Homeಮುಖಪುಟರಾಜ್ಯಸಭೆಯಲ್ಲಿ 86ಕ್ಕೆ ಕುಸಿದ ಬಿಜೆಪಿಯ ಸದಸ್ಯ ಬಲ

ರಾಜ್ಯಸಭೆಯಲ್ಲಿ 86ಕ್ಕೆ ಕುಸಿದ ಬಿಜೆಪಿಯ ಸದಸ್ಯ ಬಲ

- Advertisement -
- Advertisement -

ನಾಲ್ವರು ನಾಮನಿರ್ದೇಶಿತ ಸದಸ್ಯರಾದ ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯ ಬಲ ಕುಸಿದಿದೆ.

ಬಿಜೆಪಿ ಸದಸ್ಯ ಬಲ 86ಕ್ಕೆ ಹಾಗೂ ಎನ್‌ಡಿಎ ಸದಸ್ಯಬಲ 101ಕ್ಕೆ ಕುಸಿದಿದೆ. 19 ಸ್ಥಾನಗಳು ಖಾಲಿ ಇರುವುದರಿಂದ ರಾಜ್ಯಸಭೆಯ ಸದ್ಯದ ಸದಸ್ಯಬಲ 226ಕ್ಕೆ ತಲುಪಿದೆ.

ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತ ಇಲ್ಲದಿದ್ದರೂ, ಇತರ ಮಿತ್ರ ಪಕ್ಷಗಳ ಏಳು ಮಂದಿ ಸದಸ್ಯರ ಬೆಂಬಲದೊಂದಿಗೆ ಪ್ರಮುಖ ಮಸೂದೆಗಳಿಗೆ ಅನುಮೋದನೆ ಪಡೆಯುತ್ತಾ ಬಂದಿದೆ. ಇದರಲ್ಲಿ ಇಬ್ಬರು ಪಕ್ಷೇತರರು ಮತ್ತು ಮಿತ್ರಪಕ್ಷಗಳಾದ ಎಐಎಡಿಎಂಕೆ ಹಾಗೂ ವೈಎಸ್ಆರ್ ಸಿಪಿಯ ಸದಸ್ಯರು ಸೇರಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಮಿತ್ರಪಕ್ಷಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಖಾಲಿ ಇರುವ ನಾಲ್ಕು ನಾಮನಿರ್ದೇಶನ ಸದಸ್ಯ ಸ್ಥಾನಗಳಿಗೆ ತಕ್ಷಣ ಭರ್ತಿ ಮಾಡುವುದು ಬಿಜೆಪಿಗೆ ಅನಿವಾರ್ಯವಾಗಿದೆ.

ನಿವೃತ್ತರಾದ ನಾಲ್ವರು ಸದಸ್ಯರು ರಾಜ್ಯಸಭೆಗೆ ನಾಮಕರಣಗೊಂಡ ಬಳಿಕ ಅಧಿಕೃತವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ನಾಮನಿರ್ದೇಶಿತ ಸದಸ್ಯರಾಗಿ ಬಿಜೆಪಿ ಸೇರಿರುವ ಮತ್ತೊಬ್ಬ ಸದಸ್ಯರೆಂದರೆ ಗುಲಾಮ್ ಅಲಿ. ಅವರು 2028ರ ಸೆಪ್ಟೆಂಬರ್‌ನಲ್ಲಿ ನಿವೃತ್ತರಾಗಲಿದ್ದಾರೆ.

ರಾಷ್ಟ್ರಪತಿಗಳು 12 ಸದಸ್ಯರನ್ನು ಕೇಂದ್ರದ ಶಿಫಾರಸ್ಸಿನಂತೆ ರಾಜ್ಯಸಭೆಗೆ ನಾಮಕರಣ ಮಾಡುತ್ತಾರೆ. ಈ ಪೈಕಿ ಏಳು ಮಂದಿ ಅಧಿಕೃತವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡಿಲ್ಲವಾದರೂ, ಪ್ರಮುಖ ಮಸೂದೆಗಳ ವಿಚಾರದಲ್ಲಿ ಅವರು ಆಡಳಿತ ಪಕ್ಷದ ಪರ ನಿಲುವು ತಾಳುತ್ತಾರೆ.

ಪ್ರಸ್ತುತ ಮೇಲ್ಮನೆಯಲ್ಲಿ 19 ಸ್ಥಾನಗಳು ಖಾಲಿ ಇದ್ದು, ಇದರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ನಾಲ್ಕು, ಅಸ್ಸಾಂ, ಬಿಹಾರ ಮತ್ತು ಮಹಾರಾಷ್ಟ್ರದಿಂದ ತಲಾ ಎರಡು, ಹರಿಯಾಣ, ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತ್ರಿಪುರಾದಿಂದ ತಲಾ ಒಂದು ಸ್ಥಾನಗಳು ಖಾಲಿ ಇವೆ.

ಇದನ್ನೂ ಓದಿ : ಗವರ್ನರ್ ಬೋಸ್ ಮಾನನಷ್ಟ ಮೊಕದ್ದಮೆ ಪ್ರಕರಣ: ‘ನನ್ನ ಹೇಳಿಕೆಯಲ್ಲಿ ಮಾನಹಾನಿಕರ ಏನೂ ಇಲ್ಲ’ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...