Homeಮುಖಪುಟಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

ಅದಾನಿ ಸಮೂಹದಿಂದ 108 ಹೆಕ್ಟೇರ್ ಭೂಮಿ ಹಿಂಪಡೆಯಲು ನಿರ್ಧರಿಸಿದ ಗುಜರಾತ್ ಸರ್ಕಾರ: ಗ್ರಾಮಸ್ಥರ ಹೋರಾಟಕ್ಕೆ ಜಯ

- Advertisement -
- Advertisement -

ಗುಜರಾತ್‌ನ ಕಚ್‌ ಜಿಲ್ಲೆಯ ಮುಂದ್ರಾ ಗ್ರಾಮಸ್ಥರು 13 ವರ್ಷಗಳ ಕಾಲ ನಡೆಸಿದ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರ 2005ರಲ್ಲಿ ಅದಾನಿ ಸಮೂಹಕ್ಕೆ ಮಂಜೂರು ಮಾಡಿದ್ದ 108 ಹೆಕ್ಟೇರ್‌ ಗೋಮಾಳದ ಜಾಗವನ್ನು ಮರಳಿ ಗ್ರಾಮಸ್ಥರಿಗೆ ನೀಡಲು ನಿರ್ಧಿರಿಸಿರುವುದಾಗಿ ಹೈಕೋರ್ಟ್‌ಗೆ ತಿಳಿಸಿದೆ.

ವಿಶೇಷ ಅರ್ಥಿಕ ವಲಯ (ಸೆಝ್) ಮತ್ತು ಅದಾನಿ ಬಂದರಿಗೆ 231 ಎಕರೆ ಗೋಮಾಳದ ಜಾಗವನ್ನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದರು.

ಸರ್ಕಾರ 2005ರಲ್ಲಿ ಜಮೀನು ಮಂಜೂರು ಮಾಡಿದ್ದರೂ ಈ ವಿಚಾರ ಗ್ರಾಮಸ್ಥರಿಗೆ ತಿಳಿದಿರಲಿಲ್ಲ. 2010ರಲ್ಲಿ ಅದಾನಿ ಬಂದರು ಮತ್ತು ಸೆಝ್ ಜಂಟಿಯಾಗಿ ತಮಗೆ ಮಂಜೂರಾದ ಜಮೀನಿಗೆ ಬೇಲಿ ಹಾಕಲು ಮುಂದಾಗಿತ್ತು. ಈ ವೇಳೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕಾನೂನು ಹೋರಾಟಕ್ಕೆ ಧುಮುಕಿದ್ದರು.

ಗ್ರಾಮಸ್ಥರ ಪ್ರಕಾರ, 279 ಎಕರೆ ಗೋಮಾಳದ ಜಾಗದಲ್ಲಿ 45 ಎಕರೆ ಬಿಟ್ಟು ಉಳಿದ 231 ಎಕರೆಯನ್ನು ಕಾರ್ಪೋರೇಟ್ ವಲಯಕ್ಕೆ ಮಂಜೂರು ಮಾಡಲಾಗಿತ್ತು. ಗೋಮಾಳದ ಕೊರತೆ ಎದುರಿಸುತ್ತಿದ್ದ ಗ್ರಾಮಸ್ಥರಿಗೆ ಇದರಿಂದ ಇನ್ನಷ್ಟು ಸಮಸ್ಯೆ ಆಗಿತ್ತು. ಗೋಮಾಳದ ಜಾಗ ಸಮುದಾಯದ ಸಂಪನ್ಮೂಲ ಎಂದು ಅವರು ಪ್ರತಿಪಾದಿಸಿದ್ದರು.

2014ರಲ್ಲಿ ಹೆಚ್ಚುವರಿ 387 ಎಕರೆ ಸರ್ಕಾರಿ ಭೂಮಿಯನ್ನು ಗೋಮಾಳಕ್ಕಾಗಿ ಮಂಜೂರು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಎಂದು ರಾಜ್ಯ ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ತಿಳಿಸಿದ್ದ ಹಿನ್ನೆಲೆ ಹೈಕೋರ್ಟ್ ಪಿಐಎಲ್ ಇತ್ಯರ್ಥಪಡಿಸಿತ್ತು.

