Homeಮುಖಪುಟಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ...

ಪೂಜಾ ಖೇಡ್ಕರ್ ಬಳಿಕ ಈಗ ಮಾಜಿ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಆಯ್ಕೆ ಕುರಿತು ವಿವಾದ ಸೃಷ್ಟಿ

- Advertisement -
- Advertisement -

ತರಬೇತಿ ನಿರತ (ಪ್ರೊಬೇಷನರಿ) ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ಉದ್ಯೋಗ ಪಡೆಯಲು ನಕಲಿ ಅಂಗವೈಕಲ್ಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಆರೋಪದ ನಡುವೆ, ಇದೀಗ ಮತ್ತೊಬ್ಬ ಮಾಜಿ ಅಧಿಕಾರಿಯನ್ನು ಅಂಗವಿಕಲತೆಯ ಮಾನದಂಡದ ಅಡಿಯಲ್ಲಿ ಆಯ್ಕೆ ಮಾಡಿರುವ ಕುರಿತು ಪ್ರಶ್ನೆಗಳು ಎದ್ದಿವೆ.

ನಟನಾಗಲು ಕಳೆದ ವರ್ಷ ರಾಜೀನಾಮೆ ನೀಡಿರುವ 2011 ರ ಬ್ಯಾಚ್ ಐಎಎಸ್ ಅಧಿಕಾರಿ ಅಭಿಷೇಕ್ ಸಿಂಗ್ ಅವರ ನೃತ್ಯ ಮತ್ತು ಜಿಮ್ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಟೀಕೆಗೆ ಒಳಗಾಗಿದ್ದಾರೆ.

ಹಲವಾರು ಬಳಕೆದಾರರು ಅಭಿಷೇಕ್ ಸಿಂಗ್ ಅವರು ಹಂಚಿಕೊಂಡಿರುವ ವಿಡಿಯೋಗಳಿಗೆ ಕಾಮೆಂಟ್ ಮಾಡಿದ್ದು, ಆಡಳಿತ ಹುದ್ದೆಗಳಲ್ಲಿನ ಆಯ್ಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಕಾಪಾಡುವಂತೆ ಆಗ್ರಹಿಸಿದ್ದಾರೆ.

ಯುಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಲ್ಲಿ ರಿಯಾಯಿತಿ ಲಾಭಗಳನ್ನು ಪಡೆದುಕೊಳ್ಳಲು ಸಿಂಗ್ ತನಗೆ ಚಲನಶೀಲತೆ ಅಂಗವೈಕಲ್ಯವಿದೆ ಎಂದು ಹೇಳಿಕೊಂಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಅಭಿಷೇಕ್ ಸಿಂಗ್, ಮೀಸಲಾತಿಯನ್ನು ಬೆಂಬಲಿಸುವುದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ನಾನು ಯಾವುದೇ ಟೀಕೆಯಿಂದ ಪ್ರಭಾವಿತನಾಗಿರದಿದ್ದರೂ ನನ್ನ ಬೆಂಬಲಿಗರು ಕೇಳಿಕೊಂಡಿದ್ದರಿಂದ ಇದೇ ಮೊದಲ ಬಾರಿಗೆ ನನ್ನ ಟೀಕಾಕಾರರಿಗೆ ಉತ್ತರಿಸುತ್ತಿದ್ದೇನೆ. ನಾನು ಮೀಸಲಾತಿಗಳನ್ನು ಬೆಂಬಲಿಸಲು ಆರಂಭಿಸಿದಾಗಿನಿಂದ ಮೀಸಲಾತಿ ವಿರೋಧಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ. ಅವರು ನನ್ನ ಜಾತಿ ಮತ್ತು ಉದ್ಯೋಗವನ್ನು ಪ್ರಶ್ನಿಸುತ್ತಾರೆ. ನಾನು ಪ್ರತಿಯೊಂದನ್ನೂ ಕಠಿಣ ಶ್ರಮ ಮತ್ತು ಧೈರ್ಯದಿಂದ ಸಾಧಿಸಿದ್ದೇನೆ,ಮೀಸಲಾತಿಯಿಂದಲ್ಲ” ಎಂದು ಸಿಂಗ್ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ನಾನು ಯುನೈಟೆಡ್ ಬೈ ಬ್ಲಡ್ ಮತ್ತು ನೋ ಶೇಮ್ ಮೂವ್‌ಮೆಂಟ್‌ನಂತಹ ನನ್ನ ಉಪಕ್ರಮಗಳ ಮೂಲಕ ಸರ್ಕಾರದ ನೆರವಿಲ್ಲದೆ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇನೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿರಬೇಕು ಎಂದು ನಾನು ನಂಬಿದ್ದೇನೆ ಮತ್ತು ಆ ನಿಟ್ಟಿನಲ್ಲಿ ನಾನು ಶ್ರಮಿಸುತ್ತೇನೆ. ನಿಮ್ಮಲ್ಲಿ ಪ್ರತಿಭೆ ಇದೆ ಎಂದು ನೀವು ಭಾವಿಸಿದ್ದರೆ ಸರ್ಕಾರಿ ಉದ್ಯೋಗಗಳಿಗೆ ಪ್ರಯತ್ನಿಸುವುದನ್ನು ನಿಲ್ಲಿಸಿ ಮತ್ತು ವ್ಯವಹಾರ, ಕ್ರೀಡೆ ಅಥವಾ ನಟನೆಯಲ್ಲಿ ಏಳಿಗೆಯನ್ನು ಸಾಧಿಸಿ. ಅಲ್ಲಿ ಯಾವುದೇ ಮಿಸಲಾತಿಯಿಲ್ಲ” ಎಂದಿರುವ ಸಿಂಗ್, ನಾನು ನನ್ನ ಪ್ರತಿಭೆ, ಆತ್ಮವಿಶ್ವಾಸ ಮತ್ತು ಧೈರ್ಯದ ಬಲದಿಂದ ಮುಂದೆ ಸಾಗುತ್ತೇನೆ, ಯಾರದೇ ಕೃಪೆಯಿಂದಲ್ಲ” ಎಂದು ಹೇಳಿದ್ದಾರೆ.

ಪೂಜಾ ಖೇಡ್ಕರ್ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಸೈರನ್ ಬಳಸಿ ವಿವಾದಕ್ಕೆ ಸಿಲುಕಿದ್ದಾರೆ. ಅಲ್ಲದೆ, ಕಿರಿಯ ಅಧಿಕಾರಿಗಳಿಗೆ ಲಭ್ಯವಿಲ್ಲದ ಪ್ರತ್ಯೇಕ ಮನೆ ಮತ್ತು ಕಾರು ಸವಲತ್ತುಗಳ ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. 2023ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.

ಯಪಿಎಸ್‌ಸಿಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಖೇಡ್ಕರ್ ಅವರು ದೃಷ್ಟಿ ಮತ್ತು ಮಾನಸಿಕವಾಗಿ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದರು. ಆದರೆ, ಅದನ್ನು ಖಚಿತಪಡಿಸಲು ಕಡ್ಡಾಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ನಿರಾಕರಿಸಿದ್ದರು.

ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಪೂಜಾ ಖೇಡ್ಕರ್ ತಪ್ಪಿತಸ್ಥರೆಂದು ಕಂಡುಬಂದರೆ ಅವರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ. ಸತ್ಯ ಮರೆಮಾಚಿ ಸುಳ್ಳು ಹೇಳಿರುವ ಆರೋಪಗಳು ಸಾಬೀತಾದರೆ, ಅವರು ಕ್ರಿಮಿನಲ್ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...