Homeಮುಖಪುಟಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: 'ಹುಸಿ ಮಣ್ಣಿನ' ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

ಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: ‘ಹುಸಿ ಮಣ್ಣಿನ’ ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

- Advertisement -
- Advertisement -

ಮುಂಬೈನ ಘಾಟ್‌ಕೋಪರ್‌ನಲ್ಲಿ 120×120 ಅಡಿ ಹೋರ್ಡಿಂಗ್ ಅಳವಡಿಸಿದ್ದ ಸ್ಥಳದಲ್ಲಿ ಹುಸಿ ಮಣ್ಣು (ಮೃದುವಾದ ಮಣ್ಣು) ಇದೆ ಎಂದು ಅಲ್ಲಿ ಕಾಮಗಾರಿ ಡನೆಸುವಾಗಲೇ ಕೆಲಸಗಾರರು ಎಚ್ಚರಿಸಿದ್ದರು. ಆದರೆ, ಇದನ್ನು ನಿರ್ಲಕ್ಷಿಸಲಾಗಿದೆ. ಹದಿನಾರು ತಿಂಗಳ ನಂತರ, ಬೃಹತ್ ಜಾಹೀರಾತು ಫಲಕವು ಚಂಡಮಾರುತದ ಸಮಯದಲ್ಲಿ ಕುಸಿದುಬಿದ್ದು, 17 ಜನರು ಸಾವನ್ನಪ್ಪಿ, 74 ಮಂದಿ ಗಾಯಗೊಂಡಿದ್ದರು.

ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಲಾದ 3,299 ಪುಟಗಳ ಆರೋಪಪಟ್ಟಿಯಲ್ಲಿ, ಮುಂಬೈ ಅಪರಾಧ ವಿಭಾಗದ ವಿಶೇಷ ತನಿಖಾ ತಂಡವು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ), ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಉನ್ನತ ಅಧಿಕಾರಿಗಳ ಶಾಮೀಲಾಗಿರುವ ಆರೋಪವನ್ನೂ ಎತ್ತಿ ತೋರಿಸಿದೆ.

ಚಾರ್ಜ್‌ಶೀಟ್ ಪ್ರಕಾರ, ಮರವೊಂದು ಬಿದ್ದಾಗ ಬೃಹತ್ ಜಾಹೀರಾತು ಫಲಕವನ್ನು ಅಳವಡಿಸಲು ಜಾಗ ಅಗೆಯುವಾಗ ಕಾಂಗಾರಿ ನಿರ್ವಾಹಕರು ಮೃದುವಾದ ಮಣ್ಣು ಇರುವುದನ್ನು ಗ್ರಹಿಸಿದ್ದರು. ಮಣ್ಣಿನ ಪರಿಶೀಲನೆಯನ್ನು ಶಿಫಾರಸು ಮಾಡಿದರು, ಇದರಿಂದಾಗಿ ಬೃಹತ್ ರಚನೆಯ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟಡದ ಯೋಜನೆಗಳನ್ನು ಸರಿಹೊಂದಿಸಬಹುದು, ಈ ಪರಿಶೀಲನೆಗೆ 15 ದಿನಗಳು ಬೇಕಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಆದರೆ, ಇಗೋ ಮೀಡಿಯಾ ನಿರ್ದೇಶಕ ಭವೇಶ್ ಭಿಂಡೆ ಮತ್ತು ಮಾಜಿ ನಿರ್ದೇಶಕಿ ಜಾಹ್ನವಿ ಮರಾಠೆ ಅವರಿಗೆ ಕಾಯುವ ತಾಳ್ಮೆ ಇರಲಿಲ್ಲ. ಅವರು ಎಚ್ಚರಿಕೆಯನ್ನು ನಿರ್ಲಕ್ಷಿಸಿದರು ಮತ್ತು ಮಣ್ಣು ತಪಾಸಣೆ ಮಾಡದೆ ಮುಂದುವರೆದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಆಪಾದಿತ ನಿರ್ಲಕ್ಷ್ಯವು ಚಂಡಮಾರುತದ ಸಮಯದಲ್ಲಿ ಅಕ್ರಮ ಜಾಹೀರಾತು ಫಲಕ ಕುಸಿಯಲು ಒಂದು ಕಾರಣವೆಂದು ಪರಿಗಣಿಸಬಹುದು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ಹೇಳಿಕೆಗಳನ್ನು ಒಳಗೊಂಡಿರುವ 100 ಕ್ಕೂ ಹೆಚ್ಚು ಸಾಕ್ಷಿಗಳಲ್ಲಿ ಮಣ್ಣು ಅಗೆಯುವ ಆಪರೇಟರ್ ಕೂಡ ಸೇರಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಐಪಿಎಸ್ ಅಧಿಕಾರಿ ಕ್ವೈಸರ್ ಖಾಲಿದ್ ವಿರುದ್ಧ ಗಂಭೀರ ಆರೋಪಗಳಿವೆ, ಖಾಲಿದ್ ಮಾಜಿ ಜಿಆರ್‌ಪಿ ಕಮಿಷನರ್ ಮತ್ತು ಅವರ ಅಧಿಕಾರಾವಧಿಯಲ್ಲಿ ಹೋರ್ಡಿಂಗ್‌ಗೆ ಅನುಮೋದನೆ ನೀಡಲಾಯಿತು. ಬಿಎಂಸಿ ಪರವಾನಗಿ ಇನ್ಸ್‌ಪೆಕ್ಟರ್ ಸುನೀಲ್ ದಳವಿ. ಹೋರ್ಡಿಂಗ್ ಬಂದ ಪ್ಲಾಟ್ ಅನ್ನು ಜಿಆರ್‌ಪಿಗೆ ಗುತ್ತಿಗೆ ನೀಡಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆಯಿಲ್ಲದೆ ಇಗೋ ಮೀಡಿಯಾಗೆ ಹೋರ್ಡಿಂಗ್ ನೀಡಲು ಖಾಲಿದ್ ಕಾನೂನಿನ ಲೋಪವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಮತ್ತೊಂದೆಡೆ ಅಕ್ರಮ ಸಂಗ್ರಹಣೆ ಕುರಿತು ಇಗೋ ಮೀಡಿಯಾ ಸಂಸ್ಥೆಗೆ ದಳವಿ ನೋಟಿಸ್ ಜಾರಿ ಮಾಡಿದರಾದರೂ ನಂತರ ಹಿಂಪಡೆದಿದ್ದಾರೆ. ಭಿಂಡೆಯವರೊಂದಿಗಿನ ಅವರ ನಿರಂತರ ಸಂಪರ್ಕವು ಪ್ರಶ್ನೆಗಳನ್ನು ಹುಟ್ಟುಹಾಕಿತು.

ಇದನ್ನೂ ಓದಿ; ಜೈಲಿನಲ್ಲೆ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ಎಎಪಿಯಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...