ಆದರೆ, ಅದು ಸಾಧ್ಯವಾಗದಿದ್ದಾಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. 2015 ರಲ್ಲಿ, ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿ ಪಂಚಾಯಿತಿಗೆ ಹಂಚಿಕೆ ಮಾಡಲು ಲಭ್ಯವಿರುವ ಭೂಮಿ ಕೇವಲ 17 ಹೆಕ್ಟೇರ್‌ ಎಂದು ತಿಳಿಸಿತ್ತು.

ನಂತರ ರಾಜ್ಯ ಸರ್ಕಾರ ಸುಮಾರು 7 ಕಿಲೋ ಮೀಟರ್ ದೂರದಲ್ಲಿ ಉಳಿದ ಭೂಮಿಯನ್ನು ಮಂಜೂರು ಮಾಡುವುದಾಗಿ ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ಜಾನುವಾರುಗಳು ಅಷ್ಟು ದೂರ ಹೋಗಲು ಸಾಧ್ಯವಿಲ್ಲ ಎಂದಿದ್ದರು.

ಏಪ್ರಿಲ್ 2024 ರಲ್ಲಿ, ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಪ್ರಣವ್ ತ್ರಿವೇದಿ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪರಿಹಾರ ನೀಡುವಂತೆ ಸೂಚಿಸಿತ್ತು.

ಶುಕ್ರವಾರ (ಜುಲೈ 5,2024) ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವ ರಾಜ್ಯ ಸರ್ಕಾರ ಅದಾನಿ ಸೆಝ್‌ಗೆ ಹಂಚಲಾಗಿದ್ದ ಸುಮಾರು 108 ಹೆಕ್ಟೇರ್ ಅಥವಾ 266 ಎಕರೆ ಗೋಮಾಳದ ಜಾಗವನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಪೀಠಕ್ಕೆ ತಿಳಿಸಿದೆ.

ರಾಜ್ಯ ಸರ್ಕಾರವು 129 ಹೆಕ್ಟೇರ್ ಭೂಮಿಯನ್ನು ಗೋಮಾಳವಾಗಿ “ಮರುಪೂರಣ” ಮಾಡಿ ಅದನ್ನು ಗ್ರಾಮಕ್ಕೆ ಹಿಂದಿರುಗಿಸಲಿದೆ. ಇದಕ್ಕಾಗಿ ತನ್ನದೇ ಆದ ಕೆಲವು ಭೂಮಿಯನ್ನು ಬಳಸಲಿದೆ. 108 ಹೆಕ್ಟೇರ್ ಅನ್ನು ಅದಾನಿ ಸಮೂಹ ಸಂಸ್ಥೆಯಿಂದ ಹಿಂದಕ್ಕೆ ತೆಗೆದುಕೊಳ್ಳಲಿದೆ ಎಂದು ಕಂದಾಯ ಇಲಾಖೆ ನ್ಯಾಯಾಲಯಕ್ಕೆ ತಿಳಿಸಿದೆ.

ಹೈಕೋರ್ಟ್ ಪೀಠ ಈ ನಿರ್ಧಾರಕ್ಕೆ ತೃಪ್ತಿ ವ್ಯಕ್ತಪಡಿಸಿದ್ದು, ಈ ನಿರ್ಣಯವನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ : ಮಹಿಳಾ ಆಯೋಗದ ಮುಖ್ಯಸ್ಥೆ ಕುರಿತು ಪೋಸ್ಟ್‌; ಹೊಸ ಕ್ರಿಮಿನಲ್ ಕಾನೂನಿನ ಅಡಿಯಲ್ಲಿ ಮಹುವಾ ವಿರುದ್ಧ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...