Homeಫ್ಯಾಕ್ಟ್‌ಚೆಕ್FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು...

FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

- Advertisement -
- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಯ ಫಲಾನುಭವಿಗಳು ಎಂದು ಪತ್ರಿಕೆಯಲ್ಲಿ ಜಾಹೀರಾತಿನ ರೂಪದಲ್ಲಿ ಪ್ರಕಟಗೊಂಡ ವಿದ್ಯಾರ್ಥಿಗಳ ಫೋಟೋವನ್ನು ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದಾರೆ.

Bharathiya Citizen(@LawAcademics)  ಎಂಬ ಎಕ್ಸ್‌ ಬಳಕೆದಾರರು ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದು, “ಫೋಟೋದಲ್ಲಿರುವುದು ನೀಟ್ ಪ್ರವೇಶ ಪ್ರಶ್ನೆ ಪತ್ರಿಕೆ ಸೋರಿಕೆ ಫಲಾನುಭವಿಗಳು. ಇವರು ಯಾವ ಧರ್ಮದವರು ಎಂದು ಸುಮ್ನೆ ನೋಡಿ. ಎಲ್ಲರೂ ಮುಸ್ಲಿಮರು” ಎಂದು ಬರೆದುಕೊಂಡಿದ್ದಾರೆ.

ಸದಾ ಕೋಮು ದ್ವೇಷದ ಮತ್ತು ಸುಳ್ಳು ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿ ಪಡೆದಿರುವ ಸುದರ್ಶನ್ ನ್ಯೂಸ್‌ನ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ (@sureshchavhanke)ಕೂಡ ಪತ್ರಿಕೆಯ ಜಾಹೀರಾತಿನ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು” ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು/ಟಾಪರ್‌ಗಳ ಪಟ್ಟಿಯಲ್ಲಿರುವ ಫೋಟೋಗಳನ್ನು ನೋಡಿ. ನೀವು ಇದನ್ನು ಪರೀಕ್ಷಾ ಜಿಹಾದ್ ಎಂದೂ ಕರೆಯಬಹುದು” ಎಂದು ಬರೆದುಕೊಂಡಿದ್ದಾರೆ.

ತನ್ನನ್ನು ತಾನು ಇಂಜಿನಿಯರ್, ವಕೀಲ ಹಾಗೂ ಪತ್ರಕರ್ತ ಎಂದು ಹೇಳಿಕೊಂಡಿರುವ ಎಕ್ಸ್‌ ಪ್ರೀಮಿಯಂ ಬಳಕೆದಾರ ANUPAM MISHRA(@scribe9104)ಮೇಲೆ ಇಬ್ಬರು ಮಾಡಿದಂತೆ ಆರೋಪಿಸಿ ಪತ್ರಿಕೆಯ ಜಾಹೀರಾತಿನ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ 2.67 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು 4,900 ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.

ಇನ್ನೂ ಅನೇಕರು ಇದೇ ರೀತಿಯ ಆರೋಪಗಳನ್ನು ಮಾಡಿ ಪತ್ರಿಕೆಯ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪತ್ರಿಕಾ ಜಾಹೀರಾತಿನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ನೀಟ್ ಟಾಪರ್‌ಗಳಿಗೆ ಅಭಿನಂದನೆ ಕೋರಿ ಕೇರಳದ ಕೋಚಿಂಗ್ ಸೆಂಟರ್‌ ಒಂದು ನೀಡಿರುವ ಜಾಹೀರಾತಿನ ಫೋಟೋ ಎಂದು ತಿಳಿದು ಬಂದಿದೆ.

