ಉತ್ತರ ಪ್ರದೇಶದ ಗೊಂಡಾ ಬಳಿ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಈ ಸುದ್ದಿ ಬರೆಯುವ ಹೊತ್ತಿಗೆ (4:50 pm) ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದರು ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗೊಂಡಾ ಮತ್ತು ಜಿಲಾಹಿ ನಡುವಿನ ಪಿಕೌರಾದಲ್ಲಿ ಈ ಘಟನೆ ನಡೆದಿದೆ.
ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಅಪಾಯದಿಂದ ಪಾರಾದ ಪ್ರಯಾಣಿಕರು ತಮ್ಮ ಲಗೇಜ್‌ಗಳೊಂದಿಗೆ ರೈಲ್ವೆ ಟ್ರ್ಯಾಕ್‌ನ ಬದಿಗಳಲ್ಲಿ ನಿಂತಿರುವ ವಿಡಿಯೋಗಳು ಲಭ್ಯವಾಗಿವೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು.
15 ಆಂಬ್ಯುಲೆನ್ಸ್‌ಗಳೊಂದಿಗೆ 40 ಸದಸ್ಯರ ವೈದ್ಯಕೀಯ ತಂಡವು ಘಟನಾ ಸ್ಥಳಕ್ಕೆ ತಲುಪಿದ್ದು, ಹೆಚ್ಚಿನ ಆಂಬ್ಯುಲೆನ್ಸ್‌ಗಳು ಆಗಮಿಸುತ್ತಿವೆ ಎಂದು ವರದಿಗಳು ಹೇಳಿವೆ.
VIDEO | A few bogies of Dibrugarh Express derailed near UP's Gonda railway station earlier today. Details awaited. pic.twitter.com/SfJTfc01Wp
— Press Trust of India (@PTI_News) July 18, 2024
ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಗೊಂಡಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳದಲ್ಲಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ ನಾಲ್ಕು ತಂಡಗಳನ್ನು ನಿಯೋಜಿಸಲಾಗಿದೆ.
ರೈಲಿನ 12 ಬೋಗಿಗಳ ಪೈಕಿ ಎಸಿ ಕಂಪಾರ್ಟ್‌ಮೆಂಟ್‌ನ ನಾಲ್ಕು ಬೋಗಿಗಳು ಜಿಲಾಹಿ ರೈಲ್ವೆ ನಿಲ್ದಾಣದಿಂದ ಕೆಲ ಕಿಲೋಮೀಟರ್‌ಗಳಷ್ಟು ದೂರದಲ್ಲಿ ಹಳಿ ತಪ್ಪಿವೆ. ಘಟನೆಯಿಂದ ಈ ಮಾರ್ಗದ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದ್ದು, ಬೇರೆ ಮಾರ್ಗಗಳನ್ನು ಸೂಚಿಸಲಾಗಿದೆ ಎಂದು ಈಶಾನ್ಯ ರೈಲ್ವೆಯ ಸಿಪಿಆರ್‌ಒ ಪಂಕಜ್ ಸಿಂಗ್ ಹೇಳಿದ್ದಾಗಿ ಎನ್‌ಡಿವಿ ವರದಿ ಮಾಡಿದೆ.
ಇದನ್ನೂ ಓದಿ : ‘ಮಾನ್ಸೂನ್ ಆಫರ್: 100 ತನ್ನಿ, ಸರ್ಕಾರವನ್ನು ರಚಿಸಿ..’; ಕುತೂಹಲ ಮೂಡಿಸಿದ ಅಖಿಲೇಶ್ ಪೋಸ್ಟ್


