ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ.
“ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು. ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು ಇದನ್ನು ನಿಮ್ಮ ಗುಂಪುಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ” ಎಂದು ವೈರಲ್ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಇದೇ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳನ್ನು ಟೀಕಿಸಲು ಈ ಪೋಸ್ಟ್ ಅನ್ನು ಬಳಸಿಕೊಳ್ಳಲಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಮೇಲೆ ರಾಜ್ಯ ತೆರಿಗೆಯನ್ನು ಹೆಚ್ಚಿಸಿದ್ದಾರೆ ಎಂದು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿದೆ.


ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ನಡೆಸಿದಾಗ, ಪೋಸ್ಟರ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದು ಬಂದಿದೆ.
ClearTax ನ ಮಾಹಿತಿ ಪ್ರಕಾರ “ಭಾರತದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯು ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆಯ ಶೇ. 55 ಅನ್ನು ಒಳಗೊಂಡಿರುತ್ತದೆ. ಡೀಸೆಲ್ ಮೇಲಿನ ತೆರಿಗೆಯು ಅದರ ಚಿಲ್ಲರೆ ಮಾರಾಟ ಮೌಲ್ಯದ ಶೇ. 50 ಆಗಿದೆ. ಇದರ ಹೊರತಾಗಿ, ಮಾರಾಟ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯ ಸರ್ಕಾರಗಳು ವಿವಿಧ ದರಗಳಲ್ಲಿ ವಿಧಿಸುತ್ತವೆ.
ಭಾರತದ ಇಂಧನ ಬೆಲೆ ನಿಗದಿಯಲ್ಲಿರುವ ಪ್ರಮುಖ ಶುಲ್ಕಗಳು ಇಲ್ಲಿವೆ : ಕಚ್ಚಾ ತೈಲದ ಮೂಲ ಬೆಲೆ, ಅಬಕಾರಿ ತೆರಿಗೆ, ವಿತರಕರ ಕಮಿಷನ್ ಮತ್ತು ಶುಲ್ಕಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್). ಈಗ, ಕಚ್ಚಾ ತೈಲ ಬೆಲೆಗಳು, ಡೀಲರ್ ಶುಲ್ಕಗಳು ಮತ್ತು ಅಬಕಾರಿ ಸುಂಕವು ಭಾರತದಾದ್ಯಂತ ಒಂದೇ ಆಗಿರುತ್ತದೆ. ಆದಾಗ್ಯೂ, ವ್ಯಾಟ್ ಮತ್ತು ಮಾರಾಟ ತೆರಿಗೆಯು ರಾಜ್ಯಗಳಾದ್ಯಂತ ಭಿನ್ನವಾಗಿರುತ್ತದೆ. ಇದು ಇಂಧನ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯವಾರು ತೆರಿಗೆ ಪಟ್ಟಿ

ಇತ್ತೀಚೆಗೆ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಬೆಲೆ 3 ರೂ. ಏರಿಕೆಯಾಗಿದೆ. ಪೆಟ್ರೋಲ್ ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್‌ಗೆ 102.85 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 88.93 ರೂ. ಆಗಿದೆ.
ಒಟ್ಟಿನಲ್ಲಿ, ಪೆಟ್ರೋಲ್ ದರದ ಮೇಲೆ ಕೇಂದ್ರ ಸರ್ಕಾರದ 19.50 ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರದ 41.55 ತೆರಿಗೆ ವಿಧಿಸಿಸುತ್ತಿದೆ ಎಂಬುದು ಸುಳ್ಳು. ವಾಸ್ತವವಾಗಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ಇದನ್ನೂ ಓದಿ : FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು


