ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಜುಲೈ 12) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಬಂಧನದ ಅಗತ್ಯವಿದೆಯೇ? ಎಂದು ಪರಿಶೀಲಿಸಲು
ಕೇಜ್ರಿವಾಲ್ ಅವರ ಅರ್ಜಿಯನ್ನು ವಿಸ್ಕೃತ ಪೀಠಕ್ಕೆ ವರ್ಗಾಯಿಸಿದೆ.
ಜಾಮೀನು ದೊರೆತರೂ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿರುವುದರಿಂದ ಅವರು ಜೈಲಿನಲ್ಲೇ ಇರಲಿದ್ದಾರೆ ಎಂದು ತಿಳಿದು ಬಂದಿದೆ.
ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸುವಾಗ, ಪ್ರಸ್ತುತ ಪೀಠವು ಇದುವರೆಗೆ ಅವರ ಸೆರೆವಾಸವನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಲು ನಿರ್ಧರಿಸಿತು. ಮಧ್ಯಂತರ ಜಾಮೀನಿನ ಆದೇಶವನ್ನು ವಿಸ್ಕೃತ ಪೀಠ ಮಾರ್ಪಡಿಸಬಹುದು ಎಂದು ಪೀಠ ಸ್ಪಷ್ಟಪಡಿಸಿದೆ.
ಇದನ್ನೂ ಓದಿ : ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ


