Homeಮುಖಪುಟಸೂರತ್: ಐದು ಅಂತಸ್ತಿನ ಕಟ್ಟಡ ಕುಸಿತದಿಂದ 7 ಸಾವು, ಮತ್ತಷ್ಟು ಮಂದಿ ಸಿಲುಕಿರುವ ಶಂಕೆ

ಸೂರತ್: ಐದು ಅಂತಸ್ತಿನ ಕಟ್ಟಡ ಕುಸಿತದಿಂದ 7 ಸಾವು, ಮತ್ತಷ್ಟು ಮಂದಿ ಸಿಲುಕಿರುವ ಶಂಕೆ

- Advertisement -
- Advertisement -

ಗುಜರಾತ್‌ನ ಸೂರತ್ ನಗರದ ಪಾಲ್ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತದ ಅವಶೇಷಗಳಿಂದ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಅವಶೇಷಗಳಡಿ ಮಹಿಳೆಯೊಬ್ಬರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. 2016-17ರಲ್ಲಿ ನಿರ್ಮಿಸಲಾಗಿದ್ದ ಕಟ್ಟಡ ಶನಿವಾರ ಮಧ್ಯಾಹ್ನ ಕುಸಿದು ಬಿದ್ದಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ.

ಸೂರತ್ ಡಿಸಿಪಿ ರಾಜೇಶ್ ಪರ್ಮಾರ್ ಮಾತನಾಡಿ, “12 ಗಂಟೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ; ಒರ್ವ ಮಹಿಳೆಯನ್ನು ರಕ್ಷಿಸಲಾಗಿದೆ ಮತ್ತು ಏಳು ಮೃತ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ನಾವು ಅವಶೇಷಗಳನ್ನು ತೆರವುಗೊಳಿಸುತ್ತಿದ್ದೇವೆ” ಎಂದು ಹೇಳಿದರು.

ಈ ನಡುವೆ, ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ಬಾಬುಲಾಲ್ ಯಾದವ್ ಅವರು ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ. ಇನ್ನೂ ಎಷ್ಟು ಜನ ಸಿಕ್ಕಿಬಿದ್ದಿರಬಹುದು ಎಂಬುದನ್ನು ನಿರ್ದಿಷ್ಟಪಡಿಸಲು ಸಾಧ್ಯವಾಗುತ್ತಿಲ್ಲ, ಆದರೆ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದರು.

ಘಟನೆಯ ನಂತರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಸ್ಥಳೀಯ ಅಗ್ನಿಶಾಮಕ ದಳದ ತಂಡಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಸೂರತ್‌ನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್, “ಶನಿವಾರ ಮಧ್ಯಾಹ್ನ 3:55 ರ ಸುಮಾರಿಗೆ ಐದು ಅಂತಸ್ತಿನ ಕಟ್ಟಡ ಕುಸಿದಿರುವ ಬಗ್ಗೆ ಸೂರತ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ ಮಾಹಿತಿ ಬಂದಿತು. ಸುಮಾರು 20 ಅಗ್ನಿಶಾಮಕ ಅಧಿಕಾರಿಗಳು ಆಡಳಿತದೊಂದಿಗೆ ಧಾವಿಸಿದರು. ನಾವು ರಾತ್ರಿಯಿಡೀ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿದ್ದೇವೆ” ಎಂದರು.

ಇನ್ನು ಯಾವುದೇ ವ್ಯಕ್ತಿಗಳು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಪರೀಕ್ ತಿಳಿಸಿದ್ದಾರೆ. ಆದರೆ, ಅವಶೇಷಗಳನ್ನು ತೆಗೆಯುವ ಕಾರ್ಯಾಚರಣೆ ಮುಂದುವರಿಯಲಿದೆ.

ಅವಶೇಷಗಳನ್ನು ತೆಗೆಯುವ ಕಾರ್ಯಾಚರಣೆ ಮುಂದುವರಿದಿದ್ದು, ಒಳಗೆ ಬೇರೆಯವರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ನಾವು ಭಾವಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು ಐದು ಫ್ಲಾಟ್‌ಗಳಲ್ಲಿ, ಮುಖ್ಯವಾಗಿ ಆ ಪ್ರದೇಶದಲ್ಲಿನ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳು ವಾಸಿಸುತ್ತಿದ್ದರು.

ಇದನ್ನೂ ಓದಿ; ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಮುಟ್ಟುಗೋಲು ಹಾಕಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...