Homeಮುಖಪುಟತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

- Advertisement -
- Advertisement -

ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯಲ್ಲಿ 27 ವರ್ಷದ ಆದಿವಾಸಿ ಮಹಿಳೆಯೊಬ್ಬರು ತನ್ನ ಗ್ರಾಮದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಭೂಮಾಲೀಕರ ಕುಟುಂಬದಿಂದ ಲೈಂಗಿಕ ದೌರ್ಜನ್ಯ ಮತ್ತು ಚಿತ್ರ ಹಿಂಸೆಗೆ ಒಳಗಾಗಿದ್ದು, 15 ದಿನಗಳ ನಂತರ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ನಿರ್ಮಲಮ್ಮ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಗೆ ಥಳಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಆಕೆಯ ಗುಪ್ತಾಂಗವನ್ನು ಸುಟ್ಟು ಚಿತ್ರಹಿಂಸೆ ನೀಡಲಾಗಿದೆ. ಆಕೆಯ ಪತಿಯನ್ನು ಬಂಧಿತ ದುಡಿಮೆಗೆ ಒಳಪಡಿಸಲಾಗಿದೆ.

ಮಹಿಳೆಯ ಸ್ವಂತ ಕುಟುಂಬದವರು ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಬಲ ಕುಟುಂಬಕ್ಕೆ ಒಂದು ತುಂಡು ಭೂಮಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣ ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳು ತೆಲಂಗಾಣದ ಕುರುಬ ಬಿ.ಸಿ ಜಾತಿಯ ಗೊಲ್ಲ ಸಮುದಾಯದ ವೆಂಕಟೇಶಲು ಮತ್ತು ಶಿವಮ್ಮ ದಂಪತಿಗಳು ಮತ್ತು ನಿರ್ಮಲಮ್ಮನ ಸ್ವಂತ ಸಹೋದರಿ ಮತ್ತು ಸೋದರ ಮಾವ ಎಂದು ತಿಳಿದು ಬಂದಿದೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರ್ಮಲಮ್ಮ ಮತ್ತು ಆಕೆಯ ಕುಟುಂಬ ಬೇಟೆಯಾಡುವುದು ಮತ್ತು ಜೀವನಾಧಾರಕ್ಕಾಗಿ ದೈನಂದಿನ ಕೂಲಿ ಕೆಲಸವನ್ನು ಅವಲಂಬಿಸಿರುವ ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ವರ್ಗೀಕರಿಸಿರುವ ಚೆಂಚು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.

“ತುಂಡು ಭೂಮಿಯನ್ನು ಪ್ರಬಲ ಕುಟುಂಬಕ್ಕೆ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ, ನನ್ನ ಸುರಕ್ಷತೆಯ ಬಗ್ಗೆ ನನಗೆ ಭಯವಿದೆ. ನನಗೆ ಬೆದರಿಕೆ ಇದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನಿರ್ಮಲಮ್ಮ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಸೆಕ್ಷನ್ 307 (ಕೊಲೆ ಯತ್ನ), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ ), 376 (ಅತ್ಯಾಚಾರ) ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ಜನರು ಮಾಡಿದ ಕೃತ್ಯಗಳು) ಜೊತೆಗೆ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ನಿರ್ಮಲಮ್ಮ ಹೇಳುವ ಪ್ರಕಾರ, “ಆರೋಪಿ ವೆಂಕಟೇಶಲು ಆಕೆಯ ಮಾವನಿಂದ ನಾಲ್ಕು ಎಕರೆ ಜಮೀನು ಖರೀದಿಸಿದ್ದ. ಆದರೆ, ಆತ ಮೊದಲು ಒಪ್ಪಿದ ಬೆಲೆಯ ಅರ್ಧಕ್ಕಿಂತ ಕಡಿಮೆ ಹಣ ನೀಡಿದ್ದ. ಇತ್ತೀಚೆಗೆ, ನಿರ್ಮಲಮ್ಮ ಮತ್ತು ಆಕೆಯ ಪತಿಗೆ ಸೇರಿದ ಎರಡು ಎಕರೆ ಜಮೀನು ಕೂಡ ತನಗೆ ಬಿಟ್ಟು ಕೊಡುವಂತೆ ವೆಂಕಟೇಶಲು ಒತ್ತಾಯಿಸಿದ್ದ. ನಿರ್ಮಲಮ್ಮನ ಪತಿ ಯಾದಯ್ಯ (ಹೆಸರು ಬದಲಾಯಿಸಲಾಗಿದೆ) ಜಮೀನು ಪತ್ರಕ್ಕೆ ಸಹಿ ಹಾಕಲು ಮುಂದಾದಾಗ ನಿರ್ಮಲಮ್ಮ ತಡೆದಿದ್ದರು. ಈ ಕಾರಣಕ್ಕೆ ಆಕೆಗೆ ಚಿತ್ರಹಿಂಸೆ ನೀಡಲಾಗಿದೆ.