ಜಾಹೀರಾತಿನಲ್ಲಿ ಹೆಚ್ಚಾಗಿ ಮುಸ್ಲಿಂ ವಿದ್ಯಾರ್ಥಿಗಳ ಫೋಟೋ, ಹೆಸರು ಇರುವುದರಿಂದ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು, “ನೀಟ್ ಪ್ರಶ್ನೆ ಪತ್ರಿಕೆಯ ಫಲಾನುಭವಿಗಳು ಇವರೇ” ಎಂಬ ರೀತಿಯಲ್ಲಿ ಕೋಮು ದ್ವೇಷದ, ಸುಳ್ಳು ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

@LawAcademics ಹಾಕಿರುವ ಪೋಸ್ಟ್ ಅನ್ನು ಕೇರಳ ಪೊಲೀಸರಿಗೆ ಟ್ಯಾಗ್ ಮಾಡಿರುವ زماں(@Delhiite) ಎಂಬ ಬಳಕೆದಾರ” ಕೇರಳ ಪೊಲೀಸರೇ ನೋಡಿ, ಈ ಬಳಕೆದಾರ ನಿಮ್ಮ ರಾಜ್ಯವನ್ನು ಅವಮಾನಿಸುತ್ತಿದ್ದಾರೆ ಎಂದಿದ್ದಾರೆ.

“ಇದು ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ ನೀಡಿರುವ ಪತ್ರಿಕಾ ಜಾಹೀರಾತಾಗಿದೆ. ಪ್ರತಿ ವರ್ಷವೂ ಈ ಸಂಸ್ಥೆಯಿಂದ ವಿದ್ಯಾರ್ಥಿಗಳು ನೀಟ್‌ ಮತ್ತು ಜೆಇಇಯಲ್ಲಿ ಆಯ್ಕೆಯಾಗುತ್ತಿದ್ದಾರೆ. ನೀವು ಮೋದಿಯನ್ನು ಆಯ್ಕೆ ಮಾಡಿದ್ದೀರಿ, ಅವರು ಅಧ್ಯಯನವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಮತ್ಸರ ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಯೂನಿವರ್ಸಲ್ ಇನ್‌ಸ್ಟಿಟ್ಯೂಟ್‌ಗೂ ಟ್ಯಾಗ್‌ ಮಾಡಿ “ನೋಡಿ ನಿಮ್ಮ ಸಂಸ್ಥೆಯನ್ನು ಅವಮಾನಿಸುತ್ತಿದ್ದಾರೆ. ಎಫ್‌ಐಆರ್ ದಾಖಲಿಸಿ” ಎಂದು ಕೋರಿದ್ದಾರೆ.

ನಾವು ಪತ್ರಿಕಾ ಜಾಹೀರಾತಿನ ಮೂಲ ಪ್ರತಿ ಹುಡುಕಿದಾಗ ಮಾತೃಭೂಮಿ ಪತ್ರಿಕೆಯ ತಿರುವನಂತಪುರ ಆವೃತ್ತಿಯಲ್ಲಿ ಜಾಹೀರಾತು ಪ್ರಕಟಿಸಿರುವುದು ಕಂಡು ಬಂದಿದೆ. ಅದರ ಕೆಳಭಾಗದಲ್ಲಿ ‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಕೋಟಕಲ್’ ಎಂಬ ಉಲ್ಲೇಖವನ್ನು ನೋಡಬಹುದು. ಮೇಲ್ಭಾಗದಲ್ಲಿ, “ಕೊಟ್ಟಕಲ್ ಯೂನಿವರ್ಸಲ್ ಇನ್ಸ್ಟಿಟ್ಯೂಟ್ ರಜತ ಮಹೋತ್ಸವದ ಸಂದರ್ಭದಲ್ಲಿ ಕೇರಳದಲ್ಲಿ ಹೊಸ ಅಲೆ ಸೃಷ್ಟಿಸಿದೆ” ಎಂದು ಹೇಳಲಾಗಿದೆ.

‘ಯೂನಿವರ್ಸಲ್ ಇನ್‌ಸ್ಟಿಟ್ಯೂಟ್’ ನ ವೆಬ್‌ಸೈಟ್‌ನಲ್ಲೂ ನಾವು ಆ ಜಾಹೀರಾತನ್ನು ನೋಡಬಹುದು.

