇದನ್ನೂ ಓದಿ : ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷನ ಹತ್ಯೆ : 8 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...