ನಿರ್ಮಲಮ್ಮಗೆ ಚಿತ್ರಹಿಂಸೆ ನೀಡಿದ ಪ್ರಕರಣ ತನಿಖೆಯ ನಡುವೆ, ಇತ್ತೀಚೆಗೆ ಮರಣ ಹೊಂದಿದ ಆಕೆಯ ಮಾವನ ಸಮಾಧಿಯಿಂದ ಶವ ಮೇಲೆತ್ತಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ, ಜಮೀನು ಮಾರಾಟ ಮಾಡಿದ ಬಾಕಿ ಹಣ ಕೇಳಿದ್ದಕ್ಕೆ ವೆಂಕಟೇಶಲು ನಮ್ಮ ಕುಟುಂಬದೊಂದಿಗೆ ಜಗಳವಾಡಿ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ನಿರ್ಮಲಮ್ಮನ ಪತಿಯ ಸಹೋದರ ಸತೀಶ್ (ಹೆಸರು ಬದಲಿಸಲಾಗಿದೆ) ಆರೋಪಿಸಿದ್ದಾರೆ. ಆ ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಬಳಿಕ ನಿರ್ಮಲಮ್ಮ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ. ಮೊದಲು ಆಕೆ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವೆಂಕಟೇಶಲು ಮತ್ತು ಶಿವಮ್ಮ ಜೊತೆಗೂಡಿ ನಿರ್ಮಲಮ್ಮಗೆ ಆಕೆಯ ಕುಟುಂಬದ ಹಲವರು ಗುಂಪು ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದಾದ ಬಳಿಕವೂ ನಿರ್ಮಲಮ್ಮ ಭೂಮಿ ಬಿಟ್ಟು ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ವೆಂಕಟೇಶಲು, ನಿರ್ಮಲಮ್ಮನ ಪತಿ ಯಾದಯ್ಯಗೆ 10 ದಿನಗಳ ಕಾಲ ತನ್ನ ಮರಳು ಗಣಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಿದ್ದ. ಈ ವೇಳೆ ಯಾದಯ್ಯಗೆ ಮದ್ಯಪಾನ ಮಾಡಿಸಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಲು ಪ್ರಯತ್ನಿಸಿದ್ದ.

ಜೂನ್ 8 ರಂದು, ನಿರ್ಮಲಮ್ಮ ಅವರನ್ನು ವೆಂಕಟೇಶಲು ತನ್ನ ಜಮೀನಿಗೆ ಕರೆದೊಯ್ದು, ಅಲ್ಲಿ ಆಕೆಗೆ ಥಳಿಸಿದ್ದ. ಅಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದ. ವೈದ್ಯಕೀಯ ವರದಿಗಳ ಪ್ರಕಾರ, ನಿರ್ಮಲಮ್ಮನ ಗುಪ್ತಾಂಗದಲ್ಲಿ ಸುಟ್ಟ ಗಾಯಗಳು ಕಂಡು ಬಂದಿವೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...