ಮಾತೃಭೂಮಿ ಪತ್ರಿಕೆಯ ಈ ಪೇಪರ್‌ನಲ್ಲೂ ಜಾಹೀರಾತು ಇದೆ. ಅದರ ಲಿಂಕ್ ಇಲ್ಲಿದೆ.

“ಯೂನಿರ್ವಸಲ್ ಇನ್‌ಸ್ಟಿಟ್ಯೂಟ್‌ನ ಶೈಕ್ಷಣಿಕ ನಿರ್ದೇಶಕ ಅಬ್ದುಲ್ ಹಮೀದ್ ಅವರನ್ನು ನಾವು ಸಂಪರ್ಕಕಿಸಿದ್ದೇವೆ. ಈ ವೇಳೆ ಕೋಚಿಂಗ್ ಸೆಂಟರ್‌ನಿಂದ ನೀಟ್-2024 ಟಾಪರ್‌ಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿರುವುದನ್ನು ಅವರು ಖಚಿತಪಡಿಸಿದ್ದಾರೆ. ಜಾಹೀರಾತಿನಲ್ಲಿ ಬಹುಪಾಲು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರು ಇರಲು ಕಾರಣ “ಈ ಸಂಸ್ಥೆಯು ಮುಸ್ಲಿಂ ಬಾಹುಳ್ಯದ ಮಲಬಾರ್ ಪ್ರದೇಶದಲ್ಲಿದೆ ಎಂದು ಅವರು ಹೇಳಿದ್ದಾರೆ. ಇತರ ಸಮುದಾಯಗಳ ವಿದ್ಯಾರ್ಥಿಗಳೂ ಕೂಟ ಟಾಪರ್‌ಗಳ ಪಟ್ಟಿಯಲ್ಲಿ ಇರುವುದನ್ನು ಅವರು ಎತ್ತಿ ತೋರಿಸಿದ್ದಾರೆ” ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ಪತ್ರಿಕೆಯ ಜಾಹೀರಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇರಳ ಪೊಲೀಸರಿಗೆ ದೂರು ನೀಡಿರುವುದಾಗಿ ಹಮೀದ್ ಹೇಳಿದ್ದಾರೆ ಎಂದಿದೆ.

ಒಟ್ಟಿನಲ್ಲಿ ಕೇರಳದ ಕೋಟಕ್ಕಲ್‌ನ ಯೂನಿವರ್ಸಲ್ ಇನ್‌ಸ್ಟಿಟ್ಯೂಟ್ ಈ ವರ್ಷದ ನೀಟ್ ಟಾಪರ್‌ಗಳಿಗೆ ಅಭಿನಂದನೆ ಸಲ್ಲಿಸಿ ಮಾತೃಭೂಮಿ ಪತ್ರಿಕೆಯಲ್ಲಿ ಜಾಹೀರಾತು ನೀಡಿತ್ತು. ಅದರಲ್ಲಿ ಹೆಚ್ಚಿನವರು ಮುಸ್ಲಿಂ ವಿದ್ಯಾರ್ಥಿಗಳು ಇರುವುದನ್ನು ಗಮನಿಸಿದ ಕೋಮುವಾದಿಗಳು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಅದರಿಂದಲೇ ಇಷ್ಟು ಮಂದಿ ಟಾಪರ್‌ಗಳಾಗಿದ್ದಾರೆ ಎಂದು ಶಿಕ್ಷಣದ ವಿಷಯದಲ್ಲಿ ದ್ವೇಷ ಹರಡಿದ್ದಾರೆ.

ಇದನ್ನೂ ಓದಿ : FACT CHECK : ಸಂಸತ್ ಅಧಿವೇಶನದ ವೇಳೆ ಟಿಎಂಸಿ ಸಂಸದರು ನಿದ್ದೆ ಮಾಡಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...